ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸುತ್ತಿರುವ ಸಿಎಂ. 
ರಾಜ್ಯ

ಬೆಳಗಾವಿ: ಹುತಾತ್ಮ ವೀರ ಯೋಧರಿಗೆ ಸಿಎಂ ಅಂತಿಮ ನಮನ, ಸರ್ಕಾರದಿಂದ ಸಕಲ ನೆರವಿನ ಭರವಸೆ

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿಗಳು ಪುಷ್ಪ ನಮನ ಸಲ್ಲಿಸಿ, ಅಂತಿಮ ಗೌರವ ಸಲ್ಲಿಸಿದರು.

ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವು ಕಂದಕಕ್ಕೆ ಉರುಳಿ ಬಿದ್ದು ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಹುತಾತ್ಮರಾದ ಇಬ್ಬರು ಯೋಧರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಅಂತಿಮ ನಮನ ಸಲ್ಲಿಸಿದರು.

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿಗಳು ಪುಷ್ಪ ನಮನ ಸಲ್ಲಿಸಿ, ಅಂತಿಮ ಗೌರವ ಸಲ್ಲಿಸಿದರು.

ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.

ಇದೇ ವೇಳ ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ, ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ, ಸೇನಾಧಿಕಾರಿಗಳು ಮತ್ತು ಮಾಜಿ ಸೈನಿಕರ ಸಂಘಟನೆಯವರು ಹಾಜರಿದ್ದರು‌.

ಇದೀಗ ಯೋಧರ ಪಾರ್ಥಿವ ಶರೀರಗಳನ್ನು ಸ್ವಗ್ರಾಮಗಳಿಗೆ ರವಾನಿಸಲಾಗುತ್ತಿದ್ದು. ಆ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಮತ್ತೋರ್ವ ಯೋಧ ಅನೂಪ್ ಅವರ ಪಾರ್ಥಿವ ಶರೀರವನ್ನು ಉಡುಪಿಯ ಕುಂದಾಪುರಕ್ಕೆ ರವಾನಿಸಲಾಗಿದ್ದು ದಕ್ಷಿಣಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಸೇನಾಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

SCROLL FOR NEXT