20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್‌ ಗಳಿಗೆ ಚಾಲನೆ 
ರಾಜ್ಯ

KSRTC: 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್‌ ಸೇವೆಗೆ

ಇಂದು ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಮುಂಭಾಗ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳಿಗೆ ಚಾಲನೆ ನೀಡಲಾಯಿತು.

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್‌ಗಳಿಗೆ ಮಂಗಳವಾರ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.

ಇಂದು ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಮುಂಭಾಗ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳಿಗೆ ಚಾಲನೆ ನೀಡಿ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಎರಡು ತಿಂಗಳ ಮುಂಚೆ 20 ವೋಲ್ವೋ ಬಸ್​ಗಳಿಗೆ ಚಾಲನೆ ನೀಡಲಾಗಿತ್ತು. ಅಂಬಾರಿ ಉತ್ಸವ ಸ್ಲೀಪರ್​ ಬಸ್​ಗಳಿಗೆ ಇವತ್ತು ಚಾಲನೆ ನೀಡಿದ್ದೇವೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ಅಂತರರಾಜ್ಯಗಳಿಗೆ ಈ ಬಸ್​ಗಳು ಸಂಚಾರ ಮಾಡುತ್ತವೆ ಎಂದರು.

ಇದೇ ವೇಳೆ ಹುಮನಾಬಾದ್ ತರಬೇತಿ ಕೇಂದ್ರದಲ್ಲಿ ನಡೆದ ಚಾಲನಾ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 82 ಅಭ್ಯರ್ಥಿಗಳಿಗೆ ಚಾಲಕ ಕಮ್ ಕಂಡಕ್ಟರ್‌ಗಳ ತಾತ್ಕಾಲಿಕ ನೇಮಕಾತಿ ಆದೇಶವನ್ನು ಸಚಿವರು ವಿತರಿಸಿದರು.

ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಗುಬ್ಬಿ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್‌ಆರ್ ಶ್ರೀನಿವಾಸ್, ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಉಪಸ್ಥಿತರಿದ್ದರು.

ಅಂಬಾರಿ ಉತ್ಸವ ಸ್ಲೀಪರ್ ಬಸ್ಸುಗಳು ಬೆಂಗಳೂರು ಮತ್ತು ಕುಂದಾಪುರ, ಮಂಗಳೂರು, ನೆಲ್ಲೂರು, ಹೈದರಾಬಾದ್, ವಿಜಯವಾಡ, ಕೋಝಿಕ್ಕೋಡ್, ತ್ರಿಶೂರ್ ಮತ್ತು ಎರ್ನಾಕುಲಂ ನಡುವೆ ಕಾರ್ಯನಿರ್ವಹಿಸಲಿವೆ.

ನಾಲ್ಕು ಸಾರಿಗೆ ನಿಗಮಗಳಲ್ಲಿ 9,000 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಇಲ್ಲಿಯವರೆಗೆ 2,144 ಚಾಲಕರು, ಕಂಡಕ್ಟರ್‌ಗಳು ಮತ್ತು ತಾಂತ್ರಿಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗಿದೆ. ಇನ್ನುಳಿದ 6,856 ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!