ರಾಜ್ಯ

News Headlines 24-12-24 | ಸಚಿವೆ ಲಕ್ಷ್ಮೀ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಕೆ: CID ತನಿಖೆ; ಡಿಕೆ ಸುರೇಶ್ ಹೆಸರಲ್ಲಿ 8 ಕೋಟಿ ವಂಚನೆ: FIR ದಾಖಲು; ಡಿಜಿಟಲ್ ಅರೆಸ್ಟ್ ಬಗ್ಗೆ ಎಚ್ಚರಿಕೆಯಿಂದಿರಿ!

ಸಚಿವೆ ಲಕ್ಷ್ಮೀ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಕೆ: CID ತನಿಖೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ MLC ಸಿ.ಟಿ ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಇನ್ನು ಕೆಲವರು ಇಲ್ಲ ಎನ್ನುತ್ತಿದ್ದಾರೆ. ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಸಿಐಡಿ ತನಿಖೆಗೆ ವಹಿಸಿದ್ದೇನೆ. ಸಭಾಪತಿ ತಮ್ಮ ಕೆಲಸ ಮಾಡಿದ್ದಾರೆ, ಪೊಲೀಸರು ತನಿಖೆ ಮಾಡಬೇಕು ಎಂದರು. ಇನ್ನು ಅಶ್ಲೀಲ ಪದ ಬಳಕೆ ಪ್ರಕರಣವನ್ನು ಸಿಐಡಿಗೆ ವಹಿಸಿರುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ವಿಪಕ್ಷ ನಾಯಕ ಆರ್. ಅಶೋಕ್ ನಿಯೋಗ. ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದೆ. ಮತ್ತೊಂದೆಡೆ ಸಿಟಿ ರವಿ ಅವರನ್ನು ಬಂಧಿಸಿದ ನಂತರ ರಾತ್ರಿಯಿಡಿ ಸುತ್ತಾಡಿಸಿದ್ದೇಕೆ ಎಂಬ ಬಗ್ಗೆ ಬೆಳಗಾವಿ ಪೊಲೀಸರು ಸ್ಪಷ್ಟನೆ ನೀಡಿದ್ದು ಭದ್ರತಾ ಕಾರಣಗಳಿಗಾಗಿ ಮತ್ತು ಸಾರ್ವಜನಿಕರಿಗೆ ಅಡ್ಡಿಯಾಗುವುದನ್ನು ತಪ್ಪಿಸಲು ವಿವಿಧ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು ಎಂದು ಹೇಳಿದರು.

ವಂಚನೆ ಪ್ರಕರಣ: Facebook ಗೆಳತಿಯಿಂದ ವರ್ತೂರ್ ಪ್ರಕಾಶ್ ಗೆ ಸಂಕಷ್ಟ; ಬಂಧನ ಭೀತಿ

ಚಿನ್ನಾಭರಣ ಖರೀದಿಸಿ ವಂಚಿಸಿದ ಪ್ರಕರಣದಲ್ಲಿ ಫೇಸ್‌‍ಬುಕ್‌ ಗೆಳತಿ ಶ್ವೇತಾ ಗೌಡ ಪ್ರಕರಣ ಸಂಬಂಧ ಇಂದು ಮಾಜಿ ಸಚಿವ ವರ್ತೂರು ಪ್ರಕಾಶ್‌ ಇಂದು ಭಾರತಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ಎಸಿಪಿ ಗೀತಾ ಎದುರು ವಿಚಾರಣೆ ಎದುರಿಸಿದ್ದಾರೆ. ಇದೇ ವೇಳೆ ಆರೋಪಿ ಶ್ವೇತಾ ಗೌಡ ಕೊಟ್ಟಿದ್ದ ಉಡುಗೊರೆ ನಗದು, ಚಿನ್ನಾಭರಣ ಎಲ್ಲವನ್ನೂ ಪೊಲೀಸರಿಗೆ ವಾಪಸ್‌ ಕೊಟ್ಟಿದ್ದಾರೆ. ಒಟ್ಟು 12.50 ಲಕ್ಷ ರೂ. ನಗದು, ಮೂರು ಬ್ರಾಸ್ ಲೆಟ್, 1 ಚಿನ್ನದ ಉಂಗುರವನ್ನ ಎಸಿಪಿ ಗೀತಾ ಎದುರಿಗೇ ಪೊಲೀಸರಿಗೆ ಒಪ್ಪಿಸಿದ್ದಾರೆ. ವಂಚನೆ ಪ್ರಕರಣ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಾಗಲಗುಂಟೆ ನಿವಾಸಿ ಶ್ವೇತಾ ಗೌಡಳನ್ನು ಬಂಧಿಸಿದ್ದು ಚಿನ್ನಾಭರಣ, ಕಾರು ಹಾಗೂ ಇತರೆ ವಸ್ತುಗಳನ್ನು ಜಪ್ತಿ‌ ಮಾಡಿದ್ದರು. ವಿಚಾರಣೆ ವೇಳೆ ಆರೋಪಿ ವರ್ತೂರ್ ಪ್ರಕಾಶ್ ಹೆಸರು ಬಾಯ್ಬಿಟ್ಟಿದ್ದರಿಂದ ಮಾಜಿ ಸಚಿವರು ವಿಚಾರಣೆ ಎದುರಿಸಬೇಕಾಗಿ ಬಂದಿತ್ತು.

ತನಿಖಾ ಸಂಸ್ಥೆಗಳು ಡಿಜಿಟಲ್ ಅರೆಸ್ಟ್ ಮಾಡಲ್ಲ. ಸಾರ್ವಜನಿಕರಿಗೆ ಬಿ. ದಯಾನಂದ ಮುನ್ನೆಚ್ಚರಿಕೆ

ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಪ್ರಕರಣಗಳಿಂದ ಅಮಾಯಕರು ಹಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು, ನಮ್ಮ ಕಾನೂನು, ಸಂವಿಧಾನದಲ್ಲಿ ಡಿಜಿಟಲ್ ಅರೆಸ್ಟ್ ಎನ್ನುವ ವಿಧಾನವೇ ಇಲ್ಲ. ಮಹಾರಾಷ್ಟ್ರ, ಮುಂಬೈ ಸೇರಿದಂತೆ ಎಲ್ಲಿಯೂ ಯಾವುದೇ ತನಿಖಾ ಸಂಸ್ಥೆಗಳು ಡಿಜಿಟಲ್ ಅರೆಸ್ಟ್ ಮಾಡುವುದಿಲ್ಲ. ಈ ಬೆದರಿಕೆ ಕರೆಗಳ ಕುರಿತು ಸಾರ್ವಜನಿಕರು ತಿಳಿದುಕೊಳ್ಳಬೇಕಿದೆ ಎಂದರು. 2024ರ ನವೆಂಬರ್‌ ಅಂತ್ಯಕ್ಕೆ ರಾಜ್ಯದಲ್ಲಿ ಒಟ್ಟು 641 ಡಿಜಿಟಲ್‌ ಅರೆಸ್ಟ್‌ ಪ್ರಕರಣಗಳು ವರದಿಯಾಗಿದ್ದು, 109 ಕೋಟಿ ರೂ. ವಂಚಕರ ಪಾಲಾಗಿದೆ. ಆ ಪೈಕಿ ಬೆಂಗಳೂರಲ್ಲೇ 480 ಪ್ರಕರಣಗಳು ವರದಿಯಾಗಿದೆ. ಅಷ್ಟೇ ಅಲ್ಲದೆ ಬೆಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿ ವಿಜಯ್ ಕುಮಾರ್ ಎಂಬಾತ ಡಿಜಿಟಲ್ ಜಾಲದ ಬಲೆಗೆ ಸಿಲುಕಿ 12 ಕೋಟಿ ರೂಪಾಯಿ ಕಳೆದುಕೊಂಡಿದ್ದರು.

ಡಿಕೆ ಸುರೇಶ್‌ ಹೆಸರಲ್ಲಿ ಚಿನ್ನದಂಗಡಿ ಮಾಲೀಕರಿಗೆ 8 ಕೋಟಿ ರೂ. ವಂಚನೆ ಪ್ರಕರಣ

ಮಾಜಿ ಸಂಸದ ಡಿಕೆ ಸುರೇಶ್‌ ಅವರ ಸಹೋದರಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಚಿನ್ನಾಭರಣ ಮಳಿಗೆ ಮಾಲೀಕರಿಗೆ 8 ಕೋಟಿ ರೂಪಾಯಿಗಿಂತಲೂ ಅಧಿಕ ಮೊತ್ತದ ವಂಚನೆ ಮಾಡಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಐಶ್ವರ್ಯಾ ಗೌಡ ವಿರುದ್ಧ ಚಂದ್ರ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ಮಾಲೀಕರಾದ ವನಿತಾ ಐತಾಳ್ ಎಂಬುವವರು ಐಶ್ವರ್ಯಾ ಗೌಡ ಜತೆ ನಟ ಧರ್ಮೇಂದ್ರ ಹಾಗೂ ಹರೀಶ್ ಎಂಬುವವರ ವಿರುದ್ಧವೂ ದೂರು ನೀಡಿದ್ದಾರೆ. 2023ರ ಅಕ್ಟೋಬರ್ ನಿಂದ 2024ರ ಏಪ್ರಿಲ್ ವರೆಗೆ ಹಂತ ಹಂತವಾಗಿ ಐಶ್ವರ್ಯಾ ಗೌಡ 8 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನ ಖರೀದಿ ಮಾಡಿದ್ದಾರೆ. ಚಿನ್ನದ ಹಣ ಪಾವತಿಸುವಂತೆ ಕೇಳಿದ ಸಂದರ್ಭದಲ್ಲಿ ಡಿಕೆ ಸುರೇಶ್ ರಿಂದ ಕರೆ ಮಾಡಿಸಿದ್ದರಂತೆ. ಜತೆಗೆ ಸಿನಿಮಾ ನಟ ಧರ್ಮೇಂದ್ರರಿಂದ ಕರೆ ಮಾಡಿಸಿ ಕೊಲೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

11/9 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!