ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಾತುಕತೆ 
ರಾಜ್ಯ

ಬೆಳಗಾವಿ: ಸುವರ್ಣ ಸೌಧಕ್ಕೆ ಆಗಮಿಸಿದ ಗೃಹಲಕ್ಷ್ಮಿಯರು! ಸಿಎಂ ಸಿದ್ದರಾಮಯ್ಯ ಸಂವಾದ

ಬದುಕಿಗೆ ಹೊಸ ಚೈತನ್ಯ ನೀಡಿದ ಗೃಹಲಕ್ಷ್ಮಿ ಯೋಜನೆಯನ್ನು ಸಾಕಾರಗೊಳಿಸಿದ ನನಗೆ, ಇಲಾಖೆಯ ಸಚಿವರು ಹಾಗೂ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಗೃಹಲಕ್ಷ್ಮಿಯರು ತಿಳಿಸಿದ್ದಾರೆ.

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧಕ್ಕೆ ಬುಧವಾರ ಆಗಮಿಸಿದ ಗೃಹಲಕ್ಷ್ಮಿ ಫಲಾನುಭವಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಾದ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯ ಹಣದಿಂದ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಗೃಹಲಕ್ಷ್ಮಿ ಯೋಜನೆಯಿಂದ ಫಲಾನುಭವಿಗಳ ಜೀವನದಲ್ಲಿ ಆಗಿರುವ ಲಾಭಗಳ ಬಗ್ಗೆ ವಿವರಿಸಿದರು ಎಂದರು.

ಬದುಕಿಗೆ ಹೊಸ ಚೈತನ್ಯ ನೀಡಿದ ಗೃಹಲಕ್ಷ್ಮಿ ಯೋಜನೆಯನ್ನು ಸಾಕಾರಗೊಳಿಸಿದ ನನಗೆ, ಇಲಾಖೆಯ ಸಚಿವರು ಹಾಗೂ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಗೃಹಲಕ್ಷ್ಮಿಯರು ತಿಳಿಸಿದ್ದಾರೆ. ಈ ಎಲ್ಲರ ಮಾತುಗಳು ಕೇಳಿ ಸಂತೃಪ್ತ ಭಾವ ನನ್ನಲ್ಲಿ ಮೂಡಿದೆ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯಿಂದ ಒಂದೇ ಮನೆಯ ಅತ್ತೆ ಸೊಸೆಯ ಮಧ್ಯೆ ಜಗಳ ತಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಆದರೆ ಇಂದಿನ ಕಾರ್ಯಕ್ರಮಕ್ಕೆ ಅತ್ತೆಸೊಸೆಯರೇ ಜೊತೆ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯೋಜನೆಯಿಂದ ತಮಗಾಗಿರುವ ಲಾಭದ ಬಗ್ಗೆ ಮಾತನಾಡಿದ್ದಾರೆ ಎಂದು ತಿಳಿಸಿದರು.

ಈ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವ ಈ ಯೋಜನೆಯನ್ನು ಮುಂದುವರಿಸಲಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

SCROLL FOR NEXT