ಸಾಲುಮರದ ತಿಮ್ಮಕ್ಕ 
ರಾಜ್ಯ

'ವೃಕ್ಷಮಾತೆ' ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ, ಮುಂದುವರೆದ ಚಿಕಿತ್ಸೆ

ಉಸಿರಾಟದ ತೊಂದರೆ, ಹೊಟ್ಟೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ನವೆಂಬರ್ 30ರಂದು ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ.

ಬೆಂಗಳೂರು: ಖ್ಯಾತ ಪರಿಸರವಾದಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಉಸಿರಾಟದ ತೊಂದರೆ, ಕೆಟ್ಟ ಸಮಸ್ಯೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ನವೆಂಬರ್ 30ರಂದು ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ.

ಸಾಲು ಮರದ ತಿಮ್ಮಕ್ಕ ಅವರು ಗ್ಯಾಸ್ಟ್ರೋ ಇಂಟಸ್ಟೈನಲ್ ಸೋಂಕು, ಅತಿಸಾರ ಮತ್ತು ನಿರ್ಜಲೀಕರಣದಿಂದ ಬಳಲುತ್ತಿದ್ದರು. ಕೆಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರ ಸ್ಥಿತಿ ಸ್ಥಿರವಾಗಿದೆ. ಡಿಸೆಂಬರ್ 17 ಅಥವಾ 18 ರಂದು ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ತಿಮ್ಮಕ್ಕ ಅವರ ಪುತ್ರ ಉಮೇಶ್ ಮಾತನಾಡಿ, ತಾಯಿಗೆ 113 ವರ್ಷ, ಆಕೆಯ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಜಯನಗರದ ಅಪೋಲೋ ಆಸ್ಪತ್ರೆಗೆ ಕರೆದೊಯ್ದೆವು, ಈಗ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ನೂರಾರು ಮರಗಳ ಪಾಲನೆ ಪೋಷಣೆ ಮೂಲಕ ವೃಕ್ಷಮಾತೆಯೆಂದೇ ಹೆಸರಾಗಿರುವ ಸಾಲುಮರದ ತಿಮ್ಮಕ್ಕ, ಈವರೆಗೆ ಲಕ್ಷಾಂತರ ಸಸಿ ನೆಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ