ರಾಜ್ಯಪಾಲರನ್ನು ಭೇಟಿ ಮಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಮತ್ತು ಶಾಸಕರು 
ರಾಜ್ಯ

ಸಿಟಿ ರವಿಯನ್ನು ಟೆರರಿಸ್ಟ್ ರೀತಿ ನಡೆಸಿಕೊಳ್ಳಲಾಗಿದೆ: ನ್ಯಾಯಾಂಗ ತನಿಖೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ವಿಧಾನ ಪರಿಷತ್ತಿನಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಆಧಾರದ ಮೇಲೆ ಎಂಎಲ್‌ಸಿ ಸಿಟಿ ರವಿ ಅವರನ್ನು ಬೆಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದರು.

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣ ಸಂಬಂಧ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಯೋಗವು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ನಂತರ ಮಂಗಳವಾರ ಮಾತನಾಡಿದ ಅವರು, ಸಿಟಿ ರವಿ ಅವರನ್ನು ಬಂಧಿಸಲಾಯಿತು ಮತ್ತು ರಾತ್ರಿಯಿಡೀ ಊಟ-ನೀರು ನೀಡದೆ ಅಲ್ಲಿಂದಿಲ್ಲಿಗೆ ಓಡಾಡಿಸಲಾಗಿದೆ. ಅವರನ್ನು ಭಯೋತ್ಪಾದಕನಂತೆ ನಡೆಸಿಕೊಳ್ಳಲಾಯಿತು ಎಂದು ದೂರಿದರು.

ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಮತ್ತು ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಸಿಟಿ ರವಿ ಅವರನ್ನು ನಡೆಸಿಕೊಂಡ ರೀತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದೇವೆ. ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದೇವೆ ಎಂದರು.

ವಿಧಾನ ಪರಿಷತ್ತಿನಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಆಧಾರದ ಮೇಲೆ ಎಂಎಲ್‌ಸಿ ಸಿಟಿ ರವಿ ಅವರನ್ನು ಬೆಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದರು. ಕರ್ನಾಟಕ ಹೈಕೋರ್ಟ್ ಶುಕ್ರವಾರ ನೀಡಿದ ಮಧ್ಯಂತರ ಆದೇಶದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ನೀವಿಬ್ರೇ ಅಲ್ವಾ ಹೇಳಿದ್ದು..': ಲೈವ್ ನಲ್ಲೇ ನಾಸರ್ ಹುಸೇನ್-ಅಥೆರ್ಟನ್ ಗೆ ತಿವಿದ Dinesh Karthik, ಮುಖ ಮುಚ್ಚಿಕೊಂಡ ಮಾಜಿ ದಂತಕಥೆಗಳು!

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

SCROLL FOR NEXT