ಚರಿತ್ ಬಾಳಪ್ಪ(ಸಂಗ್ರಹ ಚಿತ್ರ) 
ರಾಜ್ಯ

ಲೈಂಗಿಕ ಕಿರುಕುಳ ಆರೋಪ: ಕಿರುತೆರೆ ನಟ ಚರಿತ್ ಬಾಳಪ್ಪ ಬಂಧನ

ಕನ್ನಡದಲ್ಲಿ ‘ಮುದ್ದುಲಕ್ಷ್ಮಿ‌’ ಸೇರಿದಂತೆ ಕೆಲವು ಸೀರಿಯಲ್​ನಲ್ಲಿ, ತೆಲುಗಿನಲ್ಲೂ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಚರಿತ್ ಬಾಳಪ್ಪ ಮೇಲಿದೆ.

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದ ಮೇಲೆ ಕಿರುತೆರೆ ನಟ ಚರಿತ್ ಬಾಳಪ್ಪ ಎಂಬುವವರನ್ನು ಆರ್​ಆರ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ..

ಕನ್ನಡದಲ್ಲಿ ‘ಮುದ್ದುಲಕ್ಷ್ಮಿ‌’ ಸೇರಿದಂತೆ ಕೆಲವು ಸೀರಿಯಲ್​ನಲ್ಲಿ, ತೆಲುಗಿನಲ್ಲೂ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಚರಿತ್ ಬಾಳಪ್ಪ ಮೇಲಿದೆ.

ಪ್ರೀತಿಸುವ ನಾಟಕವಾಡಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ ಎಂದು ಯುವತಿಯೊಬ್ಬರು ಆರೋಪ ಮಾಡಿದ್ದಾರೆ. ಯುವತಿ ವಾಸ ಮಾಡುತ್ತಿದ್ದ ಮನೆಗೆ ಸಹಚರರ ಜೊತೆ ನುಗ್ಗಿದ ಚರಿತ್ ಕಿರುಕುಳ ನೀಡಿದ್ದಾರೆ. ಅಷ್ಟೇ ಅಲ್ಲದೆ ಯುವತಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಇದೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ, ಹಲ್ಲೆ, ಕೊಲೆ ಬೆದರಿಕೆ ಆರೋಪದ ಮೇಲೆ ಬಂಧಿಸಲಾಗಿದೆ. ಚರಿತ್ ಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಕೂಡ ಆಗಿದೆ. ಡಿವೋರ್ಸ್​ ನಂತರವೂ ಮಾಜಿ ಪತ್ನಿ ಜೊತೆ ಕಿರಿಕ್ ಮಾಡಿಕೊಂಡ ಆರೋಪದ ಮೇಲೆ ಕಳೆದ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಣೇಶೋತ್ಸವಕ್ಕೆ ಅನಗತ್ಯ ನಿರ್ಬಂಧ ಇಲ್ಲ, ಆದ್ರೆ ಅಶಾಂತಿ ಸೃಷ್ಟಿಸಲು ಬಿಜೆಪಿ ಕುತಂತ್ರ: CM ಡಿ.ಕೆ ಶಿವಕುಮಾರ್ ಕಿಡಿ

ಟಿ.ನರಸೀಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ: ಆರ್ ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; ಮೊದಲ T20ಯಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ಹಾವೇರಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ದೂರ; 'ಮುಂದಿನ ಜನ್ಮ ಇದ್ದರೆ ನಿನ್ನವನಾಗಿ ಹುಟ್ಟುವೆ' ಎಂದು ಪೋಸ್ಟ್ ಹಾಕಿ ಯುವಕ ಆತ್ಮಹತ್ಯೆ!

ಸರ್ಕಾರಿ ಸರ್ಕ್ಯೂಟ್‌ ಹೌಸ್‌ನಲ್ಲಿ 'ನೀಲಿ ಚಿತ್ರನಟಿ' ವಾಸ; ರೂರ್ಕೆಲಾದಲ್ಲಿ ಸಂಚಲನ, ಪೊಲೀಸ್ ತನಿಖೆ