ಸಿ.ಎಸ್ ಷಡಾಕ್ಷರಿ  
ರಾಜ್ಯ

ರಾಜ್ಯ ಸರ್ಕಾರಿ ನೌಕರರ ಸಂಘ ಚುನಾವಣೆ: 2ನೇ ಅವಧಿಗೆ ಸಿಎಸ್ ಷಡಾಕ್ಷರಿ ಪುನರಾಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಶುಕ್ರವಾರ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಿತು.

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ 2ನೇ ಅವಧಿಗೆ ಸಿ.ಎಸ್ ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಶುಕ್ರವಾರ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್​.ಷಡಾಕ್ಷರಿಗೆ ಅವರಿಗೆ 507 ಮತಗಳು ಬಂದರೆ, ಬಿ.ಪಿ.ಕೃಷ್ಣೇಗೌಡಗೆ 442 ಮತಗಳು ಲಭಿಸಿದ್ದವು.

ಖಚಾಂಜಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ ನಾಗರಾಜ ಆರ್​.ಜುಮ್ಮನ್ನವರ (ಷಡಾಕ್ಷರಿ ಬಣ), ವಿ.ವಿ.ಶಿವರುದ್ರಯ್ಯ (ಬಿ.ಪಿ.ಕೃಷ್ಣೇಗೌಡ ಬಣ) ವಿರುದ್ಧ ಕೇವಲ 18 ಮತಗಳ ಅಂತರದಿಂದ ಸೋಲು ಅನುಭವಿಸಿದರು. ವಿ.ವಿ.ಶಿವರುದ್ರಯ್ಯ 485 ಮತ ಪಡೆದರೆ, ನಾಗರಾಜ ಆರ್​.ಜುಮ್ಮನ್ನವರಗೆ 467 ಮತಗಳು ಬಂದಿವೆ.

ಬೆಂಗಳೂರು ನಗರ ಜಿಲ್ಲೆಯ 102 ರಾಜ್ಯ ಪರಿಷತ್​ ಸದಸ್ಯರು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ಜಿಲ್ಲಾ ರಾಜ್ಯ ಪರಿಷತ್​ ಸದಸ್ಯರು, ಜಿಲ್ಲಾ ಕಾರ್ಯದರ್ಶಿ, ತಾಲೂಕು ಶಾಖೆಯ ಅಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್​ ಸದಸ್ಯರು, ಕಾರ್ಯದರ್ಶಿ ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರು ಸೇರಿ ಒಟ್ಟು 949 ಮತದಾರರು ಮತ ಚಲಾಯಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?