ಸಂಸದ ತೇಜಸ್ವಿ ಸೂರ್ಯ online desk
ರಾಜ್ಯ

ಖ್ಯಾತ ಗಾಯಕಿ, ಭರತನಾಟ್ಯ ಕಲಾವಿದೆಯೊಂದಿಗೆ ಸಂಸದ Tejasvi Surya ವಿವಾಹ ನಿಶ್ಚಯ

ಶಾಸ್ತ್ರ ವಿಶ್ವವಿದ್ಯಾಲಯದಿಂದ ಬಯೋ ಇಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿಯನ್ನು ಪಡೆದಿರುವ ಗಾಯಕಿ ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತದಲ್ಲಿ ಎಂಎ ಪದವಿ ಪಡೆದಿದ್ದಾರೆ.

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದ್ದು most eligible bachelor ಎನಿಸಿಕೊಂಡಿರುವ ಯುವ ರಾಜಕಾರಣಿ ಕೆಲವೇ ತಿಂಗಳಲ್ಲಿ ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ.

ತೇಜಸ್ವಿ ಅವರಿಗೆ ಹಲವಾರು ಸಂದರ್ಭಗಳಲ್ಲಿ ಮದುವೆಯ ಮಾಧ್ಯಮಗಳು ಪ್ರಶ್ನೆಗಳನ್ನು ಕೇಳುತ್ತಿದ್ದವು. ಈ ವಿಷಯದ ಬಗ್ಗೆ ಅವರು ಮಾತನಾಡಿದ್ದು ಕಡಿಮೆ. ಈಗ ತೇಜಸ್ವಿ ಸೂರ್ಯ ಅವರ ವಿವಾಹದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ.

ಚೆನ್ನೈ ಮೂಲದ ಗಾಯಕಿ, ಭರತನಾಟ್ಯ ಕಲಾವಿದಯೂ ಆಗಿರುವ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ತೇಜಸ್ವಿ ಸೂರ್ಯ ವರಿಸಲಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ಅವರ ಎರಡೂ ಕುಟುಂಬಗಳು ಈಗಾಗಲೇ ಮಾತುಕತೆ ನಡೆಸಿ ಮದುವೆಗೆ ಒಪ್ಪಿಗೆ ನೀಡಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಶಿವಶ್ರೀ ಸ್ಕಂದಪ್ರಸಾದ್

ಶಾಸ್ತ್ರ ವಿಶ್ವವಿದ್ಯಾಲಯದಿಂದ ಬಯೋ ಇಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿಯನ್ನು ಪಡೆದಿರುವ ಶಿವಶ್ರೀ ಸ್ಕಂದಪ್ರಸಾದ್, ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತದಲ್ಲಿ ಎಂಎ ಪದವಿ ಪಡೆದಿದ್ದಾರೆ.

2025 ರ ಮಾರ್ಚ್ ನಲ್ಲಿ ತೇಜಸ್ವಿ ಸೂರ್ಯ-ಶಿವಶ್ರೀ ಸ್ಕಂದಪ್ರಸಾದ್ ವಿವಾಹ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT