ಸಂಗ್ರಹ ಚಿತ್ರ 
ರಾಜ್ಯ

ಹೋಟೆಲ್, ಬೇಕರಿ ಉದ್ಯಮಿಗಳ ಮೇಲೆ ಅಪರಾಧ ಕೃತ್ಯ ಹೆಚ್ಚಳ: ಜಿ.ಕೆ ಶೆಟ್ಟಿ ಕಳವಳ

ಮಾಧ್ಯಮಗಳಲ್ಲಿ ವರದಿಯಾಗುತ್ತಿರುವಂತೆ ಹೋಟೆಲ್ ಮತ್ತು ಬೇಕರಿ ಮಾಲೀಕರು ಹಫ್ತಾ ವಸೂಲಿಗೆ ಸುಲಭ ಬಲಿಪಶುಗಳಾಗುತ್ತಿದ್ದಾರೆ.

ಬೆಂಗಳೂರು: ರಾಜ್ಯದೆಲ್ಲೆಡೆ ಹೋಟೆಲ್ ಹಾಗೂ ಬೇಕರಿ ಉದ್ಯಮಿಗಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಕೊಲೆ, ಹಲ್ಲೆ ಮತ್ತಿತರ ಅಪರಾಧಿ ಕೃತ್ಯಗಳ ಬಗ್ಗೆ ಕರ್ನಾಟಕ ರಾಜ್ಯ ಹೋಟೆಲ್ ಗಳ ಸಂಘ ಕಳವಳ ವ್ಯಕ್ತಪಡಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಜಿ ಕೆ ಶೆಟ್ಟಿ ಅವರು, ಇಂತಹ ಅಪರಾಧಿ ಕೃತ್ಯಗಳನ್ನು ತಡೆಗಟ್ಟಲು ರಾಜ್ಯ ಸರಕಾರ ಹಾಗೂ ಪೊಲೀಸ್ ಇಲಾಖೆ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮಂಡ್ಯ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಕೆಆರ್‌ಎಸ್ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ಬೇಕರಿ ಮಾಲೀಕ ಚೇತನ್ ಅವರನ್ನು ಇತ್ತೀಚಿಗೆ ಹಾಡುಹಗಲೇ ರೌಡಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿರುವ ಘಟನೆ ಹೋಟೆಲ್ ಮಾಲೀಕರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ.

ಮಾಧ್ಯಮಗಳಲ್ಲಿ ವರದಿಯಾಗುತ್ತಿರುವಂತೆ ಹೋಟೆಲ್ ಮತ್ತು ಬೇಕರಿ ಮಾಲೀಕರು ಹಫ್ತಾ ವಸೂಲಿಗೆ ಸುಲಭ ಬಲಿಪಶುಗಳಾಗುತ್ತಿದ್ದಾರೆ. ಒಂದೊಮ್ಮೆ ಹಫ್ತಾ ನೀಡದಿದ್ದರೆ ಅವರ ಮೇಲೆ ದೈಹಿಕ ಹಲ್ಲೆ, ಕೊಲೆ ಬೆದರಿಕೆ ಒಡ್ಡಲಾಗುತ್ತಿದೆ. ಕೊಲೆಯಂತಹ ಹೀನ ಕೃತ್ಯಗಳ ಮೂಲಕ ಹೋಟೆಲ್ ಮತ್ತು ಬೇಕರಿ ಮಾಲೀಕರಲ್ಲಿ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ.

ಹೋಟೆಲ್ ಮತ್ತು ಬೇಕರಿ ಮಾಲೀಕರು ಸ್ಥಳೀಯ ಸಂಸ್ಥೆಗಳಿಗೆ, ರಾಜ್ಯ ಸರಕಾರಕ್ಕೆ, ಕೇಂದ್ರ ಸರಕಾರಕ್ಕೆ ಟ್ರೇಡ್ ಲೈಸೆನ್ಸ್, ಜಿಎಸ್‌ಟಿ ಹೀಗೆ ನಾನಾ ರೂಪದಲ್ಲಿ ಪ್ರತಿವರ್ಷ ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುತ್ತಿದ್ದಾರೆ. ಆ ಮೂಲಕ ದೇಶ ಕಟ್ಟುವ ಕಾಯಕದಲ್ಲಿ ತೊಡಗಿದ್ದಾರೆ. ಸ್ಥಳೀಯವಾಗಿ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ ಮೂಲಕ ದೇಶದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಆದರೂ ಅವರ ಜೀವಕ್ಕೆ ರಕ್ಷಣೆ ಇಲ್ಲದಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಈ ಸಂಬಂಧ ಗೃಹ ಸಚಿವ ಡಾ. ಜಿ ಪರಮೇಶ್ವರ ಆವರಿಗೆ ಮನವಿ ಪತ್ರವನ್ನು ಸಲ್ಲಿಸಲಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಖಚಿತಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸಂಘದ ಎಲ್ಲಾ ಸದಸ್ಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ. ಇದೇ ವೇಳೆ ಸಂತ್ರಸ್ತ ವ್ಯಕ್ತಿಗೆ ನೆರವಿಗೆ ಧಾವಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT