ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಅಥವಾ ಜೋಗ ಜಲಪಾತ ಪ್ರವಾಸಿಗರ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್ 15ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರ ಮತ್ತು ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆ ಆಗಬಾರದು ಎಂದು ಪ್ರವೇಶ ನಿರ್ಭಂದಿಸಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-251444 ನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ಜೋಗ ಜಲಪಾತದಲ್ಲಿ ಸಮಗ್ರ ಅಭಿವೃದ್ಧಿಗೆ 150 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಸದ್ಯ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ. ಅಲ್ಲದೆ, ಕಾಮಗಾರಿ ನಡೆಯುತ್ತಿರುವುದರಿಂದ ಪ್ರವಾಸಿಗರು ದಿನನಿತ್ಯ ಕಿರಿಕಿರಿ ಅನುಭವಿಸತ್ತಿದ್ದು, ಟ್ರಾಫಿಕ್ ಜಾಮ್ ಸೇರಿ ವಿವಿಧ ಸಮಸ್ಯೆಗಳು ಎದುರಿಸುವಂತಾಗಿದೆ. ಹೀಗಾಗಿ ಪ್ರವಾಸಿರಗರಿಗೆ ತೊಂದರೆಯಾಗದಂತೆ ಜ.1 ರಿಂದ ಮಾ.15ರ ವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ನಿರ್ಭಂದಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.