ಕನ್ನಡ ಸಾಹಿತ್ಯ ಪರಿಷತ್ತು  
ರಾಜ್ಯ

ಮುಂದಿನ ವರ್ಷ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ: ಜಿಲ್ಲಾ ಸಮಿತಿಗಳ ನಿರ್ಧಾರ

ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಹೊಸ ಜಿಲ್ಲೆಗಳು ಸಾಹಿತ್ಯ ಸಮ್ಮೇಳನ ಅತಿಥ್ಯಕ್ಕೆ ಕೋರಿಕೆ ಸಲ್ಲಿಸಿದವು. ಅಂತಿಮವಾಗಿ ಬಳ್ಳಾರಿ ಜಿಲ್ಲೆಗೆ ಸಮ್ಮೇಳನದ ಅತಿಥ್ಯ ನೀಡಲು ಎಲ್ಲ ಜಿಲ್ಲಾ ಸಮಿತಿಗಳು ನಿರ್ಧರಿಸಿವೆ.

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಭಾನುವಾರ ತೆರೆ ಬೀಳಲಿದೆ. ಬರುವ ವರ್ಷ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜಿಸಲು ನಿನ್ನೆ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಭೆಯಲ್ಲಿ ನಿರ್ಧರಿಸಲಾಗಿದೆ.

ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಹೊಸ ಜಿಲ್ಲೆಗಳು ಸಾಹಿತ್ಯ ಸಮ್ಮೇಳನ ಅತಿಥ್ಯಕ್ಕೆ ಕೋರಿಕೆ ಸಲ್ಲಿಸಿದವು. ಅಂತಿಮವಾಗಿ ಬಳ್ಳಾರಿ ಜಿಲ್ಲೆಗೆ ಸಮ್ಮೇಳನದ ಅತಿಥ್ಯ ನೀಡಲು ಎಲ್ಲ ಜಿಲ್ಲಾ ಸಮಿತಿಗಳು ನಿರ್ಧರಿಸಿವೆ.

ಬಳ್ಳಾರಿಗೆ 66 ವರ್ಷದ ಬಳಿಕ ಮರಳಿ ಸಾಹಿತ್ಯ ಸಮ್ಮೇಳನದ ಅತಿಥ್ಯ ದೊರೆಯುತ್ತಿದೆ. ಈ ಹಿಂದೆ 1926, 1938 ಮತ್ತು 1958ರಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು.

ಈ ಬಾರಿ ಮಂಡ್ಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ದಾಖಲೆ ಪ್ರಮಾಣದಲ್ಲಿ ಸಾಹಿತ್ಯಾಭಿಮಾನಿಗಳು ಸಮ್ಮೇಳನದಲ್ಲಿ ಭಾಗಿಯಾಗುತ್ತಿದ್ದಾರೆ. ಒಂದೆಡೆ ವಿಚಾರಗೋಷ್ಠಿ, ಮತ್ತೊಂದೆಡೆ ಪುಸ್ತಕ ಹಾಗೂ ವಾಣಿಜ್ಯ ಮಳಿಗೆಗಳು ಜನರನ್ನ ಆಕರ್ಷಿಸುತ್ತಿವೆ. ವಿವಿಧ ಬಗೆಯ ಖಾದ್ಯ, ಈ ಬಾರಿಯ ಅಡುಗೆ ಭಾರೀ ಸದ್ದು ಮಾಡಿದೆ.

ಇಂದು ಸಂಜೆ 4ಕ್ಕೆ ನಡೆಯಲಿರುವ ಸಮಾರೋಪ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀಗಳ ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ.ಗೊ.ರು.ಚನ್ನಬಸಪ್ಪ, ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ ಉಪಸ್ಥಿತರಿರಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

SCROLL FOR NEXT