ಸಾಂದರ್ಭಿಕ ಚಿತ್ರ  
ರಾಜ್ಯ

ಕೋಲಾರ: ಇಬ್ಬರು ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆಗೆ ಶರಣು

ಪೊಲೀಸರ ಪ್ರಕಾರ, ಮಹಿಳೆ ಮತ್ತು ಆಕೆಯ ಪತಿ ಮಣಿ ಮದುವೆಯಾಗಿ 8 ವರ್ಷಗಳಾಗಿದ್ದು, ದಂಪತಿಗಳ ನಡುವಿನ ವೈವಾಹಿಕ ಕಲಹವೇ ಮಹಿಳೆ ಇಂತಹ ಕಠಿಣ ನಿರ್ಧಾರಕ್ಕೆ ತೆಗೆದುಕೊಳ್ಳಲು ಕಾರಣವಾಗಿದೆ ಎಂದು ಶಂಕಿಸಲಾಗಿದೆ.

ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನಲ್ಲಿ ಬುಧವಾರ 38 ವರ್ಷದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ತಿಪ್ಪಮ್ಮ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಮಹಿಳೆ ಮತ್ತು ಆಕೆಯ ಪತಿ ಮಣಿ ಮದುವೆಯಾಗಿ 8 ವರ್ಷಗಳಾಗಿದ್ದು, ದಂಪತಿಗಳ ನಡುವಿನ ವೈವಾಹಿಕ ಕಲಹವೇ ಮಹಿಳೆ ಇಂತಹ ಕಠಿಣ ನಿರ್ಧಾರ ತೆಗೆದುಕೊಳ್ಳಲು ಕಾರಣವಾಗಿದೆ ಎಂದು ಶಂಕಿಸಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆಯು ತನ್ನ ಏಳು ವರ್ಷದ ಮಗಳು ಮತ್ತು ನಾಲ್ಕು ವರ್ಷದ ಮಗನಿಗೆ ನೇಣು ಬಿಗಿದು ಕೊಂದಿದ್ದಾಳೆ. ನಂತರ ಆಕೆಯೂ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತದೇಹಗಳನ್ನು ಆಕೆಯ ಪತಿ ಪತ್ತೆ ಮಾಡಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯ ಭಾಗವಾಗಿ ಮಹಿಳೆಯ ಪತಿಯನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?