ಸಚಿವ ದಿನೇಶ್‌ ಗುಂಡೂರಾವ್‌ 
ರಾಜ್ಯ

ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ, ಭರ್ತಿಗೆ ಶೀಘ್ರದಲ್ಲೇ ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಇಲಾಖೆಯ ಮುಖಾಂತರ ಸೇವಾನಿರತ ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಬರುವ ತಜ್ಞ ವೈದ್ಯರನ್ನು ತಜ್ಞತ ಹುದ್ದೆಗೆ ನೇಮಿಸಲಾಗುತ್ತಿದೆ.

ಬೆಳಗಾವಿ: ಆರೋಗ್ಯ ಇಲಾಖೆಯಲ್ಲಿ ಮಂಜೂರಾದ 69,915 ಹುದ್ದೆಗಳ ಪೈಕಿ 32,870 ಹುದ್ದೆಗಳು ಖಾಲಿ ಉಳಿದಿದ್ದು, ಹುದ್ದೆ ಭರ್ತಿಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎಂ.ಜಿ. ಮೂಳೆ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸುಮಾರು 4,000 ಗ್ರೂಪ್ ಡಿ ಸಿಬ್ಬಂದಿಯನ್ನು ಹೊರಗುತ್ತಿಗೆ ಮೂಲಕ ನೇಮಿಸಿಕೊಳ್ಳಲಾಗಿದೆ, ಆದರೆ ಸುಮಾರು 7,000 ಹುದ್ದೆಗಳು ಖಾಲಿ ಉಳಿದಿವೆ. ಹೆಚ್ಚುವರಿಯಾಗಿ, 13,448 ಉದ್ಯೋಗಿಗಳು ಪ್ರಸ್ತುತ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ (NRHM) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ ಮತ್ತು ಗ್ರೂಪ್ A ನಿಂದ ಗ್ರೂಪ್ D ವರೆಗೆ ಒಟ್ಟು 18,048 ವ್ಯಕ್ತಿಗಳನ್ನು ಗುತ್ತಿಗೆಯ ಮೇಲೆ ನೇಮಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 1,500 ಹುದ್ದೆಗಳನ್ನು ತುಂಬಲಾಗುತ್ತಿದೆ.

ರಾಜ್ಯದಲ್ಲಿ ಖಾಲಿಯಿರುವ ತಜ್ಞ ವೈದ್ಯರನ್ನು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಕೆಲವು ಷರತ್ತಿಗೊಳಪಟ್ಟು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಇಲಾಖೆಯ ಮುಖಾಂತರ ಸೇವಾನಿರತ ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಬರುವ ತಜ್ಞ ವೈದ್ಯರನ್ನು ತಜ್ಞತ ಹುದ್ದೆಗೆ ನೇಮಿಸಲಾಗುತ್ತಿದೆ. ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಒಂದು ವರ್ಷದ ಕಡ್ಡಾಯ ಸೇವೆಗಾಗಿ ಬರುವ ವೈದ್ಯ ಅಭ್ಯರ್ಥಿ/ತಜ್ಞ ವೈದ್ಯ ಅಭ್ಯರ್ಥಿಗಳನ್ನು ವೈದ್ಯರ/ತಜ್ಞರ ಹುದ್ದೆಗಳಿಗೆ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಇಲಾಖೆಯಲ್ಲಿ ಖಾಲಿಯಿರುವ 120 ತಜ್ಞ ವೈದ್ಯರು ಹಾಗೂ 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮೂಲಕ ರೋಗಿಗಳಿಗೆ ಅಡಚಣೆಯಾಗದಂತೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಫಾರ್ಮಸಿ ಅಧಿಕಾರಿಯ 400 ಹುದ್ದೆ, ಕಿರಿಯ ವೈದ್ಯಾಧಿಕಾರಿ, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಯ 150 ಹುದ್ದೆ, ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿಯ 8 ಹುದ್ದೆಗಳನ್ನು ನೇರ ನೇಮಕಾತಿಯಡಿ ಭರ್ತಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಪ್ರಸ್ತುತ ಅಭ್ಯರ್ಥಿಗಳ ಮೂಲ ದಾಖಲೆ ಪರಿಶೀಲನೆಯಲ್ಲಿದೆ. ಇಲಾಖೆಯಲ್ಲಿ ಖಾಲಿ ಇರುವ 200 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹಾಗೂ 400 ಫಾರ್ಮಸಿ ಅಧಿಕಾರಿಗಳನ್ನು ನೇರ ನೇಮಕಾತಿಯಡಿ ಭರ್ತಿ ಮಾಡುವವರೆಗೆ ಜಿಲ್ಲಾ ಮಟ್ಟದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅನುಮತಿ ನೀಡಲಾಗಿದೆ. ಕಲ್ಯಾಣ ಕರ್ನಾಟಕ ವೃಂದದಲ್ಲಿನ ಖಾಲಿಯಿರುವ ಒಟ್ಟು 320 ವಿವಿಧ ಅರೆ ವೈದ್ಯಕೀಯ ಹುದ್ದೆಗಳನ್ನು ವಿಶೇಷ ನೇಮಕಾತಿ ಸಮಿತಿ ಮೂಲಕ ಭರ್ತಿ ಮಾಡಲು ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಕಾರ್ಯ ಪೂರ್ಣಗೊಂಡಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ಹಂತದಲ್ಲಿದೆ.

ಕಲ್ಯಾಣ ಕರ್ನಾಟಕ ವೃಂದದಲ್ಲಿನ ಸಹಾಯಕ ಕೀಟ ಶಾಸ್ತ್ರಜ್ಞರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದು, ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಖಾಲಿಯಿರುವ ಹುದ್ದೆಯನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ 9871 ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆಯಲ್ಲಿದ್ದು, ಆರ್ಥಿಕ ಇಲಾಖೆಯಿಂದ ಅನುಮೋದನೆ ನೀಡಿದ ನಂತರ ಈ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿದಿ ನೀಡಿದರು.

ರಾಜ್ಯದಲ್ಲಿ ಪ್ರತಿವರ್ಷ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2020–21ರಲ್ಲಿ ಶೇ 35ರಷ್ಟಿದ್ದ ಪ್ರಮಾಣ 2022–23ಕ್ಕೆ ಶೇ 38ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ಶೇ 46ರಷ್ಟಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ 91ರಷ್ಟು ಸಿಸೇರಿಯನ್‌ ಹೆರಿಗೆ ಮಾಡಲಾಗುತ್ತಿದೆ. ಹೆಚ್ಚು ಆದಾಯ ಬರುತ್ತದೆ ಮತ್ತು ಸುಲಭವಾಗಿ ಮಾಡಬಹುದು ಎಂಬ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳಲ್ಲಿ ಸಿಸೇರಿಯನ್‌ ಹೆರಿಗೆಗಳನ್ನೇ ಹೆಚ್ಚು ಮಾಡುತ್ತಿದ್ದಾರೆ. ತಾಯಿ ಮತ್ತು ಮಗುವಿನ ಆರೋಗ್ಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ. ಬಸುರಿಯರನ್ನು ಸಹಜ ಹೆರಿಗೆ ಮಾಡಿಸಿಕೊಳ್ಳಲು ಮಾನಸಿಕವಾಗಿ ಸಜ್ಜುಗೊಳಿಸಬೇಕಿದೆ. ಇದಕ್ಕಾಗಿ ನೂತನ ಕಾರ್ಯಕ್ರಮ ಜಾರಿಗೊಳಿಸುವ ಕುರಿತು ಈಗಾಗಲೇ ಚರ್ಚೆ ನಡೆದಿದೆ ಸಚಿವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್