ಸಂಗ್ರಹ ಚಿತ್ರ 
ರಾಜ್ಯ

ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದುವರಿದ ಬಾಣಂತಿಯರ ಸಾವು; ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿ

ಎರಡು ದಿನಗಳ ಹಿಂದೆಯಷ್ಟೇ ಮೃತ ವೈಶಾಲಿ ಪತಿಯ ಜೊತೆ ಸಂಭ್ರಮದಿಂದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.

ಬೆಂಗಳೂರು/ಬಳ್ಳಾರಿ: ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್‌ಸಿ) ಬಾಣಂತಿಯರ ಸರಣಿ ಸಾವು ಘಟನೆ ಬಳಿಕವೂ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಜಿಲ್ಲಾಸ್ಪ್ರತ್ರೆಗಳಲ್ಲಿ ಬಾಣಂತಿಯರ ಸಾವಿನ ಪ್ರಕರಣ ಮುಂದುವರಿದಿದ್ದು, ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ.

ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ವೈಶಾಲಿ ಕೊಟಬಾಗಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವೈಶಾಲಿ ಅವರು ಶುಕ್ರವಾರ ಹೆರಿಗೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಹೆರಿಗೆ ವಾರ್ಡ್‍ನಲ್ಲಿ ದಾಖಲಾಗಿದ್ದರು. ಶನಿವಾರ ಬೆಳಗ್ಗೆ ಸಿಜೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು ಎನ್ನಲಾಗಿದೆ.

ಭಾನುವಾರ ಬೆಳಗ್ಗೆಯವರೆಗೂ ಹುಷಾರಾಗಿಯೇ ಇದ್ದರು. ಆದರೆ, ಇದ್ದಕ್ಕಿದ್ದಂತೆ ಎದೆನೋವು ಎಂದು ಹೇಳಲು ಶುರು ಮಾಡಿದ್ದರು. ಬೆಳಗ್ಗೆ 10.30ರ ವರೆಗೂ ಯಾವೊಬ್ಬ ವೈದ್ಯರೂ ಬರಲಿಲ್ಲ ಎಂದು ಮೃತ ವೈಶಾಲಿ ಅವರ ಅತ್ತೆ ಈರವ್ವ ದೂರಿದ್ದಾರೆ.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ವೈಶಾಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆದರೆ ಯಾವುದೇ ಕಾರಣಕ್ಕೂ ಬಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಬಾರದು. ನಮಗೆ ವೈದ್ಯರ ಮೇಲೆ ನಂಬಿಕೆ ಇಲ್ಲ ಎಂದು ಕುಟುಂಬಸ್ಥರು ಆಗ್ರಹಿಸಿದರು.

ಪತ್ನಿ ಸಾವಿನ ಸುದ್ದಿ ತಿಳಿದು ಈರಣ್ಣ ಕೊಟಬಾಗ್ ಅವರು ಆಘಾತಕ್ಕೊಳಗಾಗಿದ್ದಾರೆ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ ಆಸ್ಪತ್ರೆಯ ಸಮಸ್ಯೆ ಬಗೆಹರಿಸಿದ್ದರು ಎಂದು ಕೇಳದ್ದೆ. ಆದರೆ, ಆಸ್ಪತ್ರೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವೈದ್ಯರು ರೋಗಿಗಳಿಗೆ ಕ್ಯಾರೇ ಎನ್ನುತ್ತಿಲ್ಲ. ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿಲ್ಲ. ವೈದ್ಯರ ನಿರ್ಲಕ್ಷ್ಯದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇನೆಂದು ಹೇಳಿದ್ದಾರೆ.

ಈ ನಡುವೆ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎರಡು ದಿನಗಳ ಹಿಂದೆಯಷ್ಟೇ ಮೃತ ವೈಶಾಲಿ ಪತಿಯ ಜೊತೆ ಸಂಭ್ರಮದಿಂದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಇದೀಗ ಇದ್ದಕ್ಕಿದ್ದಂತೆ ಸಾವನ್ನಪ್ಪಿನ್ನಪ್ಪಿರುವುದು ಕುಟುಂಬಕ್ಕೆ ಆಘಾತ ತಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT