ಸಿಟಿ ರವಿ 
ರಾಜ್ಯ

ಅಶ್ಲೀಲ ಪದ ಬಳಕೆ ಪ್ರಕರಣ: ಕೋರ್ಟ್ ಮುಂದೆ BJP MLC ಸಿಟಿ ರವಿ ಹಾಜರು, ವಿಚಾರಣೆ ಮಧ್ನಾಹ್ನ 3 ಗಂಟೆಗೆ ಮುಂದೂಡಿಕೆ!

ರವಿ ಪರ ವಕೀಲ ಎಂಬಿ ಜಿರಲಿ ವಾದ ಮಂಡಿಸಿದರು. ಅಲ್ಲದೆ ಜಾಮೀನು ನೀಡುವಂತೆ ಮನವಿ ಮಾಡಿದರು. ಇದೀಗ ಜಾಮೀನು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗುವ ವಿಚಾರಣೆ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಪರ ವಕೀಲರು ವಾದ ಮಂಡಿಸಲಿದ್ದಾರೆ.

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬೆಳಗಾವಿಯ ಜೆಎಂಎಫ್ಸಿ ಕೋರ್ಟ್ ಮುಂದೆ ಹಾಜರುಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎಫ್ಐಆರ್ ದಾಖಲಿಸಿದ್ದ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದರು. ಇಂದು ಜೆಎಂಎಫ್ಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದು ನ್ಯಾಯಮೂರ್ತಿಗಳು ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.

ರವಿ ಪರ ವಕೀಲ ಎಂಬಿ ಜಿರಲಿ ವಾದ ಮಂಡಿಸಿದರು. ಅಲ್ಲದೆ ಜಾಮೀನು ನೀಡುವಂತೆ ಮನವಿ ಮಾಡಿದರು. ಇದೀಗ ಜಾಮೀನು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗುವ ವಿಚಾರಣೆ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಪರ ವಕೀಲರು ವಾದ ಮಂಡಿಸಲಿದ್ದಾರೆ. ಆನಂತರ ಜಾಮೀನು ತೀರ್ಪು ನೀಡುವ ಸಾಧ್ಯತೆ ಇದೆ.

ಖಾನಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ಹೇಳಿಕೆ ದಾಖಲಿಸಿಕೊಂಡು ಇದರ ಚಿತ್ರೀಕರಣ ಮಾಡಲಾಗಿದೆ. ನಾನು ಸಚಿವೆ ವಿರುದ್ಧ ಯಾವುದೇ ರೀತಿಯ ಅಶ್ಲೀಲ ಪದ ಬಳಸಿಲ್ಲ. ಮಹಿಳೆಯರ ಬಗ್ಗೆ ನನಗೆ ಗೌರವಿದೆ. ಯಾರೋ ಹೇಳಿದ ಹೇಳಿಕೆ ಕೇಳಿ ನನ್ನ ಮೇಲೆ ಸಚಿವೆ ಸುಳ್ಳು ದೂರು ದಾಖಲಿಸಿದ್ದಾರೆ. ದೂರಿನಲ್ಲಿರುವ ಅಂಶಗಳು ಸತ್ಯಕ್ಕೆ ದೂರವಾಗಿವೆ ಎಂದು ಸಿಟಿ ರವಿ ಹೇಳಿಕೆ ನೀಡಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಹೀಗಾಗಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ