ಬಸ್ ಬಲ್ಟಿಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು 
ರಾಜ್ಯ

Honnavar: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ; 34 ವಿದ್ಯಾರ್ಥಿಗಳಿಗೆ ಗಾಯ!

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಆರೋಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು. ಘಟನೆಯಲ್ಲಿ ಶಿಕ್ಷಕರು-ವಿದ್ಯಾರ್ಥಿಗಳು ಸೇರಿ ಸುಮಾರು 34 ಮಂದಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಕಾರವಾರ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿ ಕನಿಷ್ಠ 34 ವಿಧ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಆರೋಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು. ಘಟನೆಯಲ್ಲಿ ಶಿಕ್ಷಕರು-ವಿದ್ಯಾರ್ಥಿಗಳು ಸೇರಿ ಸುಮಾರು 34 ಮಂದಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಮೂಲಗಳ ಪ್ರಕಾರ ಕೋಲಾರ ಜಿಲ್ಲೆಯ, ಮಾಲೂರಿನ ಮಾಸ್ತಿ ಹಳ್ಳಿಯ ಕರ್ನಾಟಕ ಪ್ರೌಢ ಶಾಲೆಯ ವಿಧ್ಯಾರ್ಥಿಗಳು, ಉತ್ತರ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ತೆರಳಿದ್ದರು. ಈ ಪ್ರವಾಸದಲ್ಲಿ ಸುಮಾರು ಶಿಕ್ಷಕರು ಮತ್ತು ಸಿಬ್ಬಂದಿ ಜೊತೆ 40 ಜನ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು.

ಬಸ್ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪ ಬಳಿಯ ಆರೋಳ್ಳಿ ಕ್ರಾಸ್ ಬಳಿ ಚಲಿಸುತ್ತಿದ್ದಾಗ ಬಸ್​​ ಪಲ್ಟಿಯಾಗಿದೆ. ಈ ಘಟನೆಯಲ್ಲಿ 34 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಈ ಪೈಕಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ 4 ವಿಧ್ಯಾರ್ಥಿಗಳನ್ನು ಮಣಿಪಾಲ್​ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಉಳಿದ 34 ಜನ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯವಾಗಿದ್ದು. ಈ ವಿದ್ಯಾರ್ಥಿಗಳನ್ನು ಹೊನ್ನಾವರದ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಹೊನ್ನಾವರ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!