ಥಾವರ್ ಚಂದ್ ಗೆಹ್ಲೋಟ್ ಗೆ ಮನವಿ ಸಲ್ಲಿಸಿದ ಬಿಜೆಪಿ ನಿಯೋಗ  online desk
ರಾಜ್ಯ

Governor ಗೆ CT Ravi ದೂರು; ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಪೊಲೀಸ್ ಕಸ್ಟಡಿಯಲ್ಲಿ ತಮ್ಮನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂದು ಆರೋಪಿಸಿರುವ ಸಿಟಿ ರವಿ, ತಮಗೆ ತಕ್ಷಣವೇ ಹೆಚ್ಚುವರಿ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ತಮ್ಮನ್ನು ಅಕ್ರಮವಾಗಿ ಬಂಧಿಸಿ ಕೆಟ್ಟದಾಗಿ ನಡೆಸಿಕೊಂಡಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಧಾನಪರಿಷತ್ ಸದಸ್ಯ ಸಿಟಿ ರವಿ (CT Ravi) ರಾಜ್ಯಪಾಲರಿಗೆ ಇಂದು (ಡಿ.30) ರಂದು ಮನವಿ ಸಲ್ಲಿಸಿದ್ದಾರೆ.

ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಸಭ್ಯ ಶಬ್ದಗಳನ್ನು ಸಿಟಿ ರವಿ ಪ್ರಯೋಗಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಈ ಬೆನ್ನಲ್ಲೇ ಬೆಳಗಾವಿ ಪೊಲೀಸರು ಅವರನ್ನು ಬಂಧಿಸಿದ್ದರು.

ಪೊಲೀಸ್ ಕಸ್ಟಡಿಯಲ್ಲಿ ತಮ್ಮನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂದು ಆರೋಪಿಸಿರುವ ಸಿಟಿ ರವಿ, ತಮಗೆ ತಕ್ಷಣವೇ ಹೆಚ್ಚುವರಿ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರವಿ, ಪರಿಷತ್ತಿನ ಒಳಗಡೆಯೇ ಘಟನೆ ನಡೆದಿದ್ದು, ಪರಿಷತ್ತಿನ ಎಲ್ಲಾ ಅಧಿಕಾರಗಳು ಪರಿಷತ್ತಿನ ಅಧ್ಯಕ್ಷ ಬಸವರಾಜ ಹೊರಟ್ಟಿ ಅವರಿಗೆ ಇರುವುದರಿಂದ ಅವರ ಒಪ್ಪಿಗೆ ಪಡೆಯಬೇಕಿತ್ತು. ಸಭಾಧ್ಯಕ್ಷರ ಒಪ್ಪಿಗೆ ಪಡೆಯದೇ ಪ್ರಕರಣ ದಾಖಲಿಸಿರುವುದು ಪೊಲೀಸರು ಎಸಗಿದ ತಪ್ಪಾಗಿದೆ, ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಬಂಧಿಸಲಾಗಿದೆ ಎಂದೂ ಸಿಟಿ ರವಿ ಆರೋಪಿಸಿದ್ದಾರೆ.

“ಈಗ ಅವರು (ಪೊಲೀಸರು) ಅದನ್ನು (ವಿಡಿಯೋ ಸಾಕ್ಷ್ಯವನ್ನು) ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವುದಾಗಿ ಮತ್ತು ಅಧ್ಯಕ್ಷರ ಅನುಮತಿ ಬೇಕು ಎಂದು ಹೇಳುತ್ತಿದ್ದಾರೆ. ಆದರೆ ನನ್ನನ್ನು ಬಂಧಿಸುವ ಮೊದಲು ಯಾರ ಅನುಮತಿಯನ್ನು ತೆಗೆದುಕೊಳ್ಳಲಾಗಿದೆ ಎಂಬುದು ನನ್ನ ಪ್ರಶ್ನೆ. ಎಂದು ರವಿ ಆರೋಪಿಸಿದ್ದಾರೆ.

ಪೊಲೀಸರು ಮಂತ್ರಿಗಳ ಒತ್ತಡಕ್ಕೆ ಮಣಿದು ದುರುದ್ದೇಶದಿಂದ ನನ್ನನ್ನು ಬಂಧಿಸಿದ್ದಾರೆ, ”ಎಂದು ಸಿಟಿ ರವಿ ಹೇಳಿದ್ದಾರೆ.

ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಡಿಸೆಂಬರ್ 19 ರ ಘಟನೆಯನ್ನು ನೆನಪಿಸಿಕೊಂಡ ಬಿಜೆಪಿ ನಾಯಕ, ಬೆಳಗಾವಿಯ ಉನ್ನತ ಪೊಲೀಸ್ ಅಧಿಕಾರಿಗಳು ಮತ್ತು ಅವರ ಅಧೀನ ಅಧಿಕಾರಿಗಳು ತಮ್ಮ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ಮಂತ್ರಿಗಳ ಒತ್ತಡದ ಮೇರೆಗೆ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಡಿಸೆಂಬರ್ 19 ರ ರಾತ್ರಿಯಿಡೀ 400 ಕಿಲೋಮೀಟರ್ ಸುತ್ತಾಡಿಸಿದ್ದಾರೆ ಮತ್ತು ಕಸ್ಟಡಿಯಲ್ಲಿ ರಕ್ತಸ್ರಾವವಾಗುವಂತೆ ಗಾಯಗೊಳಿಸಿದ್ದಾರೆ ಎಂದು ರವಿ ಆರೋಪಿಸಿದ್ದಾರೆ.

“ಪೊಲೀಸ್ ಜೀಪಿನಲ್ಲಿ ನನಗೆ ರಕ್ತಸ್ರಾವ ಆಗಿರುವ (ತಲೆಗೆ ಗಾಯ) ಬಗ್ಗೆ ಪೊಲೀಸರು ಎಂದಿಗೂ ಕಾಳಜಿ ವಹಿಸಲಿಲ್ಲ, ದೀರ್ಘಕಾಲದವರೆಗೆ ಪ್ರಥಮ ಚಿಕಿತ್ಸೆ ಮತ್ತು ವೈದ್ಯಕೀಯ ಚಿಕಿತ್ಸೆ ನೀಡಲಿಲ್ಲ.

ಅವರು ನನ್ನನ್ನು ಬಹಳ ಗಂಟೆಗಳ ಕಾಲ ಆಹಾರ ಮತ್ತು ನೀರಿಲ್ಲದೆ ಹಸಿವಿನಿಂದ ಬಳಲುವಂತೆ ಮಾಡಿದರು, ನನ್ನನ್ನು ಪ್ರಾಣಿಯಂತೆ ನಡೆಸಿಕೊಂಡರು, ಭಯಾನಕ ಚಿತ್ರಹಿಂಸೆ ನೀಡಿದರು, ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಿದರು, ”ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.

ಪೊಲೀಸರು ತಮ್ಮನ್ನು ಹತ್ಯೆ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದಾರೆ ಎಂದು ಆರೋಪಿಸಿರುವ ರವಿ, ಇಡೀ ಘಟನೆಯ ಬಗ್ಗೆ ಪೊಲೀಸ್ ಮಹಾನಿರ್ದೇಶಕರಿಂದ ಸ್ಪಷ್ಟನೆ ಪಡೆಯುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT