ಶಾಸಕ ವೇದವ್ಯಾಸ್ ಕಾಮತ್ ,ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ 
ರಾಜ್ಯ

ಮಂಗಳೂರು: ಮೊಟ್ಟಮೊದಲ 'ರೋಬೋಟಿಕ್ ಬಟರ್‌ಫ್ಲೈ' ಶೋಗೆ ಚಾಲನೆ

ರೋಬೋಟಿಕ್ ಚಿಟ್ಟೆಗಳು, ಇರುವೆಗಳು, ಜೀನು ನೊಣ್ಣ ಮತ್ತಿತರ ಚಿತ್ರಣವನ್ನು ಪ್ರದರ್ಶನದಲ್ಲಿ ನೋಡಬಹುದಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 9 ರವರೆಗೂ ಈ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ.

ಮಂಗಳೂರು: ಡಿಸೆಂಬರ್ 21 ರಿಂದ ಜನವರಿ 19 ರವರೆಗೆ ನಡೆಯುವ ಒಂದು ತಿಂಗಳ ಕರಾವಳಿ ಉತ್ಸವದ ಅಂಗವಾಗಿ ಕದ್ರಿ ಪಾರ್ಕ್‌ನಲ್ಲಿ ಆಯೋಜಿಸಿರುವ ಮೊಟ್ಟ ಮೊದಲ 'ರೋಬೋಟಿಕ್ ಬಟರ್‌ಫ್ಲೈ ಶೋ' ಅನ್ನು ಶಾಸಕ ವೇದವ್ಯಾಸ್ ಕಾಮತ್ ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಭಾನುವಾರ ಉದ್ಘಾಟಿಸಿದರು.

ರೋಬೋಟಿಕ್ ಚಿಟ್ಟೆಗಳು, ಇರುವೆಗಳು, ಜೀನು ನೊಣ್ಣ ಮತ್ತಿತರ ಚಿತ್ರಣವನ್ನು ಪ್ರದರ್ಶನದಲ್ಲಿ ನೋಡಬಹುದಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 9 ರವರೆಗೂ ಈ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಚಿಟ್ಟೆಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಚಿಟ್ಟೆಗಳ ಸಂರಕ್ಷಣೆ ಹಾಗೂ ಪರಿಸರ ಸಮತೋಲನ ಕುರಿತು ಜಾಗೃತಿ ಮೂಡಿಸಲು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ಮಂಗಳೂರಿಗರು ಪ್ರಥಮ ಬಾರಿಗೆ ಇಂತಹ ಪ್ರದರ್ಶನ ವೀಕ್ಷಿಸಲು ಉತ್ತಮ ಅವಕಾಶವಿದ್ದು, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರ ಯೋಜನೆಯಂತೆ ಕರಾವಳಿ ಉತ್ಸವ ಆಚರಣೆಯ ಅಂಗವಾಗಿ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವ ಅಪರೂಪದ ಚಿಟ್ಟೆಗಳನ್ನು ಪ್ರದರ್ಶಿಸಲಾಗುತ್ತಿದ್ದು, ಮಕ್ಕಳಿಗೆ ಅವುಗಳ ಬಗ್ಗೆ ತಿಳಿದುಕೊಳ್ಳಲು ಉತ್ತಮ ಅವಕಾಶವಿದೆ. ಪ್ರದರ್ಶನದಲ್ಲಿ ಶಾಲಾ ಮಕ್ಕಳಿಗೆ ಶೇಕಡಾ 50 ರಷ್ಟು ರಿಯಾಯಿತಿ ಇದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT