ಕೊತ್ತನೂರಿನ ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಹದಗೆಟ್ಟ ರಸ್ತೆ, ಚರಂಡಿ ತುಂಬಿ ಹರಿಯುವ ನೀರು; ಪರಿತಪ್ಪಿಸುತ್ತಿರುವ ಕೊತ್ತನೂರು ನಿವಾಸಿಗಳು!

ಈ ಪ್ರದೇಶದ ರಸ್ತೆಗಳು ಭಯಾನಕ ಸ್ಥಿತಿಯಲ್ಲಿವೆ. ಮಳೆಯ ಸಮಯದಲ್ಲಿ ಹೊಂಡಗಳು ಮತ್ತು ನೀರು ತುಂಬುವುದರಿಂದ ಪ್ರಯಾಣವು ಅತ್ಯಂತ ಅಪಾಯಕಾರಿಯಾಗಿದೆ.

ಬೆಂಗಳೂರು: ಗುಂಡಿಗಳಿಂದ ಕೂಡಿದ ರಸ್ತೆಗಳು, ಮುಚ್ಚಿಹೋಗಿರುವ ಚರಂಡಿಗಳು, ತುಂಬಿ ಹರಿಯುತ್ತಿರುವ ತ್ಯಾಜ್ಯ ನೀರು, ತೆರೆದ ಚರಂಡಿಯಿಂದ ದುರ್ವಾಸನೆ, ಹೆಚ್ಚುತ್ತಿರುವ ಮಾಲಿನ್ಯದಿಂದ ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಲಯದ ಕೆಆರ್ ಪುರಂ ವಿಧಾನಸಭಾ ಕ್ಷೇತ್ರದ ಹೊರಮಾವು ವಾರ್ಡ್‌ನಲ್ಲಿರುವ ಕೊತ್ತನೂರಿನ ಜನರ ಬದುಕು ಹೇಳತೀರದಂತಾಗಿದೆ.

ಅಲ್ಲದೆ, ಅಪೂರ್ಣ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆಯಲ್ಲಿ ಸುರಿಯುತ್ತಿದ್ದು, ಆಗಾಗ್ಗೆ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಕಿರಿದಾದ, ಗುಂಡಿಗಳಿಂದ ಕೂಡಿದ ರಸ್ತೆಗಳು, ಮಳೆಯ ಸಮಯದಲ್ಲಿ ನೀರಿನೊಂದಿಗೆ ಸೇರಿ, ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರಿಗೆ, ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ದಿನನಿತ್ಯ ಅಪಾಯವನ್ನುಂಟು ಮಾಡುತ್ತಿದೆ. ಈ ಕುರಿತು ವಾರ್ಡ್ ಎಂಜಿನಿಯರ್‌ಗಳು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಕಳೆದ ಮೂರು ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನಿವಾಸಿಗಳು ದೂರುತ್ತಾರೆ.

ಈ ಪ್ರದೇಶದ ರಸ್ತೆಗಳು ಭಯಾನಕ ಸ್ಥಿತಿಯಲ್ಲಿವೆ. ಮಳೆಯ ಸಮಯದಲ್ಲಿ ಹೊಂಡಗಳು ಮತ್ತು ನೀರು ತುಂಬುವುದರಿಂದ ಪ್ರಯಾಣವು ಅತ್ಯಂತ ಅಪಾಯಕಾರಿಯಾಗಿದೆ. ಪದೇ ಪದೇ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ" ಎಂದು ಹೊರಮಾವು ನಿವಾಸಿ ವರ್ಖೆ ಥಾಮಸ್ TNIE ಗೆ ಹೇಳಿದರು.

ಮತ್ತೋರ್ವ ನಿವಾಸಿ ಉಮೇಶ್ ಬಾಬು, "ಬಿಬಿಎಂಪಿಗೆ ಯಾವುದೇ ಚುನಾವಣೆ ನಡೆಯದೆ ಕೊತ್ತನೂರಿನ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ. ಸರಿಯಾದ ಆಡಳಿತ ಇಲ್ಲದೆ ನಿವಾಸಿಗಳು ಪರಿತಪಿಸುತ್ತಿದ್ದಾರೆ ಎಂದು ತಿಳಿಸಿದರು. ಇದಲ್ಲದೆ ಗಾಳಿಯ ಗುಣಮಟ್ಟBG ಹದಗೆಟ್ಟಿದೆ. ನಿರ್ಮಾಣದ ಅವಶೇಷಗಳಿಂದ ಧೂಳು ಮತ್ತು ವಾಹನಗಳ ಹೊರಸೂಸುವಿಕೆ ಮಾಲಿನ್ಯವನ್ನು ಹೆಚ್ಚಿಸುತ್ತಿದ್ದು, ಉಸಿರಾಟ ಹಾಗೂ ಅಲರ್ಜಿ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ನಿವಾಸಿಗಳು ಅಳಲು ತೋಡಿಕೊಂಡರು.

ಕೊತ್ತನೂರು ಮತ್ತು ಹೊರಮಾವು ನಿವಾಸಿಗಳು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ನಮಗೆ ಅರಿವಿದ್ದು, ಅಭಿವೃದ್ಧಿ ಕಾಮಗಾರಿಗಳು ಆರಂಭವಾಗಿದ್ದು, ಗುಂಡಿ ತೋಡುವ ಕಾರ್ಯವನ್ನು ವ್ಯವಸ್ಥಿತವಾಗಿ ಆರಂಭಿಸಲಾಗುವುದು. ರಸ್ತೆ ಮತ್ತು ಫುಟ್‌ಪಾತ್‌ಗಳಲ್ಲಿ ಕಸ ಸುರಿಯದಂತೆ ಎಚ್ಚರಿಕೆ ವಹಿಸುವುದಾಗಿ ಕೆಆರ್ ಪುರ ಉಪವಿಭಾಗದ ಬಿಬಿಎಂಪಿ ಕಾರ್ಯಪಾಲಕ ಎಂಜಿನಿಯರ್ ಎಂ. ಚನ್ನಬಸಪ್ಪ ಭರವಸೆ ನೀಡಿದರು. ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು ಮತ್ತು ಕೊತ್ತನೂರಿನಲ್ಲಿ ಸುಸ್ಥಿರ ನಗರಾಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT