ಸಿದ್ದರಾಮಯ್ಯ - ಮನಮೋಹನ್ ಸಿಂಗ್ 
ರಾಜ್ಯ

ದೇಶದ ಆರ್ಥಿಕತೆ ಮೇಲೆ ಮನಮೋಹನ್ ಸಿಂಗ್ ದೊಡ್ಡ ಛಾಪು ಮೂಡಿಸಿದ್ದಾರೆ: ಸಿದ್ದರಾಮಯ್ಯ ಸಂತಾಪ

ದೇಶ ಕಂಡ ಪ್ರಾಮಾಣಿಕ ಪ್ರಧಾನ ಮಂತ್ರಿಗಳಲ್ಲಿ ಅವರು ಒಬ್ಬರು. ಅವರು ದೇಶದ ಆರ್ಥಿಕತೆಯ ಮೇಲೆ ದೊಡ್ಡ ಛಾಪು ಮೂಡಿಸಿದ್ದಾರೆ.

ಬೆಳಗಾವಿ: ಡಿಸೆಂಬರ್ 26 ರಂದು ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ಆರ್ಥಿಕತೆಯ ಮೇಲೆ 'ದೊಡ್ಡ ಛಾಪು' ಮೂಡಿಸಿದ್ದಾರೆ. ಅತ್ಯಂತ ಗೌರವಾನ್ವಿತ ವ್ಯಕ್ತಿಯಾಗಿರುವ ಸಿಂಗ್, ಸರಳ, ಸಜ್ಜನ ಮತ್ತು ಪ್ರಾಮಾಣಿಕ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿದೆ.

'ಸಿಂಗ್ ಅವರ ಜೀವನವು ಒಂದು ರೀತಿಯಲ್ಲಿ ಅದ್ಭುತವಾಗಿದೆ. ಅವರು ಇಂದಿನ ಪಾಕಿಸ್ತಾನದ ಸಣ್ಣ ಹಳ್ಳಿಯಲ್ಲಿ ಜನಿಸಿದರು. ದೇಶದ ಮತ್ತು ವಿಶ್ವದ ಹೆಸರಾಂತ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರಾದರು. ಅವರು ನರಸಿಂಹರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಉದಾರೀಕರಣ ಮತ್ತು ಖಾಸಗೀಕರಣದ ಮೂಲಕ ಅವರು ಭಾರತದ ಆರ್ಥಿಕತೆಗೆ ಶಕ್ತಿ ತುಂಬಿದರು ಮತ್ತು ದೇಶ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಿದರು ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, 2004ರಲ್ಲಿ ಸೋನಿಯಾ ಗಾಂಧಿ ಅವರು ಸಿಂಗ್ ಅವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದರು. ಬಳಿಕ ಹತ್ತು ವರ್ಷಗಳ ಕಾಲ ಅವರು ನಿರ್ವಹಿಸಿದ ಜವಾಬ್ದಾರಿಯಿಂದ ದೇಶವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮೇಲೆತ್ತಿದ್ದಾರೆ. ದೇಶ ಕಂಡ ಪ್ರಾಮಾಣಿಕ ಪ್ರಧಾನ ಮಂತ್ರಿಗಳಲ್ಲಿ ಅವರು ಒಬ್ಬರು. ಅವರು ದೇಶದ ಆರ್ಥಿಕತೆಯ ಮೇಲೆ ದೊಡ್ಡ ಛಾಪು ಮೂಡಿಸಿದ್ದಾರೆ. ಅವರ ಜೀವನ ಮತ್ತು ದೇಶದ ಆರ್ಥಿಕತೆಯನ್ನು ರೂಪಿಸುವ ಕೆಲಸ ನಮಗೆಲ್ಲರಿಗೂ ಸ್ಫೂರ್ತಿಯಾಗಿದೆ ಎಂದರು.

'ಸಿಂಗ್ ಅವರಿಗೆ ಯಾವತ್ತೂ ಅಧಿಕಾರದ ಅಮಲು ಇರಲಿಲ್ಲ. ಅವರೊಬ್ಬ ಸರಳ, ಸಜ್ಜನ ಮತ್ತು ಪ್ರಾಮಾಣಿಕ ರಾಜಕಾರಣಿಯಾಗಿದ್ದರು. ಅವರು ಅತ್ಯಂತ ಗೌರವಾನ್ವಿತ ವ್ಯಕ್ತಿಯಾಗಿದ್ದರು. ರಾಜಕೀಯದಲ್ಲಿ ಘನತೆ ಮತ್ತು ಗೌರವದಿಂದ ಬದುಕಿದರು. ಅಂತಹ ವ್ಯಕ್ತಿ ಅಗಲಿದ್ದಾರೆ. ಅವರ ನಿಧನ ಭಾರತಕ್ಕೆ ದೊಡ್ಡ ನಷ್ಟ. ಸಿಂಗ್ ಅವರ ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ನಾನು ಭಗವಂತನನ್ನು ಪ್ರಾರ್ಥಿಸುತ್ತೇನೆ' ಎಂದು ಅವರು ಹೇಳಿದರು.

ಬಡವರಿಗೆ ಅಗ್ಗದ ದರದಲ್ಲಿ ಆಹಾರ ಧಾನ್ಯ ಸಿಗುವಂತೆ ಮಾಡಲು ಆಹಾರ ಭದ್ರತಾ ಕಾಯ್ದೆಯನ್ನು ಪರಿಚಯಿಸಿದರು. ಈ ಕಾನೂನು ಜಾರಿಗೆ ಬಂದ ನಂತರ ನಾನು ಕರ್ನಾಟಕದಲ್ಲಿ ಬಡವರಿಗೆ 1 ರೂಪಾಯಿಗೆ ಅಕ್ಕಿ ನೀಡುವ ಯೋಜನೆಯನ್ನು ತಂದಿದ್ದೇನೆ. ನಂತರ ಅದನ್ನು 5 ಕೆಜಿ ಅಕ್ಕಿ ಉಚಿತ ಎಂದು ಬದಲಾಯಿಸಲಾಯಿತು ಎಂದು ಸಿದ್ದರಾಮಯ್ಯ ತಿಳಿಸಿದರು.

ಇಂದು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಬಡವರಿಗೆ 5 ಕೆಜಿ ಉಚಿತ ಅಕ್ಕಿ ನೀಡುತ್ತಿದ್ದರೆ ಅದಕ್ಕೆ ಕಾರಣ ಮನಮೋಹನ್ ಸಿಂಗ್ ಅವರಾಗಿದ್ದಾರೆ. ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅವರು ಬಡವರನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿದರು ಎಂದು ಹೇಳಿದರು.

ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಿಂಗ್ ಅವರು ಪ್ರಧಾನಿಯಾಗಿದ್ದರಿಂದ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾಗಿ ಸಿದ್ದರಾಮಯ್ಯ ನೆನಪಿಸಿಕೊಂಡರು. ಸಿಂಗ್ ಅವರು ರಾಜ್ಯದ ಆರ್ಥಿಕತೆ ಮತ್ತು ಸರ್ಕಾರದ ಯೋಜನೆಗಳನ್ನು ಶ್ಲಾಘಿಸಿದ್ದಾರೆ ಎಂದರು.

ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ. ರಾತ್ರಿ 8.30 ರ ಸುಮಾರಿಗೆ ಅವರನ್ನು ಎಮರ್ಜೆನ್ಸಿ ವಾರ್ಡ್‌ನಲ್ಲಿ ದಾಖಲಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ, ರಾಜ್ಯ ಸಚಿವ ಸಂಪುಟದ ಒಪ್ಪಿಗೆ? ಗೃಹ ಇಲಾಖೆಗೆ ಭದ್ರತೆಯ ಹೊಣೆ!

2ನೇ ಟಿ20: 51 ರನ್ ಗಳ ಅಂತರದಿಂದ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ! ಅನಗತ್ಯ ದಾಖಲೆ ಬರೆದ ಅರ್ಷದೀಪ್

ಸಿಎಂ ಸಿದ್ದರಾಮಯ್ಯರ ವಿಮಾನ ಪ್ರಯಾಣ: 'ರಾಜ್ಯದ ಬೊಕ್ಕಸ'ದಿಂದ ಆದ ಖರ್ಚು ಎಷ್ಟು ಗೊತ್ತಾ?

ಟ್ರಂಪ್ ಗೆ ಮೋದಿ ದೂರವಾಣಿ ಕರೆ: ಮಹತ್ವದ ಚರ್ಚೆ!

KSCA ಗೆ ಹೊಸ ಸದಸ್ಯರ ಸೇರ್ಪಡೆ: ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ- ವೆಂಕಟೇಶ್ ಪ್ರಸಾದ್

SCROLL FOR NEXT