ಗಾಂಧೀಜಿ ಪುತ್ಥಳಿ 
ರಾಜ್ಯ

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣ

ಇದೇ ವೇಳೆ ವೀರಸೌಧದ ಆವರಣದಲ್ಲಿನ ಗಾಂಧಿ ಸ್ಮಾರಕ ಭವನದಲ್ಲಿನ ನವೀಕೃತ ಫೋಟೊ ಗ್ಯಾಲರಿಯನ್ನು‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ‌ ಅವರು ಗುರುವಾರ ಅನಾವರಣಗೊಳಿಸಿದರು. ಇದರೊಂದಿಗೆ ‘ಗಾಂಧಿ ಭಾರತ’ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಇದೇ ವೇಳೆ ವೀರಸೌಧದ ಆವರಣದಲ್ಲಿನ ಗಾಂಧಿ ಸ್ಮಾರಕ ಭವನದಲ್ಲಿನ ನವೀಕೃತ ಫೋಟೊ ಗ್ಯಾಲರಿಯನ್ನು‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.

ಬಳಿಕ ವೀರಸೌಧ (ಕಾಂಗ್ರೆಸ್ ಬಾವಿ) ಆವರಣದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಜಂಟಿಯಾಗಿ ಸಸಿ ನೆಟ್ಟು ನೀರೆರೆದರು.

ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ, ಶರಣಬಸಪ್ಪ ದರ್ಶನಾಪುರ, ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ‌ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ‌‌ ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಒಂ ಸಿಇಓ ರಾಹುಲ್ ಶಿಂಧೆ, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ, ಉಪ ನಿರ್ದೆಶಕರಾದ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT