ಯೋಧ ದಿವಿನ್  
ರಾಜ್ಯ

ಸೇನಾ ವಾಹನ ಕಮರಿಗೆ ಬಿದ್ದು ಗಂಭೀರ ಗಾಯ; ಚಿಕಿತ್ಸೆ ಫಲಿಸದೆ ಕೊಡಗಿನ ಯೋಧ ಹುತಾತ್ಮ!

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ ಪಲ್ಟಿಯಾಗಿ ಕರ್ನಾಟಕದ ಮೂವರು ಯೋಧರು ಸೇರಿ ಮರಾಠಾ ರೆಜಮೇಂಟನ ಒಟ್ಟು ಐವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದರು.

ಕೊಡಗು: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಕಮರಿಗೆ ಬಿದ್ದು ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾರೆ. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ವಾಹನ ಕಮರಿಗೆ ಬಿದ್ದು ನಾಲ್ವರು ಯೋಧರು ಹುತಾತ್ಮರಾಗಿದ್ದರು.

ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಿವಿನ್ ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೇನಾಧಿಕಾರಿಗಳ ತುರ್ತು ಕರೆ ಹಿನ್ನೆಲೆ ಯೋಧನ ತಾಯಿ ಜಯ ಅವರು ಶ್ರೀನಗರಕ್ಕೆ ತೆರಳಿದ್ದರು. ಇದೀಗ ಅವರು ಹುತಾತ್ಮರಾಗಿರುವ ಸುದ್ದಿ ವರದಿಯಾಗಿದೆ.

ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದ ಯೋಧ ದಿವಿನ್, ತಂದೆ ತಾಯಿಗೆ ಏಕೈಕ ಮಗನಾಗಿದ್ದು, 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು. ಶ್ವಾಸಕೋಶಕ್ಕೆ ತೀವ್ರ ಹಾನಿ ಆದ ಹಿನ್ನಲೆಯಲ್ಲಿ ಭಾನುವಾರ ರಾತ್ರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ದಿವಿನ್ ಅವರಿಗೆ ಇತ್ತೀಚಿಗೆ ಕೊಡಗು ಮೂಲದ ಯುವತಿ ಜೊತೆ ಮದುವೆಗೆ ದಿನಾಂಕ ಕೂಡ ನಿಗದಿಯಾಗಿತ್ತು ಎನ್ನಲಾಗಿದೆ.

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ ಪಲ್ಟಿಯಾಗಿ ಕರ್ನಾಟಕದ ಮೂವರು ಯೋಧರು ಸೇರಿ ಮರಾಠಾ ರೆಜಮೇಂಟನ ಒಟ್ಟು ಐವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಹಲವು ಯೋಧರು ಗಾಯಗೊಂಡಿದ್ದರು.

ಭೀಕರ ದುರಂತದಲ್ಲಿ ಕರ್ನಾಟಕದ ಮೂವರು ಸೇರಿದಂತೆ ಒಟ್ಟು ಐವರು ಹುತಾತ್ಮರಾಗಿದ್ದರು. ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45) ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಹುತಾತ್ಮರಾಗಿದ್ದರು. ಈ ದುರಂತದಲ್ಲಿ ಗಾಯಗೊಂಡಿದ್ದ ದಿವಿನ್ ಭಾನುವಾರ ಚಿಕಿತ್ಸೆ ಫಲಿಸದೇ ಹುತಾತ್ಮರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ