ಕಲಬುರಗಿಯ ಜಯದೇವ ಹೃದ್ರೋಗ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮ  
ರಾಜ್ಯ

ಕಲಬುರಗಿ: ನೂತನ ಜಯದೇವ ಆಸ್ಪತ್ರೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ, ವಿಶೇಷತೆಗಳು ಹೀಗಿದೆ...

ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರೊಂದಿಗೆ ಸೇರಿ ಆಸ್ಪತ್ರೆಯನ್ನು ಉದ್ಘಾಟಿಸಿದರು.

ಕಲಬುರಗಿ: ನಗರದ ಡಾ. ಎಸ್​.ಎಂ ಪಂಡಿತ್​ ರಂಗಮಂದಿರದ ಎದುರಿನ ಏಳು ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಙಾನ ಮತ್ತು ಸಂಶೋಧನ ಸಂಸ್ಥೆಯ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರೊಂದಿಗೆ ಸೇರಿ ಆಸ್ಪತ್ರೆಯನ್ನು ಉದ್ಘಾಟಿಸಿದರು.

ಒಟ್ಟು 371 ಬೆಡ್​ ಸಾಮರ್ಥ್ಯವಿರುವ ನೂತನ ಜಯದೇವ ಆಸ್ಪತ್ರೆಯನ್ನು ಕಲಬುರಗಿಯ ಅನ್ನಪೂರ್ಣ ಕ್ರಾಸ್ ಬಳಿ 377 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ರಹೀಂ ಖಾನ್​, ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ ಮತ್ತು ಶಾಸಕರು ಸಾಥ್ ನೀಡಿದರು.

ಬೆಂಗಳೂರು, ಮೈಸೂರು ನಂತರ ಕಲ್ಯಾಣ ಕರ್ನಾಟಕದಲ್ಲಿ ಮೊದಲ ಜಯದೇವ ಹೃದ್ರೋಗ ಆಸ್ಪತ್ರೆ ಇದಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB)ಯ 377 ಕೋಟಿ ರೂಪಾಯಿ ವೆಚ್ಚದಲ್ಲಿ ಜಯದೇವ ಸರ್ಕಾರಿ ಹೃದ್ರೋಗ ಆಸ್ಪತ್ರೆ ನಿರ್ಮಾಣಗೊಂಡಿದ್ದು, ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ.

ಆಸ್ಪತ್ರೆಯ ವಿಶೇಷತೆಗಳು

371 ಹಾಸಿಗೆ ಸಾಮರ್ಥ್ಯದ ಕಟ್ಟಡ

3 ಕ್ಯಾಥ್‌ಲ್ಯಾಬ್‌ಗಳು

3 ಆಪರೇಷನ್ ಥಿಯೇಟರ್‌ಗಳು

1 ಹೈಬ್ರಿಡ್ ಆಪರೇಷನ್ ಥಿಯೇಟರ್

105 ಐಸಿಸಿಯು ಹಾಸಿಗೆಗಳು

120 ಸಾಮಾನ್ಯ ವಾರ್ಡ್ ಬೆಡ್‌

ಅರೆ-ವಿಶೇಷ, ವಿಶೇಷ ಮತ್ತು ಡೀಲಕ್ಸ್ ವಾರ್ಡ್ ಹಾಸಿಗೆಗಳು, 12 ರಿಕವರಿ ಮತ್ತು 12 ಪೋಸ್ಟ್ ಆಪರೇಟಿವ್ ಹಾಸಿಗೆಗಳು.

ಕಾರ್ಡಿಯಾಲಜಿ, ಕಾರ್ಡಿಯೋಥೊರಾಸಿಕ್ ಸರ್ಜರಿ, ವ್ಯಾಸ್ಕುಲಾರ್‌ಶಸ್ತ್ರಚಿಕಿತ್ಸೆ, ಪೀಡಿಯಾಟ್ರಿಕ್ ಕಾರ್ಡಿಯಾಲಜಿ, ರೇಡಿಯಾಲಜಿ, 128 ಸ್ಲೈಸ್ ಸಿಟಿ ಸ್ಕ್ಯಾನ್, 1.5T ಎಂಆರ್ ಐ, ಅಲ್ಟ್ರಾಸೋನೋಗ್ರಫಿ, ಹೈಟೆಕ್ಪ್ಯಾಥಾಲಜಿ ಮತ್ತು ರಕ್ತ ಬ್ಯಾಂಕ್ ಸೇವೆ ಒದಗಲಿದೆ.

ಬಿಪಿಎಲ್​​ ಕಾರ್ಡ್​ದಾರರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಸಿಗಲಿದ್ದು, ಎಪಿಎಲ್​ ಕಾರ್ಡ್​ದಾರರಿಗೆ ಅಲ್ಪಮೊತ್ತದಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಕಲ್ಯಾಣ ಕರ್ನಾಟಕ ಭಾಗಕ್ಕೆ 371(ಜೆ) ವಿಶೇಷ ಸ್ಥಾನಮಾನ ನೀಡಲಾಗಿದೆ. 10 ವರ್ಷವಾಗಿದೆ. ಹೀಗಾಗಿ 371(ಜೆ) ಕಲಂ ಸವಿನೆನಪಿಗಾಗಿ 371 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣವಾಗಿದೆ. ಜಯದೇವ ಸರ್ಕಾರಿ ಹೃದ್ರೋಗ ಆಸ್ಪತ್ರೆ 2016ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಜಿಮ್ಸ್​ನಲ್ಲಿ ತಾತ್ಕಾಲಿಕವಾಗಿ ಆರಂಭವಾಗಿತ್ತು. ಎಂಟು ವರ್ಷದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದನೇ ಲೋಕಾರ್ಪಣೆಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT