ಡಿಕೆ ಸುರೇಶ್ 
ರಾಜ್ಯ

ಚಿನ್ನದಂಗಡಿ ಮಾಲೀಕರಿಗೆ 9 ಕೋಟಿ ರೂ ವಂಚನೆ ಪ್ರಕರಣ: ಐಶ್ವರ್ಯಾ ಗೌಡ ವಿರುದ್ಧ ಡಿ.ಕೆ ಸುರೇಶ್ ದೂರು

ಯಾವುದೇ ಕಾರಣಕ್ಕೂ ನನ್ನ ಹೆಸರನ್ನು ಹೇಳಿಕೊಂಡು ಲಾಭ ಪಡೆದುಕೊಳ್ಳಲು ಪ್ರಯತ್ನಿಸಿದರೆ ಮೋಸ ಹೋಗಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ಮಾಜಿ ಸಂಸದ ಡಿಕೆ ಸುರೇಶ್ ಅವರ ತಂಗಿ ಎಂದು ನಂಬಿಸಿ ಚಿನ್ನ ಪಡೆದು 9 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಐಶ್ವರ್ಯಾ ಗೌಡ ವಿರುದ್ಧ ಡಿಕೆ ಸುರೇಶ್ ದೂರು ದಾಖಲಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸುರೇಶ್, ಐಶ್ವರ್ಯಾ ಗೌಡ ಎಂಬುವವರು ನನ್ನ ಹೆಸರನ್ನು ದುರುಪಯೋಗಪಡಿಸಿಕೊಂಡು ಜನರಿಗೆ ವಂಚನೆ ಮಾಡುತ್ತಿರುವುದು ಮಾಧ್ಯಮಗಳಲ್ಲಿ ಕೆಲವು ದಿನಗಳಿಂದ ವರದಿಯಾಗುತ್ತಿದೆ. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಮಾಡಲು ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೋಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.

ನನ್ನ ಸಾರ್ವಜನಿಕ ಜೀವನವನ್ನು, ಜನಸೇವೆಯ ಕಾರ್ಯವನ್ನು ದುರುಪಯೋಗಪಡಿಸಿಕೊಳ್ಳುವವರಿಗೆ ಇದೊಂದು ಪಾಠವಾಗಲಿ. ಯಾವುದೇ ಕಾರಣಕ್ಕೂ ನನ್ನ ಹೆಸರನ್ನು ಹೇಳಿಕೊಂಡು ಲಾಭ ಪಡೆದುಕೊಳ್ಳಲು ಪ್ರಯತ್ನಿಸಿದರೆ ಮೋಸ ಹೋಗಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಏನಿದು ಘಟನೆ?

ಡಿಕೆ ಸುರೇಶ್ ಅವರ ಸಹೋದರಿಯೆಂದು ನಂಬಿಸಿ ಖರೀದಿ ನೆಪದಲ್ಲಿ 9.82 ಕೋಟಿ ರೂ. ಮೌಲ್ಯದ ಚಿನ್ನವನ್ನು ಪಡೆದು ವಂಚಿಸಿದ್ದಾರೆ ಎಂದು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲೀಕರಾದ ವನಿತಾ ಎಸ್ ಐತಾಳ್ ಎಂಬುವವರು ನೀಡಿರುವ ದೂರಿನನ್ವಯ ಐಶ್ವರ್ಯಾ ಗೌಡ, ಹರೀಶ್ ಕೆಎನ್ ಹಾಗೂ ಕನ್ನಡದ ನಟ ಧರ್ಮೇಂದ್ರ ಬಿ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಐಶ್ವರ್ಯಾ ಗೌಡ 2023ರ ಅಕ್ಟೋಬರ್‌ನಿಂದ 2024 ಏಪ್ರಿಲ್‌ವರೆಗೆ ಹಂತ ಹಂತವಾಗಿ 9 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನ ಖರೀದಿ ಮಾಡಿದ್ದಾರೆ. ಹಣ ಪಾವತಿ ಮಾಡುವಂತೆ ಕೇಳಿದಾಗ ಡಿಕೆ ಸುರೇಶ್ ಅವರಿಂದ ಕರೆ ಮಾಡಿಸಿ ಕಾಲಾವಕಾಶ ಕೋರಿದ್ದರಂತೆ. ಜತೆಗೆ ನಟ ಧರ್ಮೇಂದ್ರ ಎಂಬುವವರಿಂದಲೂ ಕರೆ ಮಾಡಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಐಶ್ವರ್ಯಾ ಗೌಡ ಅವರ ಪತಿ‌ ಹರೀಶ್ ಕೆಎನ್ ಕೂಡ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ನಾನು ಡಿಕೆ ಸುರೇಶ್ ತಂಗಿ, ನನಗೆ ಅನೇಕ‌ ರಾಜಕೀಯ ವ್ಯಕ್ತಿಗಳ ಸಂಪರ್ಕವಿದೆ. ನಾನು ದೊಡ್ಡ ಬ್ಯುಸಿನೆಸ್ ವುಮೆನ್. ನಿಮಗೆ ಒಳ್ಳೆ ವ್ಯಾಪಾರ ವಹಿವಾಟು ನೀಡುತ್ತೇನೆ ಎಂದೆಲ್ಲ ಹೇಳಿ ವನಿತಾ ಅವರನ್ನು ಐಶ್ವರ್ಯಾ ನಂಬಿಸಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT