ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ 
ರಾಜ್ಯ

ಶಿಕಾರಿಪುರ ಸರ್ಕಾರಿ ಶಾಲೆಗಳು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಮೇಲ್ದರ್ಜೇಗೆ: ಮಧು ಬಂಗಾರಪ್ಪ

ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸೂಕ್ತ ಮೂಲಸೌಕರ್ಯ ಕಲ್ಪಿಸುವ ಮೂಲಕ ಎರಡು ವರ್ಷಗಳಲ್ಲಿ ಶಾಲೆಯನ್ನು ಮೇಲ್ದರ್ಜೇಗೇರಿಸಲಾಗುವುದು

ಶಿಕಾರಿಪುರ: ಶಿಕಾರಿಪುರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮತ್ತು ಸರ್ಕಾರಿ ಬಾಲಕ-ಬಾಲಕಿಯರ ಪ್ರೌಢಶಾಲೆಯನ್ನು ಕರ್ನಾಟಕ ಸಾರ್ವಜನಿಕ ಶಾಲೆಗಳಾಗಿ (KPS) ಮೇಲ್ದರ್ಜೆಗೇರಿಸಲಾಗುವುದು ಎಂದು ಶಾಲಾ ಶಿಕ್ಷಣ, ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಿಕಾರಿಪುರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಶುಕ್ರವಾರ ಭೇಟಿ ನೀಡಿ, ಇಲ್ಲಿನ ಪಾರಂಪರಿಕ ಕಟ್ಟಡವನ್ನು ಪರಿಶೀಲಿಸಿದ ಸಚಿವರು, ಶಾಲೆಯನ್ನು ಮೇಲ್ದರ್ಜೆಗೇರಿಸುವ ಸಂಬಂಧ ಶಿಕ್ಷಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಮುಖ್ಯೋಪಾಧ್ಯಾಯರು, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದರು.

ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸೂಕ್ತ ಮೂಲಸೌಕರ್ಯ ಕಲ್ಪಿಸುವ ಮೂಲಕ ಎರಡು ವರ್ಷಗಳಲ್ಲಿ ಶಾಲೆಯನ್ನು ಮೇಲ್ದರ್ಜೇಗೇರಿಸಲಾಗುವುದು ಎಂದರು.

1868 ರಲ್ಲಿ ಸ್ಥಾಪನೆಯಾದ ಶಾಲೆಯಲ್ಲಿ ಪ್ರಸ್ತುತ 1,300 ವಿದ್ಯಾರ್ಥಿಗಳಿದ್ದಾರೆ. ಸಮೀಪದ ಗ್ರಾಮಗಳ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಸಮಯಕ್ಕೆ ಸರಿಯಾಗಿ ಅಗತ್ಯ ಸೌಲಭ್ಯಗಳು ದೊರೆಯುತ್ತಿವೆಯೇ ಎಂದು ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಸಚಿವರು, ಉಚಿತ ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳು, ಮಧ್ಯಾಹ್ನದ ಊಟ, ಹಾಲು, ರಾಗಿ ಮಾಲ್ಟ್ ಮತ್ತು ಮೊಟ್ಟೆ ವಿತರಣೆ ಸೇರಿದಂತೆ ಶಿಕ್ಷಣಕ್ಕೆ ಬೆಂಬಲ ನೀಡುವ ಸರ್ಕಾರದ ಪ್ರಯತ್ನಗಳನ್ನು ವಿವರಿಸಿದರು. ಸುಧಾರಿತ ಶೌಚಾಲಯ ಮತ್ತಿತರ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಅನುತ್ತೀರ್ಣ ಪ್ರಮಾಣ ಕಡಿಮೆ ಮಾಡುವ ಪ್ರಯತ್ನದಲ್ಲಿ ಮೂರು ಪರೀಕ್ಷೆಗಳ ಮಾದರಿಯನ್ನು ಪರಿಚಯಿಸಲಾಗಿದೆ ಎಂದು ತಿಳಿಸಿದ ಸಚಿವರು, ಮಹಾತ್ಮ ಗಾಂಧಿ ಬೆಳಗಾವಿಗೆ ಭೇಟಿ ನೀಡಿದ 100 ವರ್ಷಗಳ ನೆನಪಿಗಾಗಿ ಗಾಂಧಿ ಭಾರತ್ ಕಾರ್ಯಕ್ರಮದಡಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಯೋಜನೆಗಳನ್ನು ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT