ಸಾಂದರ್ಭಿಕ ಚಿತ್ರ 
ರಾಜ್ಯ

ಒಬಾಮಾ ಭೇಟಿ ಹಿನ್ನೆಲೆಯಲ್ಲಿ ಸ್ಫೋಟಕ್ಕೆ ಸಂಚು: ಭಟ್ಕಳದ ಮೂವರಿಗೆ 10 ವರ್ಷ ಜೈಲು ಶಿಕ್ಷೆ!

ಮೂವರಿಗೆ ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ಬೆಂಗಳೂರು: ಜನವರಿ 26, 2015 ರಂದು ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತ ಭೇಟಿಗೂ ಮುನ್ನ ಸ್ಫೋಟ ನಡೆಸಲು ಸಂಚು ರೂಪಿಸಿದ್ದಕ್ಕಾಗಿ ಭಟ್ಕಳದ ಡಾ. ಸೈಯದ್ ಇಸ್ಮಾಯಿಲ್ ಅಫಾಕ್ ಮತ್ತಿತರ ಆರೋಪಿಗಳಾದ ಅಬ್ದುಲ್ ಸಬೂರ್ ಮತ್ತು ಸದ್ದಾಂ ಹುಸೇನ್‌ಗೆ ಎನ್‌ಐಎ ಪ್ರಕರಣಗಳ ವಿಶೇಷ ನ್ಯಾಯಾಲಯ10 ವರ್ಷಗಳ ಸರಳ ಜೈಲು ಶಿಕ್ಷೆಯನ್ನು ಮಂಗಳವಾರ ವಿಧಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಮೂವರು ಆರೋಪಿಗಳು ಪಾಕಿಸ್ತಾನದ ಸೂಚನೆಗಳನ್ನು ಪಾಲಿಸುತ್ತಿದ್ದರು ಎಂದು ವರದಿಯಾಗಿದೆ. ನ್ಯಾಯಾಲಯ ಅಫಾಕ್‌ಗೆ 1.55 ಲಕ್ಷ ರೂಪಾಯಿ ಮತ್ತು ಸಬೂರ್ ಮತ್ತು ಹುಸೇನ್‌ಗೆ ತಲಾ 95,000 ರೂಪಾಯಿ ದಂಡ ವಿಧಿಸಿದೆ. ಮೂವರಿಗೆ ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ಈ ಆದೇಶ ನೀಡಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿಎಂ ಗಂಗಾಧರ, ಸೆಕ್ಷನ್ 428 CrPC ಅಡಿಯಲ್ಲಿ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಬೇಕು, ತಲೆಮರೆಸಿಕೊಂಡಿರುವ ಇತರ ಆರೋಪಿಗಳ ವಿರುದ್ಧದ ವಿಚಾರಣೆ ಮುಗಿಯುವವರೆಗೂ ದಾಖಲೆಗಳನ್ನು ಸಂರಕ್ಷಿಸಬೇಕು ಎಂದು ಆದೇಶ ನೀಡಿದರು.

ಈ ಸಂಬಂಧ ನಗರದ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ 2015ರಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಸಿಸಿಬಿ ಎಸಿಪಿ ತಮ್ಮಯ್ಯ ಎಂಕೆ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT