ಸಿಟಿ ರವಿ 
ರಾಜ್ಯ

ಬಿಜೆಪಿ MLC ಸಿಟಿ ರವಿ ಬಂಧನ: ಆಶ್ಲೀಲ ಪದ ಬಳಸಿಲ್ಲ, ಪೊಲೀಸರ ಮುಂದೆ ಹೇಳಿಕೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್‌ಹೆಡ್ ಮೇಲೆ ಅವಾಚ್ಯಪದ ಬಳಕೆ ಆರೋಪಿಸಿ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಹೀಗಾಗಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖವಾಗಿದೆ.

ಖಾನಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ಹೇಳಿಕೆ ದಾಖಲಿಸಿಕೊಂಡು ಇದರ ಚಿತ್ರೀಕರಣ ಮಾಡಲಾಗಿದೆ. ನಾನು ಸಚಿವೆ ವಿರುದ್ಧ ಯಾವುದೇ ರೀತಿಯ ಅಶ್ಲೀಲ ಪದ ಬಳಸಿಲ್ಲ. ಮಹಿಳೆಯರ ಬಗ್ಗೆ ನನಗೆ ಗೌರವಿದೆ. ಯಾರೋ ಹೇಳಿದ ಹೇಳಿಕೆ ಕೇಳಿ ನನ್ನ ಮೇಲೆ ಸಚಿವೆ ಸುಳ್ಳು ದೂರು ದಾಖಲಿಸಿದ್ದಾರೆ. ದೂರಿನಲ್ಲಿರುವ ಅಂಶಗಳು ಸತ್ಯಕ್ಕೆ ದೂರವಾಗಿವೆ ಎಂದು ಸಿಟಿ ರವಿ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!