ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಶೀಘ್ರದಲ್ಲೇ ಆಟೋ ದರ ಏರಿಕೆ; ಪ್ರತಿ ಕಿ.ಮೀಗೆ 5 ರೂ. ಹೆಚ್ಚಳ ಸಾಧ್ಯತೆ!

ಪ್ರತಿ ಒಂದು ಕಿಲೋ ಮೀಟರ್ ದೂರಕ್ಕೆ 15-20 ರೂಪಾಯಿ ಮತ್ತು 2 ಕಿಲೋ ಮೀಟರ್ ದೂರಕ್ಕೆ 30-40 ರೂಪಾಯಿಗೆ ದರ ಪರಿಷ್ಕರಿಸುಬೇಕೆಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ಹೊಸ ವರ್ಷಕ್ಕೆ ಜನ ಸಾಮಾನ್ಯರಿಗೆ ಆಟೋ ದರ ಏರಿಕೆ ಶಾಕ್ ಸಿಗುವ ಸಾಧ್ಯತೆ ದಟ್ಟವಾಗುತ್ತಿದೆ. ಪ್ರತಿ ಒಂದು ಕಿಲೋ ಮೀಟರ್ ಗೆ 5 ರೂಪಾಯಿವರೆಗೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

ತೈಲಬೆಲೆ ಏರಿಕೆ, ಬಿಡಿಭಾಗಗಳ ಬೆಲೆ ಏರಿಕೆ, ದೈನಂದಿನ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ, ಆಟೋ ಮಿನಿಮಮ್ ದರವನ್ನು ಏರಿಸಬೇಕೆಂದು ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಆಗ್ರಹಿಸುತ್ತಿದ್ದಾರೆ.

ಪ್ರತಿ ಒಂದು ಕಿಲೋ ಮೀಟರ್ ದೂರಕ್ಕೆ 15 ರೂಪಾಯಿಂದ 20 ರೂಪಾಯಿಗೆ ಮತ್ತು 2 ಕಿಲೋ ಮೀಟರ್ ದೂರಕ್ಕೆ 30 ರೂಪಾಯಿಯಿಂದ 40 ರೂಪಾಯಿಗೆ ದರ ಪರಿಷ್ಕರಿಸುವಂತೆ ಒತ್ತಾಯಿಸಿದ್ದಾರೆ.

ದರ ಪರಿಷ್ಕರಣೆ ಕುರಿತು ಸೋಮವಾರ ರಾಜ್ಯ ಸಾರಿಗೆ ಇಲಾಖೆ ಹಾಗೂ ಆಟೋ ಯೂನಯನ್ ಗಳು ಸಭೆ ನಡೆಯಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಭೆಯನ್ನು ಮುಂದೂಡಲಾಗಿದ್ದು, ಪ್ರಯಾಣ ದರ ಹೆಚ್ಚಳ ಬೇಡಿಕೆ ಪರಿಗಣನೆಯಾಗುವ ಸಾಧ್ಯತೆ ಎಂದು ಸಾರಿಗೆ ಇಲಾಖೆ ಮೂಲಗಳಉ ತಿಳಿಸಿವೆ.

ಆಟೋರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರ ಮೂರ್ತಿ ಮಾತನಾಡಿ, 2021 ರಲ್ಲಿ ದರಗಳನ್ನು ಪರಿಷ್ಕರಿಸಲಾಗಿತ್ತು. ಆಟೋಗಳ ಕಾರ್ಯಾಚರಣೆಯ ವೆಚ್ಚವು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಇಂಧನ, ಬಿಡಿಭಾಗಗಳು ಮತ್ತು ಟೈರ್‌ಗಳ ಬೆಲೆ, ಕಾರ್ಯಾಚರಣೆಯ ವೆಚ್ಚವು ಹೆಚ್ಚುತ್ತಿದೆ. ಆದರೆ, ದರ ಮಾತ್ರ ಎಂದಿನಂತೆಯೇ ಇದೆ ಎಂದು ಹೇಳಿದ್ದಾರೆ.

ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಎಂ.ಮಂಜುನಾಥ್ ಮಾತನಾಡಿ, ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಶಾಲಾ ಶುಲ್ಕ, ಆಸ್ಪತ್ರೆ ವೆಚ್ಚ ಹೀಗೆ ಎಲ್ಲದರಲ್ಲೂ ಏರಿಕೆಯಾಗಿದೆ. ಆಟೋ ಚಾಲಕರು ತಮ್ಮ ಕುಟುಂಬವನ್ನು ಹೇಗೆ ನಡೆಸಬೇಕು? ಹಲವಾರು ಚಾಲಕರು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಬಡ್ಡಿ ಪಾವತಿಸಲು ಹೆಣಗಾಡುತ್ತಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ನೌಕರರ ವೇತನವನ್ನು ನಿಯಮಿತವಾಗಿ ಪರಿಷ್ಕರಿಸಲಾಗುತ್ತದೆ. ಆಟೋ ಚಾಲಕರು ಕೇವಲ ಮೀಟರ್ ದರವನ್ನು ಅವಲಂಬಿಸಿರುತ್ತಾರೆ. ಹೆಚ್ಚುತ್ತಿರುವ ವೆಚ್ಚಗಳಿಗೆ ಅನುಗುಣವಾಗಿ ದರಗಳ ನಿಯಮಿತ ಪರಿಷ್ಕರಣೆಯನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆ ಆಟೋ ಚಾಲಕರು ತಮ್ಮ ಗೃಹಿಣಿಯರಿಗೆ ಪ್ರತಿದಿನ 100 ರೂಪಾಯಿ ನೀಡಿ ಸ್ವಲ್ಪ ಹಣವನ್ನು ಉಳಿಸುತ್ತಿದ್ದರು. ಆದರೆ, ಈಗ ಹೆಚ್ಚುತ್ತಿರುವ ದೈನಂದಿನ ವೆಚ್ಚದಿಂದ ಕುಟುಂಬದವರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗದಂತಾಗಿದೆ ಎಂದು ತಿಳಿಸಿದ್ದಾರೆ.

ಮಂಗಳೂರು, ಉಡುಪಿ ಮತ್ತು ಶಿವಮೊಗ್ಗದಲ್ಲಿ ಆಟೋ ದರವನ್ನು ಪರಿಷ್ಕರಿಸಲಾಗಿದೆ. ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಆಟೋ ಚಾಲಕರ ಮೇಲೆ ತೀವ್ರ ಪರಿಣಾಮ ಬೀರಿದೆ. ಬೈಕ್ ಟ್ಯಾಕ್ಸಿ ವಿಚಾರ ಹೈಕೋರ್ಟ್ ಅಂಗಳದಲ್ಲಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದ ನಂತರ ದರವನ್ನು ಪರಿಷ್ಕರಿಸಬೇಕು ಎಂದು ಕೆಲ ಆಟೋ ಚಾಲಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT