ಪ್ರಿಯಾಂಕ್ ಖರ್ಗೆ-ರಾಜು ಕಪನೂರು-ಸಚಿನ್ 
ರಾಜ್ಯ

ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ 1 ಕೋಟಿ ರೂ ಹಣಕ್ಕಾಗಿ ಬೇಡಿಕೆ, ಕೊಲೆ ಬೆದರಿಕೆ: ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ!

15 ಲಕ್ಷ ರೂಪಾಯಿ ಹಣ ಪಡೆದು ಟೆಂಡರ್ ನೀಡದೆ ವಂಚನೆ ಮಾಡಿದ್ದು, ಅಲ್ಲದೆ 1 ಕೋಟಿ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದು ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಚಿನ್ ಆರೋಪಿಸಿದ್ದಾನೆ.

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್‌ ರಾಜು ಕಪನೂರು ವಿರುದ್ಧ ಹಣಕ್ಕೆ ಬೇಡಿಕೆ, ಕೊಲೆ ಬೆದರಿಕೆಯಂತ ಗಂಭೀರ ಆರೋಪಗಳನ್ನು ಮಾಡಿ ಗುತ್ತಿಗೆದಾರನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. 26 ವರ್ಷದ ಸಚಿನ್ 7 ಪುಟಗಳ ಡೆತ್​ನೋಟ್​ ಬರೆದಿಟ್ಟು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್​ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಡೆತ್​ ನೋಟ್​ನಲ್ಲಿ ರಾಜು ಕಪನೂರು ವಿರುದ್ಧ ಹಣಕ್ಕೆ ಬೇಡಿಕೆ, ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ. 15 ಲಕ್ಷ ರೂಪಾಯಿ ಹಣ ಪಡೆದು ಟೆಂಡರ್ ನೀಡದೆ ವಂಚನೆ ಮಾಡಿದ್ದು, ಅಲ್ಲದೆ 1 ಕೋಟಿ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದು ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಚಿನ್ ಆರೋಪಿಸಿದ್ದಾನೆ. ಸದ್ಯ ಪೊಲೀಸರು ಸಚಿನ್ ಮೃತದೇಹವನ್ನು ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಈ ಸಂಬಂಧ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡೆತ್ ನೋಟ್​ನಲ್ಲಿ ರವಿ ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಲಾಗಿದೆ. ಈ ಹಿಂದೆ ಬೆಳಗಾವಿಯ ಗುತ್ತಿಗೆದಾರ ಸಂತೋಷ್​ ಎಂಬುವರು ಸಹ ಅಂದಿನ ಸಚಿವ ಕೆಎಸ್ ಈಶ್ವರಪ್ಪ ಅವರ ಹೆಸರನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದನು. ಈ ಪ್ರಕರಣದಲ್ಲಿ ಕೆಎಸ್ ಈಶ್ವರಪ್ಪ ಅವರು ರಾಜೀನಾಮೆ ಕೊಡಬೇಕಾಗಿ ಬಂತು. ಇದೀಗ ಬೀದರ್​ನಲ್ಲಿ ಸಚಿನ್ ಆತ್ಮಹತ್ಯೆಯಲ್ಲಿ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ಕೇಳಿಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಪ್ರಿಯಾಂಕ್ ಖರ್ಗೆ ಸ್ಪಷ್ಟನೆ:

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT