ಸಭಾಪತಿ ಬಸವರಾಜ ಹೊರಟ್ಟಿ (ಸಂಗ್ರಹ ಚಿತ್ರ) 
ರಾಜ್ಯ

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ, ಪೊಲೀಸರ ಹಸ್ತಕ್ಷೇಪ ಒಪ್ಪಲಾಗದು: ಸಭಾಪತಿ ಬಸವರಾಜ ಹೊರಟ್ಟಿ

ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಪರಿಷತ್ತಿನ ಒಳಗೆ ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ನಮ್ಮ ಬಳಿ ವಿಡಿಯೋ ಮತ್ತು ಆಡಿಯೋ ರೆಕಾರ್ಡಿಂಗ್ ಲಭ್ಯವಿದ್ದರೆ ಈ ವಿಷಯವನ್ನು ಪರಿಗಣಿಸಲಾಗುವುದು.

ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರು ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣವು ಮುಗಿದ ಅಧ್ಯಾಯವಾಗಿದ್ದು, ಈ ಪ್ರಕರಣದಲ್ಲಿ ಪೊಲೀಸರ ಹಸ್ತಕ್ಷೇಪ ಸ್ವೀಕಾರಾರ್ಹವಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಹೇಳನಕಾರಿ ಮಾತುಗಳನ್ನಾಡಿರುವುದು ಮುಗಿದ ಅಧ್ಯಾಯವಾಗಿದೆ. ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ನಡೆದ ಘಟನೆಯನ್ನು ಕೂಲಂಕಷವಾಗಿ ಚರ್ಚಿಸಲಾಗಿದೆ ಎಂದು ಹೇಳಿದರು.

'ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಬಂಧಿಸಲಾಗಿದೆ. ಸದ್ಯ, ನಾವು ಎರಡೂ ಕಡೆಯಿಂದ ಯಾವುದೇ ದೂರುಗಳನ್ನು ಸ್ವೀಕರಿಸಿಲ್ಲ. ಈ ಬಗ್ಗೆ ದೂರು ನೀಡಿದರೆ, ನಾವು ಕ್ರಮ ಕೈಗೊಳ್ಳುತ್ತೇವೆ. ಪರಿಷತ್ತಿನ ಒಳಗೆ ನಡೆದ ಘಟನೆಯಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಬಾರದು, ಸದನದೊಳಗೆ ನಡೆದಿರುವ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ' ಎಂದರು.

'ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಪರಿಷತ್ತಿನ ಒಳಗೆ ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ನಮ್ಮ ಬಳಿ ವಿಡಿಯೋ ಮತ್ತು ಆಡಿಯೋ ರೆಕಾರ್ಡಿಂಗ್ ಲಭ್ಯವಿದ್ದರೆ ಈ ವಿಷಯವನ್ನು ಪರಿಗಣಿಸಲಾಗುವುದು. ಬೇರೆ ಯಾವುದೇ ಪಕ್ಷವು ವಿಡಿಯೋ ಅಥವಾ ಆಡಿಯೋ ಒದಗಿಸಿದರೆ, ನಾವು ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸುತ್ತೇವೆ. ಆ ದಿನ ಅಧಿವೇಶನ ಮುಗಿದ ನಂತರ ಯಾವುದೇ ವಿಡಿಯೋ ರೆಕಾರ್ಡಿಂಗ್ ಮಾಡಿಲ್ಲ' ಎಂದು ಹೇಳಿದರು.

ಸಚಿವರ ವಿರುದ್ಧ ಬಿಜೆಪಿ ಎಂಎಲ್‌ಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಕರಣವನ್ನು ‘ನೈತಿಕ ಸಮಿತಿ’ಗೆ ಒಪ್ಪಿಸಿ, ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೊರಟ್ಟಿ ಈ ಹಿಂದೆ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT