ಡ್ರೋನ್ ಪ್ರತಾಪ್ 
ರಾಜ್ಯ

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ: ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು!

ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಮಧುಗಿರಿ: ಮಧುಗಿರಿ ತಾಲೂಕಿನಲ್ಲಿ ಇತ್ತೀಚಿಗೆ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ನ್ಯಾಯಾಲಯದಿಂದ ಜಾಮೀನು ದೊರಕಿದೆ. ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಇಂದು ಅವರು ಜೈಲಿನಿಂದ ಹೊರಗೆ ಬರುವ ಸಾಧ್ಯತೆಯಿದೆ.

ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ ಈಗ ಅವರಿಗೆ ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಜಾಮೀನು ನೀಡಿದೆ.

ಏನಿದು ಪ್ರಕರಣ: ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟದ ಪ್ರಯೋಗ ಮಾಡಿದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಡ್ರೋನ್ ಪ್ರತಾಪ್ ಅಪ್ಲೋಡ್‌ ಮಾಡಿದ್ದರು. ಈ ವಿಡಿಯೋವನ್ನು ಆಧರಿಸಿ ಮಿಡಿಗೇಶಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ಡ್ರೋನ್‌ ಪ್ರತಾಪ್‌ನನ್ನು ಬಂಧಿಸಿ, ಜೈಲಿಗೆ ಕಳುಹಿಸಿದ್ದರು.

ಡ್ರೋನ್ ಪ್ರತಾಪ್ ವಿರುದ್ಧ ಬಿಎನ್​ಎಸ್​ ಸೆಕ್ಷನ್ 288 ಹಾಗೂ ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಡಿಸೆಂಬರ್​ 12ರಂದು ಅವರನ್ನು ಬಂಧಿಸಲಾಗಿತ್ತು. ನಂತರ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಬಳಿಕ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಡಿಸೆಂಬರ್​ 26ರ ತನಕ ಅವರು ನ್ಯಾಯಾಂಗ ಬಂಧನದಲ್ಲಿ ಇರಬೇಕಾಗಿತ್ತು. ಆದರೆ ಈಗ ಜಾಮೀನು ಮಂಜೂರು ಆಗಿರುವುದರಿಂದ ಬಿಡುಗಡೆ ಭಾಗ್ಯ ಸಿಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿ

ಚಲಿಸುತ್ತಿದ್ದ ಐಶಾರಾಮಿ ಕಾರಿನಲ್ಲೇ 'ದಮ್ ಮಾರೋ ದಮ್'; ಸಿಗರೇಟ್ ರಸ್ತೆಗೆಸೆದ Yuzvendra Chahal? Video Viral

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

SCROLL FOR NEXT