ಕ್ರಿಕೆಟಿಗ ರಾಬಿನ್ ಉತ್ತಪ್ಪ 
ರಾಜ್ಯ

EPF ಹಣ ವಂಚನೆ ಆರೋಪ: ನನಗೂ ಕಂಪನಿಗಳೂ ಸಂಬಂಧವಿಲ್ಲ, ಸರಿಯಾದ ಮಾಹಿತಿ ಇಲ್ಲದೆ ಸುದ್ದಿ ಹರಡದಿರಿ- ಕ್ರಿಕೆಟಿಗ ರಾಬಿನ್ ಉತ್ತಪ್ಪ

ಹಣಕಾಸಿನ ನೆರವಿನ ಕಾರಣಕ್ಕೆ ಸ್ಟಾಬೆರ್ರಿ ಲೆನ್ಸೆರಿಯಾ ಪ್ರೈವೇಟ್ ಲಿ., ಸೆಂಟಾರಸ್ ಲೈಫ ಸ್ಟೈಲ್ ಬ್ರ್ಲಾಂಡ್ಸ್ ಪ್ರೈವೇಟ್ ಲಿ., ಬೆರ್ರಿಜ್ ಫ್ಯಾಶನ್ ಹೌಸ್ ಕಂಪನಿಗಳಿಗೆ ನಾನು 2018-19ರಲ್ಲಿ ನಿರ್ದೇಶನಕಾಗಿ ನೇಮಕಗೊಂಡಿದ್ದೆ. ಆದರೆ, ಕಾರ್ಯನಿರ್ವಾಹಕನಾಗಿ ಇರಲಿಲ್ಲ ಮತ್ತು ಕಂಪನಿಯ ದೈಂದಿನ ವ್ಯವಹಾರದಲ್ಲಿ ನನಗೆ ಯಾವುದೇ ಸಂಬಂಧವಿಲ್ಲ.

ಬೆಂಗಳೂರು: ಕಾರ್ಮಿಕರಿಂದ ಕಡಿತಗೊಳಿಸಿದ್ದ ಭವಿಷ್ಯ ನಿಧಿ (ಪಿಎಫ್) ಹಣವನ್ನು ಸರ್ಕಾರಕ್ಕೆ ಜಮೆ ಮಾಡದೆ ವಂಚನೆ ಮಾಡಿದ್ದಾರೆಂಬ ಆರೋಪವನ್ನು ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ನಿರಾಕರಿಸಿದ್ದಾರೆ.

ಈ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿರುವ ಅವರು, ನನಗೆ ಕಂಪನಿಗಳ ಜೊತೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಹಣಕಾಸಿನ ನೆರವಿನ ಕಾರಣಕ್ಕೆ ಸ್ಟಾಬೆರ್ರಿ ಲೆನ್ಸೆರಿಯಾ ಪ್ರೈವೇಟ್ ಲಿ., ಸೆಂಟಾರಸ್ ಲೈಫ ಸ್ಟೈಲ್ ಬ್ರ್ಲಾಂಡ್ಸ್ ಪ್ರೈವೇಟ್ ಲಿ., ಬೆರ್ರಿಜ್ ಫ್ಯಾಶನ್ ಹೌಸ್ ಕಂಪನಿಗಳಿಗೆ ನಾನು 2018-19ರಲ್ಲಿ ನಿರ್ದೇಶನಕಾಗಿ ನೇಮಕಗೊಂಡಿದ್ದೆ. ಆದರೆ, ಕಾರ್ಯನಿರ್ವಾಹಕನಾಗಿ ಇರಲಿಲ್ಲ ಮತ್ತು ಕಂಪನಿಯ ದೈಂದಿನ ವ್ಯವಹಾರದಲ್ಲಿ ನನಗೆ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಈ ಕಂಪನಿಗಳು ನಾನು ಸಾಲದ ರೂಪದಲ್ಲಿ ನೀಡಿದ್ದ ಹಣವನ್ನು ಮರುಪಾವತಿಸಲು ವಿಫಲವಾಗಿವೆ. ಈಗ ಅದು ನ್ಯಾಯಾಲಯದಲ್ಲಿದೆ. ಅಲ್ಲದೆ. ಕಂಪನಿಯ ನಿರ್ದೇಶಕ ಹುದ್ದೆಗೆ ಕೆಲ ವರ್ಷಗಳ ಹಿಂದೆಯೇ ನಾನು ರಾಜೀನಾಮೆ ನೀಡಿದ್ದೇನೆಂದು ಹೇಳಿದ್ದಾರೆ.

ಕಂಪನಿಗೆ ಸಂಬಂಧಿಸಿದಂತೆ ನೋಟಿಸ್ ನೀಡಿದ್ದಕಕೆ ನನ್ನ ಕಾನೂನು ತಂಡ ಈಗಾಗಲೇ ಉತ್ತರ ನೀಡಿದೆ. ಕಂಪನಿ ಜೊತೆ ನನಗೆ ಸಂಬಂಧವಿಲ್ಲ ಎಂಬುದನ್ನು ಅಧಿಕಾರಿಗಳಿಗೆ ತಿಳಿಸಲಾಗಿದೆ. ನನ್ನ ವಿಚಾರದಲ್ಲಿ ಸರಿಯಾದ ಮಾಹಿತಿ ಇಲ್ಲದೆ ಸುದ್ದಿ ಹರಡದಿರಿ ಎಂದು ಮನವಿ ಮಾಡಿದ್ದಾರೆ.

ರಾಬಿನ್ ಉತ್ತಪ್ಪ ಒಡೆತನದ ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯು ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿದ್ದರೂ, ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪಿಎಫ್ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ಗೋಪಾಲ ರೆಡ್ಡಿ ಅವರು, ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಇದೇ ತಿಂಗಳು ನಾಲ್ಕರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಈ ಹಿನ್ನಲೆಯಲ್ಲಿ ರಾಬಿನ್ ಉತ್ತಪ್ಪ ಅವರಿಗೆ ನೋಟಿಸ್ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಆದರೆ ಪ್ರಸ್ತುತ ಆ ವಿಳಾಸದಲ್ಲಿ ಅವರು ವಾಸವಿಲ್ಲ. ಹೀಗಾಗಿ ಇದೀಗ ಉತ್ತಪ್ಪ ಅವರಿಗೆ ವಾರೆಂಟ್ ಜಾರಿಗೊಳಿಸಲಾಗಿದೆ. ಈ ಬಂಧನದ ವಾರೆಂಟ್ ಬೆನ್ನಲ್ಲೇ ರಾಬಿನ್ ಉತ್ತಪ್ಪ ಇಡೀ ಪ್ರಕರಣದ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT