ಹೊಳೆನರಸೀಪುರ ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ 
ರಾಜ್ಯ

ಪಾನಿಪುರಿ, ಗೋಬಿ ಅಂಗಡಿಯವರೇ ನಮಗಿಂತ ಸುಖವಾಗಿದ್ದಾರೆ: ಹೊಳೆನರಸೀಪುರ ತಹಶೀಲ್ದಾರ್‌!

ನಾನು ಒಬ್ಬ ತಹಶೀಲ್ದಾರ್, ಒಂದು ತಾಲ್ಲೂಕಿನ ಆಡಳಿತದ ಮುಖ್ಯಸ್ಥನಾಗಿದ್ದೇನೆ. ಈಗ ನನಗೆ ಸರ್ಕಾರಿ ನೌಕರಿನೇ ಬೇಡ ಎನ್ನವಂತಾಗಿದೆ.

ಹೊಳೆನರಸೀಪುರ: ಪಾನಿಪುರಿ, ಗೋಬಿ ಅಂಗಡಿಯವರೇ ನಮಗಿಂತ ಸುಖವಾಗಿದ್ದಾರೆಂದು ಸರಕಾರಿ ಕಚೇರಿಗಳ ಕಾರ್ಯವೈಖರಿ ಹಾಗೂ ಅಧಿಕಾರಿಗಳ ಮೇಲಿನ ಒತ್ತಡದ ವಿರುದ್ಧ ಹೊಳೆನರಸೀಪುರ ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಒಬ್ಬ ತಹಶೀಲ್ದಾರ್, ಒಂದು ತಾಲ್ಲೂಕಿನ ಆಡಳಿತದ ಮುಖ್ಯಸ್ಥನಾಗಿದ್ದೇನೆ. ಈಗ ನನಗೆ ಸರ್ಕಾರಿ ನೌಕರಿನೇ ಬೇಡ ಎನ್ನವಂತಾಗಿದೆ. ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿರುವವರು ಸುಖವಾಗಿ ಜೀವನ ಮಾಡುತ್ತಾರೆ. ಅವರಿಗೆ ಅಷ್ಟು ಸಮಾಧಾನ, ನೆಮ್ಮದಿ ಇದೆ. ಹೆಂಡತಿ, ಮಕ್ಕಳ ಜೊತೆ ಕಾಲ ಕಳೆಯುತ್ತಾನೆ. ಹೆಂಡತಿ, ಮಕ್ಕಳನ್ನು ಊರಿಗೆ, ಎಲ್ಲಿ ಬೇಕಾದರೂ ಕರೆದುಕೊಂಡು ಹೋಗುತ್ತಾನೆ. ದುರದೃಷ್ಟವಶಾತ್ ನಮ್ಮ ಕುಟುಂಬವನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಲು ಆಗುತ್ತಿಲ್ಲ. ನಮಗೆ ಬರೀ ಒತ್ತಡ, ಒತ್ತಡ, ಒತ್ತಡ, ಒತ್ತಡ ಎಂದು ತಮ್ಮ ನೋವುನ್ನು ಹೊರಹಾಕಿದ್ದಾರೆ,

ಶಾಸಕಾಂಗ ಶಾಸನಗಳನ್ನು ಮಾಡಿಕೊಳ್ಳುತ್ತಾರೆ. ಅವುಗಳನ್ನು ಕಾರ್ಯರೂಪಕ್ಕೆ ತರುವುದು ನಮ್ಮ ಕೆಲಸ. ಎಲ್ಲಾ ಇಲಾಖೆಗಳ ಸವಲತ್ತುಗಳನ್ನು ಎಲ್ಲರಿಗೂ ತಲುಪಿಸಬೇಕು. ಇತ್ತೀಚೆಗೆ ಮೊಬೈಲ್ ಬಂದಿದೆ, ಅದರಲ್ಲಿ ನಮ್ಮ ಪ್ರೊಗ್ರಾಸ್ ವೀಕ್ಷಣೆ ಮಾಡುತ್ತಾರೆ. ಶೋಕಾಸ್ ನೋಟೀಸ್ ಕೊಡುತ್ತಾರೆ, ಒತ್ತಡ ಹೇರುತ್ತಾರೆ, ವರ್ಕ್ ಆಫ್ ಲೋಡ್ ಜಾರಿ ಮಾಡುತ್ತಾರೆ, ವಾಟ್ಸಪ್ ಗ್ರೂಪ್ ಮಾಡುತ್ತಾರೆ, ಸಂಜೆಯೊಳಗೆ ನಾವು ವರದಿ ಕೊಡಬೇಕು. ಅಷ್ಟು ಚಿತ್ರಹಿಂಸೆ ಆಗುತ್ತಿದೆ ಎಂದಿದ್ದಾರೆ.

ಅವೈಜ್ಞಾನಿಕವಾಗಿ ನಮಗೆ ಟಾರ್ಗೆಟ್ ಕೊಡುತ್ತಿದ್ದಾರೆ. ಕಾಲಾವಕಾಶ ಕೊಟ್ಟರೆ ಕೆಲಸ ಮಾಡುತ್ತೇವೆ. ಇಪ್ಪತ್ತೈದು ಕೆಲಸ ಕೊಟ್ಟು ಕಡಿಮೆ ಅವಧಿ ನೀಡಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಇದನ್ನು ಸಮರ್ಥವಾಗಿ ಹೇಳುವ ಧೈರ್ಯವಿಲ್ಲ. ಸಮರ್ಪಕವಾಗಿ ಕೆಲಸ ಕೊಡಿ ನಾವು ಮಾಡುತ್ತೇವೆ ಎಂದು ಹೇಳುವ ಧೈರ್ಯವಿಲ್ಲದಂತಾಗಿದೆ. ಎಷ್ಟು ನೌಕರರು ತಪ್ಪು ಮಾಡದೆ ಬಲಿಪಶು ಆಗುತ್ತಿದ್ದಾರೆ. ಉಗುರಷ್ಟು ಮಾಡಿದ ತಪ್ಪಿಗೆ ಕೊಡಲಿಯಷ್ಟು ಶಿಕ್ಷೆ ನೀಡುತ್ತಿದ್ದಾರೆ. ಏಕಾಏಕಿ ಎಫ್‌ಐಆರ್ ಮಾಡಿ ಅವರ ಮನೆ ಹಾಳು ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಮೊದಲು ಶಿಕ್ಷಕ ವೃತ್ತಿಗೆ ಬಾರಿ ಗೌರವ ಇತ್ತು. ಈಗ ಶಿಕ್ಷಕ ವೃತ್ತಿ ಮಾಡಲು ಕಷ್ಟ. ಐದು ರೂಪಾಯಿ ಮೊಟ್ಟೆಗೆ, ಏಳು ರೂಪಾಯಿ ಆದರೂ ಟೀಚರ್ ಕೊಡಬೇಕು. ಮೊಟ್ಟೆ ಸೈಜ್ ನೋಡಬೇಕು, ಚಿಕ್ಕಿ ಬೇರೆ. ಇಷ್ಟು ಒತ್ತಡದಲ್ಲಿ ಬೇಯುತ್ತಿದ್ದೇವೆ. ಆಧುನಿಕತೆ ಜಾಸ್ತಿ ಆದಂತೆ ತಲೆನೋವು ಕೂಡ ಜಾಸ್ತಿ ಆಗುತ್ತಿದೆ.

ನಾಳೆಗೆ ಕೆಲಸ ಮಾಡಬೇಕು ಅಂದರೆ ಆಗಲ್ಲ. ಸರ್ಕಾರಿ ‌ನೌಕರರು ಹೈರಾಣಾಗಿ ಹೋಗಿದ್ದಾರೆ. ಬಿಪಿ, ಶುಗರ್, ಕಿಡ್ನಿ, ಲಿವರ್ ಎಲ್ಲಾ ಹೋಗಿದೆ. ಸಮರ್ಥವಾದ ರೀತಿಯಲ್ಲಿ ಹೇಳೋಣ, ಎದೆಯುಬ್ಬಿಸಿ ಮಾತನಾಡಬೇಕು. ಎಷ್ಟೇ ಮೇಲ್ಪಟ್ಟ ಅಧಿಕಾರಿಯಾದರೂ ಗೌರವಕೊಟ್ಟು ಎದೆಕೊಟ್ಟು ಮಾಡಬೇಕು. ಇಂತಹ ಪರಿಸ್ಥಿತಿಯಿಂದ ನೌಕರರನ್ನು ಹೊರತರಲು ಸಂಘಗಳು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ಸಂಘಗಳು ಇಲ್ಲದಿದ್ದರೆ ಸರ್ಕಾರಿ ನೌಕರರು ಶೋಷಣೆಗೆ ಒಳಗಾಗುತ್ತಿದ್ದರು. ಶೋಷಣೆಯನ್ನು ತಪ್ಪಿಸಲು ಸಂಘವು ನಿರಂತರ ಹೋರಾಡಬೇಕು. ನಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಬೇಕು ಎಂದು ತಿಳಿಸಿದ್ದಾರೆ.

ತಹಶೀಲ್ದಾರ್ ಅವರ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ ಕೃಷ್ಣಮೂರ್ತಿ ಅವರು ಅಸಮಾಧಾನಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT