ಸಾಂದರ್ಭಿಕ ಚಿತ್ರ 
ರಾಜ್ಯ

ರಾಯಚೂರು: ಲಾರಿ ಪಲ್ಟಿಯಾಗಿ ಘೋರ ದುರಂತ; ಮೂವರು PWD ಅಧಿಕಾರಿಗಳು ದಾರುಣ ಸಾವು

ಜವಳಗೇರಾದಲ್ಲಿ ಕಚೇರಿ ಕೆಲಸ ಮುಗಿಸಿಕೊಂಡು ಸಿಂಧನೂರಿಗೆ ಬಂದು, ಪಿಡಬ್ಲ್ಯೂಡಿ ಕ್ಯಾಂಪ್​​​ ನ ಡಾಲರ್ಸ್ ಕಾಲೋನಿಗೆ ತೆರಳುವ ಮುಖ್ಯರಸ್ತೆಯ ಬಳಿ ಬೈಕ್​ ನಿಲ್ಲಿಸಿಕೊಂಡು ಮೂವರು ಮಾತನಾಡುತ್ತಾ ನಿಂತಿದ್ದರು.

ರಾಯಚೂರು : ಲಾರಿ ಪಲ್ಟಿಯಾಗಿ ರಸ್ತೆ ಬದಿಯಲ್ಲಿ ನಿಂತವರ ಮೇಲೆ ಚೀಲಗಳು ಬಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ರಾಯಚೂರಿನ ಸಿಂಧನೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಸಿಂಧನೂರಿನ ಪಿಡಬ್ಲ್ಯೂಡಿ ಸಮೀಪ ಡಾಲರ್ಸ್ ಕಾಲೋನಿ ಕ್ರಾಸ್ ಬಳಿ ದುರ್ಘಟನೆ ಜರುಗಿದೆ.

ಜವಳಗೇರಾ ಉಪವಿಭಾಗದ ಕಿರಿಯ ಎಂಜಿನಿಯರ್ ಗಳಾದ ಮಲ್ಲಿಕಾರ್ಜುನ (29), ಶಿವರಾಜು (28) , ಮೆಹಬೂಬ (30) ಎಂಬುವವರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಶಿವರಾಜ್ ಹಾಗೂ ಮಲ್ಲಿಕಾರ್ಜುನ ಲಿಂಗಸುಗೂರು ತಾಲೂಕಿನ ಮಹೆಬೂಬ್ ಸಿಂಧನೂರು ಪಟ್ಟಣದವರು ಎಂದು ತಿಳಿದು ಬಂದಿದೆ.

ಜವಳಗೇರಾದಲ್ಲಿ ಕಚೇರಿ ಕೆಲಸ ಮುಗಿಸಿಕೊಂಡು ಸಿಂಧನೂರಿಗೆ ಬಂದು, ಪಿಡಬ್ಲ್ಯೂಡಿ ಕ್ಯಾಂಪ್​​​ ನ ಡಾಲರ್ಸ್ ಕಾಲೋನಿಗೆ ತೆರಳುವ ಮುಖ್ಯರಸ್ತೆಯ ಬಳಿ ಬೈಕ್​ ನಿಲ್ಲಿಸಿಕೊಂಡು ಮೂವರು ಮಾತನಾಡುತ್ತಾ ನಿಂತಿದ್ದರು. ಇದೇ ವೇಳೆ, ರಾಯಚೂರಿನಿಂದ ಸಿಂಧನೂರು ಕಡೆ ಬರುತ್ತಿದ್ದ ಭತ್ತದ ಹೊಟ್ಟಿನ ಚೀಲಗಳನ್ನು ತುಂಬಿಕೊಂಡು ವೇಗವಾಗಿ ಬಂದ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ರಸ್ತೆ ಬದಿ ನಿಂತವರ ಮೇಲೆಯೇ ಚೀಲಗಳು ಉರುಳಿ ಬಿದ್ದಿದ್ದು, ಅದರಡಿ ಸಿಲುಕಿ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?