ಸಾಂದರ್ಭಿಕ ಚಿತ್ರ 
ರಾಜ್ಯ

ಬೀದರ್: ಬೆಳೆನಷ್ಟ, ಸಾಲಬಾಧೆ, ಬಾಲ್ಕಿಯಲ್ಲಿ ಮಹಾರಾಷ್ಟ್ರದ ರೈತ ಆತ್ಮಹತ್ಯೆ

ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಡಿಯೋನಿ ತಹಸಿಲ್‌ನ ಇಸ್ಮಾಲವಾಡಿ ಗ್ರಾಮದ ರೈತ ಅಲ್ಲಿಂದ ಸುಮಾರು 140 ಕಿಲೋ ಮೀಟರ್ ದೂರದಲ್ಲಿರುವ ಬೀದರ್ ಜಿಲ್ಲೆಯ ಭಾಲ್ಕಿಯ ಭಂಟ್ಬ್ರಾ ಗ್ರಾಮದಲ್ಲಿ ಆತ್ಮಹತ್ಯೆ

ಬೀದರ್: ಬೆಳೆ ನಷ್ಟ, ಸಾಲಬಾಧೆಯಿಂದ ನೊಂದ ಮಹಾರಾಷ್ಟ್ರದ ರೈತನೋರ್ವ ನೆರೆಯ ಕರ್ನಾಟಕದ ಬೀದರ್ ಜಿಲ್ಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮೃತನನ್ನು ಸೋಮಶ್ವೇರ್ ಖಂಡು ಮುಗಳೆ(33) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಡಿಯೋನಿ ತಹಸಿಲ್‌ನ ಇಸ್ಮಾಲವಾಡಿ ಗ್ರಾಮದ ರೈತ ಅಲ್ಲಿಂದ ಸುಮಾರು 140 ಕಿಲೋ ಮೀಟರ್ ದೂರದಲ್ಲಿರುವ ಬೀದರ್ ಜಿಲ್ಲೆಯ ಭಾಲ್ಕಿಯ ಭಂಟ್ಬ್ರಾ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳೆ ನಷ್ಟ ಹಾಗೂ ಸಾಲಬಾಧೆಯಿಂದ ತುಂಬಾ ಹತಾಶೆಗೆ ಒಳಗಾಗಿದ್ದರು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ. ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿರುವ ಮುಗಳೆ ಎರಡು ಎಕರೆ ಜಮೀನಿನಲ್ಲಿ ಸೋಯಾಬೀನ್ ಬೆಳೆದಿದ್ದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಈ ಸಂಬಂಧ ಭಾಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT