ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ  
ರಾಜ್ಯ

ಸಚಿವೆ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ: ಉನ್ನತಮಟ್ಟದ ತನಿಖೆಗೆ ಮಹಿಳಾ ಆಯೋಗ ಆಗ್ರಹ

ಈ ಸಂಬಂಧ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಪತ್ರ ಬರೆದಿದ್ದಾರೆ.

ಬೆಂಗಳೂರು: ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವ ಸಿ.ಟಿ.ರವಿ ಅವರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಆಗ್ರಹಿಸಿದೆ.

ಈ ಸಂಬಂಧ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಪತ್ರ ಬರೆದಿದ್ದಾರೆ.

ಡಿ.19ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪರಿಷತ್ತಿನ ಸದಸ್ಯ ಸಿ.ಟಿ.ರವಿ ಅವರು ಅಸಭ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಯೇ ಸದನದಲ್ಲಿ ಮಹಿಳಾ ಮಂತ್ರಿಯೊಬ್ಬರ ವಿರುದ್ಧ ಅತೀ ಕೀಳುಮಟ್ಟದ ಅಸಾಂವಿಧಾನಿಕ ಪದ ಪ್ರಯೋಗ ಮಾಡಿದ್ದಾರೆ. ಇದು ನಾಡಿನ ಹೆಣ್ಣು ಕುಲಕ್ಕೇ, ಅವರ ಭಾವನೆಗಳಿಗೆ ಮಾಡಿರುವ ಅಪಮಾನವಾಗಿದೆ. ಆದ್ದರಿಂದ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT