ಬೆಂಗಳೂರು: ನಿಯಂತ್ರಣ ತಪ್ಪಿ ರಸ್ತೆ ಬಿದ್ದ ಬೈಕ್ ಸವಾರನ ಮೇಲೆ ಅಪರಿಚಿತ ವಾಹನದ ಚಕ್ರ ಹರಿದ ಪರಿಣಾಮ, ಸವಾರ ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ಸಿಟಿ.ಮಾರುಕಟ್ಟೆ-ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆಯಲ್ಲಿ ಶುಕ್ರವಾರ ನಡೆದಿದೆ.
ಗಿರಿನಗರ ನಿವಾಸಿ ಶಂಕರ್ ಜಟ್ಟಿ (62) ಮೃತ ಸವಾರ. ನಿವೃತ್ತ ಬ್ಯಾಂಕ್ ನೌಕರರಾಗಿರುವ ಇವರು ಸಿಟಿ ಮಾರುಕಟ್ಟೆಗೆ ಬಂದು ತರಕಾರಿ ಖರೀದಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬಿಜಿಎಸ್ ಮೇಲ್ಸೇತುವೆಯಲ್ಲಿ ನಿಯಂತ್ರಣ ತಪ್ಪಿದ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ, ಪರಿಣಾಮ ಪಕ್ಕದ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ ಮೈಸೂರು ರಸ್ತೆ ಕಡೆಯಿಂದ ಸಿಟಿ ಮಾರುಕಟ್ಟೆಗೆ ಬರುತ್ತಿದ್ದ ಅಪರಿಚತ ವಾಹನದ ಚಕ್ರ ಅವರ ತಲೆ ಮೇಲ ಹರಿದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಚಾರ ತಿಳಿದು ಸ್ಥಳಕ್ಕೆ ಬಂದ ಸಂಚಾರ ಪೊಲೀಸರು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಚಾಮರಾಜಪೇಟೆ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತ ಎಸಗಿದ ಅಪರಿಚಿತ ವಾಹನದ ಪತ್ತೆಯಾಗಾಗಿ ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.