ಸಾಂದರ್ಭಿಕ ಚಿತ್ರ  
ರಾಜ್ಯ

ಹೊಸ ವರ್ಷಕ್ಕೆ ಶುಭಾಶಯ ಕೋರುವ ನೆಪದಲ್ಲಿ ಆನ್ ಲೈನ್ ವಂಚನೆ ಸಾಧ್ಯತೆ: ಮಂಗಳೂರು ಪೊಲೀಸರ ಎಚ್ಚರಿಕೆ

2025ನೇ ಹೊಸ ವರ್ಷಕ್ಕೆ ಶುಭಾಶಯವನ್ನು ಕೋರುವ ಲಿಂಕ್‌ಗಳನ್ನು ಎಪಿಕೆ ಫೈಲ್‌ಗಳಲ್ಲಿ ಮೊಬೈಲ್‌ಗೆ ಕಳುಹಿಸಿ ಮೊಬೈಲ್‌ನ್ನು ಹ್ಯಾಕ್ ಮಾಡುವ ಸಾಧ್ಯತೆ ಇದೆ.

ಮಂಗಳೂರು: ಹೊಸ ವರ್ಷದಲ್ಲಿ ಶುಭಾಶಯ ಕೋರುವ ನೆಪದಲ್ಲಿ ಸೈಬರ್ ವಂಚಕರು ವಂಚಿಸುವ ಸಾಧ್ಯತೆ ಇದ್ದು ಎಚ್ಚರಿಕೆಯಿಂದ ಇರಬೇಕೆಂದು ಮಂಗಳೂರು ಪೊಲೀಸರು ಮನವಿ ಮಾಡಿದ್ದಾರೆ.

2025ನೇ ಹೊಸ ವರ್ಷಕ್ಕೆ ಶುಭಾಶಯವನ್ನು ಕೋರುವ ಲಿಂಕ್‌ಗಳನ್ನು ಎಪಿಕೆ ಫೈಲ್‌ಗಳಲ್ಲಿ ಮೊಬೈಲ್‌ಗೆ ಕಳುಹಿಸಿ ಮೊಬೈಲ್‌ನ್ನು ಹ್ಯಾಕ್ ಮಾಡುವ ಸಾಧ್ಯತೆ ಇದೆ. ಮೊಬೈಲ್ ಹ್ಯಾಕ್ ಮಾಡಿದ ನಂತರ ಆ ಮೊಬೈಲ್‌ನಿಂದ ವಾಟ್ಸ್‌ಆ್ಯಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ದೊಡ್ಡ ಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ.

ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಎಪಿಕೆ ಫೈಲ್‌ಗಳನ್ನು ವಾಟ್ಸ್‌ಆ್ಯಪ್ ಸಹಿತ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡರೆ ಅದನ್ನು ಕೂಡಲೇ ಡಿಲೀಟ್ ಮಾಡಬೇಕು. ಒಂದು ವೇಳೆ ಅಂತಹ ಎಪಿಕೆ ಫೈಲ್‌ಗಳನ್ನು ಯಾವುದೇ ವಾಟ್ಸ್‌ಆ್ಯಪ್ ಗ್ರೂಪ್‌ಗಳಿಗೆ ಪರಿಚಿತ ವಾಟ್ಸ್‌ಆ್ಯಪ್ ಸಂಖ್ಯೆಯಿಂದಲೇ ಪೋಸ್ಟ್ ಮಾಡಿದ್ದರೆ ಅಂತಹ ಗ್ರೂಪ್‌ನ ಅಡ್ಮಿನ್‌ಗಳು ಫೈಲ್‌ಗಳನ್ನು ಡಿಲೀಟ್ ಮಾಡಬೇಕು. ಯಾವುದೇ ಸೈಬರ್ ಅಪರಾಧಕ್ಕೆ ಒಳಗಾದರೆ ಕೂಡಲೇ 1930ಗೆ ಕರೆ ಮಾಡಬೇಕು ಅಥವಾ www.cybercrime.gov.in ನಲ್ಲಿ ದೂರು ಸಲ್ಲಿಸುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!