ಕರ್ನಾಟಕ ಹೈಕೋರ್ಟ್ 
ರಾಜ್ಯ

ಭೋವಿ ನಿಗಮ ಭ್ರಷ್ಟಾಚಾರ ಪ್ರಕರಣ: ತನಿಖೆಯಲ್ಲಿ ವಿಳಂಬ ನೀತಿ ಅನುಸರಣೆ, CBI ಗೇಕೆ ವಹಿಸಬಾರದು; ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಹಗರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್​​ ರದ್ದುಪಡಿಸುವಂತೆ ಕೋರಿ ಪ್ರಕರಣದ 7 ಮತ್ತು 8ನೇ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ, ಸರ್ಕಾರದ ತನಿಖೆಯ ವೈಖರಿಗೆ ಅಸಮಾಧಾನ ವ್ಯಕ್ತಪಡಿಸಿತು.

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ಪ್ರಕರಣದ ತನಿಖೆಯಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್ ತನಿಖೆಯನ್ನು ಸಿಬಿಐನಂತಹ ಸ್ವತಂತ್ರ ತನಿಖಾ ಸಂಸ್ಥೆಗೇಕೆ ವಹಿಸಬಾರದು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.

ಹಗರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್​​ ರದ್ದುಪಡಿಸುವಂತೆ ಕೋರಿ ಪ್ರಕರಣದ 7 ಮತ್ತು 8ನೇ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ, ಸರ್ಕಾರದ ತನಿಖೆಯ ವೈಖರಿಗೆ ಅಸಮಾಧಾನ ವ್ಯಕ್ತಪಡಿಸಿತು.

ಕಳೆದ 20 ತಿಂಗಳಿಂದ ನಾಲ್ವರು ಆರೋಪಿಗಳನ್ನು ವಿಚಾರಣೆಗೆ ಕರೆದಿಲ್ಲ ಎಂದು ಆರೋಪಿಗಳ ಪರ ವಕೀಲರು ಆರೋಪಿಸಿದ್ದಾರೆ. ಬಂಧನದಿಂದ ರಕ್ಷಣೆಗಾಗಿ ಅವರು ಜಾಮೀನು ಕೂಡ ಪಡೆದಿಲ್ಲ. ಇದು ರಾಜ್ಯ ಸರ್ಕಾರ ಆರೋಪಿಗಳನ್ನು ರಕ್ಷಣೆ ಮಾಡುತ್ತಿದೆ ಎನ್ನುವುದನ್ನು ತೋರಿಸುತ್ತದೆ.

ಅಲ್ಲದೇ, ಪ್ರಕರಣ ಕುರಿತು ರಾಜ್ಯ ಸರ್ಕಾರವು ಬಸವನ ಹುಳ ತೆವಳುವಂತೆ ನಿಧಾನಗತಿಯಲ್ಲಿ ತನಿಖೆ ನಡೆಸುತ್ತಿದೆ. 100 ಕೋಟಿಗೂ ಅಧಿಕ ಮೊತ್ತದ ಹಗರಣದ ತನಿಖೆಯ ನಿಧಾನಗತಿಯನ್ನು ಪರಿಗಣಿಸಿ, ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಲು ಇದು ಸೂಕ್ತವಾದ ಪ್ರಕರಣವಾಗಿದೆ. ಆದ್ದರಿಂದ ಏಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬಾರದು? ಪ್ರಕರಣದ 1, 2, 3 ಮತ್ತು 5ನೇ ಆರೋಪಿಗಳು ವಿಚಾರಣೆ ಎದುರಿಸಿದ್ದಾರೆಯೇ? ಮತ್ತು ಅವರು ಯಾವುದೇ ಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆಯೇ? ಎಂಬ ಬಗ್ಗೆ ಅರ್ಜಿಯ ಮುಂದಿನ ವಿಚಾರಣೆ ವೇಳೆ ವಿವರಣೆ ನೀಡಬೇಕು. ಇಲ್ಲದಿದ್ದರೆ, ತನಿಖೆಗೆ ಆದೇಶ ಹೊರಡಿಸಬೇಕಾಗುತ್ತದೆ ಎಂದು ಎಚ್ಚರಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಂದು ಉಪರಾಷ್ಟ್ರಪತಿ ಚುನಾವಣೆ: ಮತದಾನದಿಂದ 12 ಸಂಸದರು ದೂರ; NDA ಅಭ್ಯರ್ಥಿ C.P ರಾಧಾಕೃಷ್ಣನ್‌ ಗೆಲುವು ಬಹತೇಕ ಖಚಿತ!

'ಹಿಂದೂ ವಿರೋಧಿ' ನಡೆ: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಕಮಲ ಪಾಳಯ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ 'ಸೆಂಟ್ ಮೇರಿ' ಹೆಸರು; ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ಡಬಲ್ ಎಂಜಿನ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುತ್ತೇವೆ: ಪಕ್ಷದ ಬಲವರ್ಧನೆಗೆ 'ಸಂಘಟನ್ ಶ್ರೀ ಜನ್ ಅಭಿಯಾನ್; ಡಿ.ಕೆ.ಸುರೇಶ್

ಇಸ್ರೇಲ್ ನಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಜೆರುಸಲೆಮ್ ಬಸ್ ಮೇಲೆ ಗುಂಡಿನ ದಾಳಿ: 5 ಸಾವು, 12 ಜನರಿಗೆ ಗಾಯ

SCROLL FOR NEXT