ಪ್ರಕಾಶ್ ಬಾರಕೇರ 
ರಾಜ್ಯ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು; ಮೃತರ ಸಂಖ್ಯೆ 8ಕ್ಕೆ ಏರಿಕೆ

ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟದಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್​ ಆಸ್ಪತ್ರೆ ಸೇರಿದ್ದರು.

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ.

ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27)​​ ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ಮಾಲಾಧಾರಿಗಳ ಸಾವಾಗಿದ್ದು, ಪ್ರಕಾಶ್ ಬಾರಕೇರ ಅವರ ಮಗ ವಿನಾಯಕ್ ಕಿಮ್ಸ್ ನಲ್ಲಿಚಿಕಿತ್ಸ ಮುಂದುವರಿದಿದೆ. ಸದ್ಯಕ್ಕೆ ಆರೋಗ್ಯ ಸ್ಥಿರವಾಗಿದೆ.

ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟದಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್​ ಆಸ್ಪತ್ರೆ ಸೇರಿದ್ದರು. ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಗಾಯಾಳುಗಳನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಸಾವಿನ ಸರಣಿ ಮುಂದುವರಿದಿದ್ದು ಸೋಮವಾರ ರಾತ್ರಿ ರಾಮನಗರ ನಿವಾಸಿ 26 ವರ್ಷದ ತೇಜಸ್ವರ್ ಸಾತರೆ ಉಸಿರು ಚೆಲ್ಲಿದ್ದಾರೆ. ಮೃತ ತೇಸಜ್ವರ್ 3 ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಹಾಕುತ್ತಿದ್ದರು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ 9 ಜನ ಮಾಲಾಧಾರಿಗಳ ಪೈಕಿ ಇದೀಗ ಒಬ್ಬ ಗಾಯಾಳು ಮಾತ್ರ ಬದುಕುಳಿದಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ಪ್ರಕರಣದ ಹಿನ್ನೆಲೆ

ಡಿಸೆಂಬರ್​ 23ರಂದು ಬೆಳಗಿನ ಜಾವ ಹುಬ್ಬಳ್ಳಿಯ ಉಣಕಲ್​ ಅಚ್ಚವ್ವ ಕಾಲೊನಿಯಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ ಸಂಭವಿಸಿತ್ತು. ಎಂದಿನಂತೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ತಮ್ಮ ವ್ರತವನ್ನು ಮುಗಿಸಿ, ಅಯ್ಯಪ್ಪನಿಗೆ ಪೂಜೆ ಸಲ್ಲಿಸಿ ನಿದ್ರೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಓರ್ವ ಅಯ್ಯಪ್ಪ ಮಾಲಾಧಾರಿಯ ಕಾಲು ಗ್ಯಾಸ್ ಸಿಲಿಂಡರ್​ಗೆ ತಾಗಿದ ಪರಿಣಾಮ ಗ್ಯಾಸ್ ಸೋರಿಕೆಯಾಗಿತ್ತು. ದೇವರಿಗೆ ಹಚ್ಚಿದ್ದ ದೀಪ ಉರಿಯುತ್ತಿದ್ದರಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!

ಮಹತ್ವದ ಬೆಳವಣಿಗೆಯಲ್ಲಿ ಆಪ್ ಮಾಜಿ ವಕ್ತಾರೆ ಪ್ರಿಯಾಂಕಾ, ಮಾಜಿ ಶಾಸಕ ಶ್ಯಾಮ್ ಸುಂದರ್ ಸೇರಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆ!

Asian Games 2026: 'ಈಗ ಮಾಡು ಡಾಕ್ಯುಮೆಂಟರಿ': ಬುಮ್ರಾ ವೇಗದ ಹೊಡೆತಕ್ಕೆ ಪತರುಗುಟ್ಟಿದ ಪಾಕ್ ನಾಯಕ

ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು, ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!