ಗಣೇಶಗುಡಿಯಲ್ಲಿ ಅಕ್ರಮವಾಗಿ ನಡೆಸಲಾಗುತ್ತಿರುವ ರಾಫ್ಟಿಂಗ್‌ಗಾಗಿ ಜನರು ಸಾಲುಗಟ್ಟಿ ನಿಂತಿರುವುದನ್ನು ನೋಡಬಹುದು.  
ರಾಜ್ಯ

ಗಣೇಶಗುಡಿ: ಅಧಿಕಾರಿಗಳ ಕಣ್ಣಮುಂದೆಯೇ ಎಗ್ಗಿಲ್ಲದೆ ಸಾಗಿದೆ ಅಕ್ರಮ ರಿವರ್ ರಾಫ್ಟಿಂಗ್

ಕಾಳಿ ನೀರಿನಲ್ಲಿ ರಾಫ್ಟಿಂಗ್ ನಡೆಸಲು ಸರ್ಕಾರಿ ಸ್ವಾಮ್ಯದ ಜಂಗಲ್ ಲಾಡ್ಜ್‌ಗಳು ಮತ್ತು ರೆಸಾರ್ಟ್‌ಗಳು ಮಾತ್ರ ಅಧಿಕಾರ ಹೊಂದಿವೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಸಂಸ್ಥೆಗೆ ಜಲ ಕ್ರೀಡೆಗಳನ್ನು ನಡೆಸಲು ಅನುಮತಿ ನೀಡಿಲ್ಲ.

ಗಣೇಶಗುಡಿ (ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ ಗಣೇಶಗುಡಿಯಲ್ಲಿ ಸ್ಥಳೀಯ ಅಧಿಕಾರಿಗಳ ಇಷ್ಟಾನುಸಾರ ನದಿಯಲ್ಲಿ ರಿವರ್ ರಾಫ್ಟಿಂಗ್ ಎಗ್ಗಿಲ್ಲದೆ ನಡೆಯುತ್ತಿದೆ. ಅನೇಕ ಟೂರ್ ಆಪರೇಟರ್‌ಗಳು ನಿಯಮಗಳನ್ನು ಉಲ್ಲಂಘಿಸಿ ಮಧ್ಯ-ರಾಫ್ಟಿಂಗ್ ನ್ನು ಪ್ರಾರಂಭಿಸಿದ್ದಾರೆ. ಬಹುತೇಕರಿಗೆ ರಾಫ್ಟಿಂಗ್ ಮಾಡಲು ಅನುಮತಿಯೇ ಎಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

ಅಕ್ರಮ ರಾಫ್ಟಿಂಗ್‌ನ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯರಲ್ಲಿ ಹರಿದಾಡುತ್ತಿವೆ. ಇದರಿಂದ ಜಲಕ್ರೀಡೆ ಸ್ಥಗಿತವಾಗಬಹುದು ಎಂಬ ಭೀತಿ ಸ್ಥಳೀಯ ಪ್ರವಾಸ ನಿರ್ವಾಹಕರು ಮತ್ತು ರೆಸಾರ್ಟ್ ಮಾಲೀಕರನ್ನು ಕಾಡುತ್ತಿದೆ. ಈ ಅಕ್ರಮ ಜಲಕ್ರೀಡೆ ಚಟುವಟಿಕೆಗಳನ್ನು ತಡೆಯುವಂತೆ ಸ್ಥಳೀಯ ಹೋಂಸ್ಟೇ ಹಾಗೂ ರೆಸಾರ್ಟ್‌ಗಳು ಅಧಿಕಾರಿಗಳಿಗೆ ಪತ್ರ ಬರೆದರೂ ಜಿಲ್ಲಾಡಳಿತದಿಂದ ಇದುವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ.

ಕಾಳಿ ನೀರಿನಲ್ಲಿ ರಾಫ್ಟಿಂಗ್ ನಡೆಸಲು ಸರ್ಕಾರಿ ಸ್ವಾಮ್ಯದ ಜಂಗಲ್ ಲಾಡ್ಜ್‌ಗಳು ಮತ್ತು ರೆಸಾರ್ಟ್‌ಗಳು ಮಾತ್ರ ಅಧಿಕಾರ ಹೊಂದಿವೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಸಂಸ್ಥೆಗೆ ಜಲ ಕ್ರೀಡೆಗಳನ್ನು ನಡೆಸಲು ಅನುಮತಿ ನೀಡಿಲ್ಲ. ನಾವು ಜಿಲ್ಲಾಡಳಿತ, ಪ್ರಧಾನ ಕಾರ್ಯದರ್ಶಿ, ಅರಣ್ಯ ಪರಿಸರ ಮತ್ತು ಪರಿಸರ, ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಇತರರಿಗೆ ಪತ್ರ ಬರೆದಿದ್ದೇವೆ, ಆದರೆ ಇದುವರೆಗೆ ಪ್ರತಿಕ್ರಿಯೆ ಬಂದಿಲ್ಲ ಎನ್ನುತ್ತಾರೆ ಸ್ಥಳೀಯ ರೆಸಾರ್ಟ್ ಮತ್ತು ಹೋಂಸ್ಟೇ ಮಾಲೀಕರು.

ನಿಯಮಗಳನ್ನು ಉಲ್ಲಂಘಿಸುತ್ತಾರೆ ಎಂದು 2022 ರಲ್ಲಿ ರಾಫ್ಟಿಂಗ್ ಮತ್ತು ಎಲ್ಲಾ ಜಲಕ್ರೀಡೆಗಳನ್ನು ನಿಷೇಧಿಸಿದಾಗ ನಮಗೆ ಸಾಕಷ್ಟು ಟೀಕೆಗಳು ವ್ಯಕ್ತವಾದವು ಎಂದು ಅನಾಮಧೇಯತೆಯ ಷರತ್ತಿನ ಮೇಲೆ ರೆಸಾರ್ಟ್ ಮಾಲೀಕರು ಹೇಳುತ್ತಾರೆ. ಕೆಲವು ಖಾಸಗಿ ಮಾಲೀಕರು ಮಿಡ್-ರಾಫ್ಟಿಂಗ್ ಮಾಡುತ್ತಿದ್ದಾರೆ, ಉತ್ತರ ಕನ್ನಡದ ಪ್ರವಾಸೋದ್ಯಮ ಇಲಾಖೆ ವ್ಯಾಖ್ಯಾನಿಸಿದಂತೆ ಸುಮಾರು 6 ಕಿ.ಮೀ ದೂರದವರೆಗೆ ಮಾಡಲು ಅಧಿಕೃತ ಸಂಸ್ಥೆ ಅಲ್ಲ.

ಉತ್ತರ ಕನ್ನಡದ ರಿವರ್ ರಾಫ್ಟಿಂಗ್ ಮತ್ತು ವಾಟರ್ ಸ್ಪೋರ್ಟ್ಸ್ ಮ್ಯಾನೇಜ್ ಮೆಂಟ್ ಮತ್ತು ಮೇಲ್ವಿಚಾರಣಾ ಸಮಿತಿಯು ಮಾರ್ಚ್ 2 ರಂದು ಕೆನೋಯಿಂಗ್, ಬೋಟಿಂಗ್, ಜಾಬಿಂಗ್, ಈಜು, ಜಿಪ್ ಲೈನಿಂಗ್, ರಾಫ್ಟಿಂಗ್ ಸೇರಿದಂತೆ ಆಯ್ದ ಜಲಕ್ರೀಡೆಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ.

ಆದಾಗ್ಯೂ, ಸಂಸ್ಥೆಗಳು ತಮ್ಮ ಚಟುವಟಿಕೆಗಳಿಗೆ ಅಗತ್ಯವಾದ ಜೆಟ್ಟಿಗಳನ್ನು 10 ದಿನಗಳಲ್ಲಿ ನಿರ್ಮಿಸಬೇಕಾಗುತ್ತದೆ. ರಾಫ್ಟಿಂಗ್‌ಗೆ ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಒಂದು ವರ್ಷದ ಅವಧಿಗೆ ಅನುಮತಿ ನೀಡಲಾಗಿತ್ತು.

ಪ್ರವಾಸೋದ್ಯಮ ಇಲಾಖೆಯ ಪ್ರಭಾರಿ ಉಪನಿರ್ದೇಶಕರನ್ನು ಸಂಪರ್ಕಿಸಿದಾಗ, ಈ ಬಗ್ಗೆ ಕೆಲವು ದೂರುಗಳು ಬಂದ ನಂತರ ಮಿಡ್‌ರಾಫ್ಟಿಂಗ್‌ಗೆ ಅನುಮತಿಯನ್ನು ಹಿಂಪಡೆದಿದ್ದಾರೆ ಎಂದು ಹೇಳಿದರು. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಉತ್ತರ ಕನ್ನಡ ಎಸ್ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT