ಸಂಗ್ರಹ ಚಿತ್ರ 
ರಾಜ್ಯ

ಆಸ್ಪತ್ರೆ ಶೌಚಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ: ನೇಪಾಳ ಮೂಲದ ಜೋಡಿ ಬಂಧನ

ನ.24ರಂದು ದಯಾನಂದ ಸಾಗರ ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿತ್ತು. ಆಗ ತಾನೆ ಹುಟ್ಟಿದ ಮಗುವನ್ನ ಟಾಯ್ಲೆಟ್ ಕಮೋಡ್‍ಗೆ ಹಾಕಿ ಆರೋಪಿಗಳು ಫ್ಲಶ್ ಮಾಡಿದ್ದರು.

ಬೆಂಗಳೂರು: ರಾಮನಗರದ ದಯಾನಂದ ಸಾಗರ ಆಸ್ಪತ್ರೆಯ ಶೌಚ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಇಬ್ಬರು ಆರೋಪಿಗಳನ್ನು ಹಾರೋಹಳ್ಳಿ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.

ಅಮೃತಾ ಕುಮಾರಿ (20) ಮತ್ತು ಸುರೇಂದ್ರ ಮೆಹ್ರಾ (21) ಬಂಧಿತ ಆರೋಪಿಗಳು. ತನಿಖೆಯ ಆರಂಭದಲ್ಲಿ ಆರೋಪಿಗಳು ಇಬ್ಬರೂ ವಿವಾಹಿತರು ಎಂದು ಹೇಳಿಕೊಂಡಿದ್ದರು. ನಂತರ ಇಬ್ಬರೂ ಅವಿವಾಹಿತರು ಎಂದು ತಿಳಿದುಬಂದಿದ್ದು, ಕಳೆದ ಎರಡು ವರ್ಷಗಳಿಂದ ಒಟ್ಟಿಗೆ ವಾಸವಿದ್ದರು ಎಂದು ತಿಳಿದುಬಂದಿದೆ.

ಅಮೃತ ಮತ್ತು ಸುರೇಂದ್ರ ಇಬ್ಬರೂ ಹಾರೋಹಳ್ಳಿಯ ಕಾರ್ಖಾನೆಯೊಂದರಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ವಿಚಾರಣೆ ವೇಳೆ ಯುವತಿ ಗರ್ಭಾವಸ್ಥೆಯಲ್ಲಿದ್ದಾಗಲೇ ಸಮಸ್ಯೆಗಳಾಗಿತ್ತು. ತೀವ್ರ ಹೆರಿಗೆ ನೋವು ಹಾಗೂ ಅತೀವ್ರ ರಕ್ತಸ್ರಾವವಾಗುತ್ತಿತ್ತು. ಹೊಟ್ಟೆಯಲ್ಲಿದ್ದಾಗಲೇ ಮಗು ಸತ್ತು ಹೋಗಿತ್ತು. ಮಗುವನ್ನ ಕೊಲ್ಲುವ ಉದ್ದೇಶ ಇರಲಿಲ್ಲ ಎಂದು ಹೇಳಿದ್ದಾಳೆ.

ನ.24ರಂದು ದಯಾನಂದ ಸಾಗರ ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿತ್ತು. ಆಗ ತಾನೆ ಹುಟ್ಟಿದ ಮಗುವನ್ನ ಟಾಯ್ಲೆಟ್ ಕಮೋಡ್‍ಗೆ ಹಾಕಿ ಆರೋಪಿಗಳು ಫ್ಲಶ್ ಮಾಡಿದ್ದರು. ಬಳಿಕ ಅಲ್ಲಿಂದ ಪರಾರಿಯಾಗಿದ್ದರು. ಶೌಚಾಲಯ ಬ್ಲಾಕ್ ಆಗಿದ್ದ ಪರಿಣಾಮ ಆಸ್ಪತ್ರೆ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಶೌಚಗುಂಡಿಯಲ್ಲಿ ಮಗು ಪತ್ತೆಯಾಗಿತ್ತು. ಈ ಸಂಬಂಧ ಹಾರೋಹಳ್ಳಿ ಪೊಲೀಸ್ ಠಾಣೆಗೆ ದಯಾನಂದ ಸಾಗರ ಆಸ್ಪತ್ರೆ ವೈದ್ಯರು ದೂರು ದಾಖಲಿಸಿದ್ದರು. ಪ್ರಕರಣ ತನಿಖೆ ನಡೆಸಿದ್ದ ಪೊಲೀಸರು ಆಸ್ಪತ್ರೆಯ ಸಿಸಿಟಿವಿ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಇಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆಗಳು ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪರಸ್ಪರ ನಂಬಿಕೆ, ಗೌರವದ ಆಧಾರದ ಮೇಲೆ ಸಂಬಂಧ ಮುಂದುವರಿಸಲು ಬದ್ಧ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಪ್ರಧಾನಿ ಮೋದಿ

SCO ಶೃಂಗಸಭೆ: ಮೋದಿ ಭೇಟಿ ಹಿನ್ನೆಲೆ, ಅಮೆರಿಕದ ಸುಂಕಾಸ್ತ್ರ ವಿರುದ್ಧ ರಷ್ಯಾ ಅಧ್ಯಕ್ಷ ಪುಟಿನ್ ಕಿಡಿ! ಹೇಳಿದ್ದು ಏನು?

Pepsi To McDonald: ಸುಂಕ ಸಂಘರ್ಷದ ನಡುವೆ ಅಮೆರಿಕದ ದೈತ್ಯ ಕಂಪನಿಗಳಿಗೆ ಭಾರತದಲ್ಲಿ #Boycott ಬಿಸಿ!

SCO ಶೃಂಗಸಭೆ: ಪುಟಿನ್ ಭೇಟಿಗೂ ಮುನ್ನ ಉಕ್ರೇನ್ ಜೊತೆ ಮೋದಿ ಮಾತು; ರಷ್ಯಾಕ್ಕೆ ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ!

US President: ಅನಾರೋಗ್ಯದ ವದಂತಿ, ಕೆಲವು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸದ ಡೊನಾಲ್ಡ್ ಟ್ರಂಪ್!

SCROLL FOR NEXT