KSRTC ಬಸ್ ಸಾಂದರ್ಭಿಕ ಚಿತ್ರ 
ರಾಜ್ಯ

KSRTC: ಡಿಸೆಂಬರ್ 31 ರಂದು ಕರೆ ನೀಡಿದ್ದ ಮುಷ್ಕರ ಹಿಂಪಡೆದ ಜಂಟಿ ಕ್ರಿಯಾ ಸಮಿತಿ!

ಇಂದು ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಸಿದ್ದರಾಮಯ್ಯ ಜೊತೆಗೆ ಸಾರಿಗೆ ರಾಮಲಿಂಗಾರೆಡ್ಡಿ ಸಭೆ ನಡೆಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂಪಡೆಯಲು ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ತೀರ್ಮಾನಿಸಿದೆ.

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿ ಡಿ.31 ರಂದು ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆದಿವೆ.

ಇಂದು ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಸಿದ್ದರಾಮಯ್ಯ ಜೊತೆಗೆ ಸಾರಿಗೆ ರಾಮಲಿಂಗಾರೆಡ್ಡಿ ಸಭೆ ನಡೆಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂಪಡೆಯಲು ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ತೀರ್ಮಾನಿಸಿದೆ.

ಸಭೆಯಲ್ಲಿ ಸಾರಿಗೆ ಇಲಾಖೆ 4 ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಭಾಗಿಯಾಗಿದ್ದರು. ಈ ವೇಳೆ ಸಾರಿಗೆ ಸಿಬ್ಬಂದಿ ಬೇಡಿಕೆ ಬಗ್ಗೆ ಸಿಎಂಗೆ ಮನವರಿಕೆ ಮಾಡಲಾಗಿದೆ ಎನ್ನಲಾಗಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಸಿಬ್ಬಂದಿ ಮುಷ್ಕರದ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ದೇವೆ. ಬಿಜೆಪಿ ಸರ್ಕಾರ ರೂ.5,900 ಕೋಟಿ ಸಾಲ ಬಿಟ್ಟು ಹೋಗಿದ್ದೇ ಸಮಸ್ಯೆಗೆ ಕಾರಣವಾಗಿದೆ. ಫೆಬ್ರವರಿ ಬಜೆಟ್‌ನಲ್ಲಿ ಇಲಾಖೆಗೆ ಅನುದಾನ ನೀಡಿ ಅಂತಾ ಬೇಡಿಕೆ ಇಟ್ಟಿದ್ದೇನೆ. ಸಂಕ್ರಾಂತಿ ಹಬ್ಬದ ಬಳಿಕ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.

ಸಂಕ್ರಾಂತಿ ಹಬ್ಬದ ಬಳಿಕ ಮತ್ತೆ ಸಭೆ ನಡೆಸಲಿರುವ ಜಂಟಿ ಕ್ರಿಯಾ ಸಮಿತಿ:

ಸಿಎಂ ಸಿದ್ದರಾಮಯ್ಯ ಜೊತೆಗೆ ಸಾರಿಗೆ ಸಚಿವರ ಮಾತುಕತೆ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್ 31 ರಂದು ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆಯಲು ನಿರ್ಧರಿಸಿವೆ. ಸಂಕ್ರಾಂತಿ ಬಳಿಕ ಜಂಟಿ ಕ್ರಿಯಾ ಸಮಿತಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರಸ್ತೆ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಮುಷ್ಕರ ವಾಪಸ್ ಹಿನ್ನೆಲೆಯಲ್ಲಿ ಡಿಸೆಂಬರ್ 31 ರಂದು ಸಾರಿಗೆ ಸಂಸ್ಥೆ ಬಸ್ ಗಳು ಎಂದಿನಂತೆ ಕಾರ್ಯಾಚರಣೆ ನಡೆಸಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!