ಮುನಿರತ್ನ 
ರಾಜ್ಯ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್, ಅಪಾಯಕಾರಿ ರೋಗ ಹರಡುವಿಕೆ ಆರೋಪ ನಿಜ: Chargesheet ನಲ್ಲಿ ಸ್ಫೋಟಕ ಸಂಗತಿ ಬಯಲು

ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್ ಪೆಕ್ಟರ್​ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ.

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಾಸಕ ಮುನಿರತ್ನ ವಿರುದ್ಧ ಕೇಳಿಬಂದಿರುವ ಅತ್ಯಾಚಾರ, ಹನಿಟ್ರ್ಯಾಪ್ ಹಾಗೂ ಅಪಾಯಕಾರಿ ರೋಗ ಹರಡುವಿಕೆ ಆರೋಪ ತನಿಖೆಯಲ್ಲಿ ರಜುವಾತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ವಿಶೇಷ ತನಿಖಾ ತಂಡ ಆರೋಪ ಪಟ್ಟಿ ಸಲ್ಲಿಸಿದೆ.

ತಮ್ಮ ವಿರೋಧಿಗಳನ್ನುHIV- Aids ​​ಪೀಡಿತರ ಮೂಲಕ ಹನಿಟ್ರ್ಯಾಪ್​​ ಬಲೆಗೆ ಬೀಳಿಸಿ ಏಡ್ಸ್​​ ಹರಡುವಿಕೆಗೆ ಶಾಸಕ ಮುನಿರತ್ನ ದುಷ್ಕೃತ್ಯ ಎಸಗಿದ್ದರು ಎಂದು ಎಸ್​ಐಟಿ ಸಲ್ಲಿಸಿದ chargesheet ನಲ್ಲಿ ಉಲ್ಲೇಖವಾಗಿದೆ. ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್ ಪೆಕ್ಟರ್​ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ. ಸದ್ಯ ಇನ್ಸ್ ಪೆಕ್ಟರ್ ಬಿ. ಐಯ್ಯಣ್ಣ ರೆಡ್ಡಿಯನ್ನು ಎಸ್​ಐಟಿ ಪೊಲೀಸರು ಬಂಧಿಸಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2481 ಪುಟಗಳ ಚಾರ್ಜ್​ಶೀಟ್ ಅನ್ನು ಎಸ್​ಐಟಿ ತಂಡ ಸಲ್ಲಿಕೆ ಮಾಡಿದೆ. ಅತ್ಯಾಚಾರ, ಅಪಾಯಕಾರಿ ರೋಗ ಹರಡುವಿಕೆ ಆರೋಪ ನಿಜವೆಂದು ಚಾರ್ಜ್​ಶೀಟ್​ನಲ್ಲಿ ತಿಳಿಸಲಾಗಿದೆ. ಶಾಸಕ ಮುನಿರತ್ನ ಮಾತ್ರವಲ್ಲದೆ ಸುಧಾಕರ್, ಶ್ರೀನಿವಾಸ್, ಇನ್ಸ್‌ಪೆಕ್ಟರ್ ಐಯ್ಯಣ್ಣರೆಡ್ಡಿ ವಿರುದ್ಧವೂ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಸೆಪ್ಟೆಂಬರ್ 18ರಂದು 7 ಜನರ ವಿರುದ್ದ ದಾಖಲಾಗಿದ್ದ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸಿ ಈ ಚಾರ್ಜ್​ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಒಟ್ಟು ಏಳು ಜನರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್​​ಐಟಿ ರಚಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಎಸ್​ಐಟಿ, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಅವರ ಸಹಚರರ ಮೇಲೆ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಆರೋಪ ಪಟ್ಟಿ ಸಲ್ಲಿಸಿದೆ

ಪ್ರಕರಣ ಸಂಬಂಧ ಎಸ್​ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಇದರಲ್ಲಿ ನ್ಯಾಯಾಧೀಶರ ಮುಂದೆ ಸಿಆರ್​ಪಿಸಿ 164ರಡಿ 8 ಜನರ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಎಸ್​ಐಟಿ ಸಲ್ಲಿಕೆ ಮಾಡಿದೆ.

ಮುನಿರತ್ನ ವಿರುದ್ಧ ಅತ್ಯಾಚಾರ, ಜಾತಿ ನಿಂದನೆ, ಬೆದರಿಕೆ ಹಾಗೂ ಹನಿಟ್ರ್ಯಾಪ್​ ಯತ್ನ ಸೇರಿ 4 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್​ಗೆ ಜಾತಿನಿಂದನೆ ಹಾಗೂ ಬಿಜೆಪಿ ಕಾರ್ಯಕರ್ತೆ ಮೇಲಿನ ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸಿ ಸಿಐಡಿ ನವೆಂಬರ್​ 30ರಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು. ಸದ್ಯ ಗುತ್ತಿಗೆದಾರನ ಬಳಿ ಲಂಚ ಕೇಳಿದ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಅನುಮತಿಗೆ ಎಸ್​ಐಟಿ ಕಾಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT