ಬೆಂಗಳೂರು ಎಂಜಿ ರಸ್ತೆ 
ರಾಜ್ಯ

Happy New Year 2025: ಬೆಂಗಳೂರು ಸೇರಿ ರಾಜ್ಯಾದ್ಯಂತ ಹುರುಪಿನಿಂದ ಹೊಸವರ್ಷಕ್ಕೆ ಸ್ವಾಗತ!

ಬೆಂಗಳೂರೂ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಯುವ ಜನತೆ ಹುರುಪಿನಿಂದ ಹೊಸವರ್ಷವನ್ನು ಬರ ಮಾಡಿಕೊಂಡಿತು. ನಗರಗಳ ಗಲ್ಲಿ ಗಲ್ಲಿಯಲ್ಲೂ ಪಾರ್ಟಿಯ ಗುಂಗು ರಂಗೇರಿತ್ತು.

ಬೆಂಗಳೂರು: ಬೆಂಗಳೂರೂ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಯುವ ಜನತೆ ಹುರುಪಿನಿಂದ ಹೊಸವರ್ಷವನ್ನು ಬರ ಮಾಡಿಕೊಂಡಿತು. ನಗರಗಳ ಗಲ್ಲಿ ಗಲ್ಲಿಯಲ್ಲೂ ಪಾರ್ಟಿಯ ಗುಂಗು ರಂಗೇರಿತ್ತು. ಇಡೀ ದೇಶ 2024ಕ್ಕೆ ಗುಡ್‌ಬೈ ಹೇಳಿದ್ದು 2025 ಅನ್ನ ಭರ್ಜರಿಯಾಗಿ ಸ್ವಾಗತ ಮಾಡಿದರು. ಬೆಂಗಳೂರಿನ ಪ್ರಮುಖ ರಸ್ತೆ ಎಂ.ಜಿ ರೋಡ್ ಬ್ರಿಗೇಡ್ ರೋಡ್‌ ನಲ್ಲಿ ಯುವ ಸಮೂಹ ಬೀಡುಬಿಟ್ಟಿದ್ದು 12 ಗಂಟೆಯಾಗುತ್ತಿದ್ದಂತೆ ಕುಣಿದು ಕುಪ್ಪಳಿಸುತ್ತಾ ಹೊಸ ವರ್ಷವನ್ನು ಸ್ವಾಗತಿಸಿದರು.

ಯುವಕರು ಕುಡಿದು ಬೈಕ್ ವೀಲಿಂಗ್, ವೇಗದ ಚಾಲನೆ ಹಾಗೂ ಅಪಘಾತಗಳ ಅನಾಹುತಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಅನಾಹುತ ಆಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ರಾತ್ರಿ 11 ಗಂಟೆಯ ಬಳಿಕ ಬೆಂಗಳೂರು ನಗರದ ಬಹುತೇಕ ಎಲ್ಲಾ ಫ್ಲೈಓವರ್ ಗಳು ಬಂದ್ ಮಾಡಲಾಗಿತ್ತು. ಅದರಂತೆ ಸಂಗೊಳ್ಳಿ ರಾಯಣ್ಣ ಫ್ಲೈಓವರ್, ಶಿವನಗರ ಫ್ಲೈಓವರ್, ಯಶವಂತಪುರ ಫ್ಲೈಓವರ್, ಲೂಲು ಮಾಲ್ ಬಳಿಯ ಫ್ಲೈಓವರ್, ಮಾರ್ಕೆಟ್ ಫ್ಲೈಓವರ್ ಸೇರಿದಂತೆ ನಗರದ 40 ಫ್ಲೈಓವರ್​ಗಳು ಬಂದ್ ಮಾಡಲಾಗಿದ್ದು ನಾಳೆ ಬೆಳಿಗ್ಗೆ 6 ಗಂಟೆಗೆ ಓಪನ್ ಆಗಲಿವೆ.

ಮತ್ತೊಂದೆಡೆ ಬ್ರಿಗೇಡ್ ರಸ್ತೆ, ಎಂ.ಜಿ. ರಸ್ತೆ, ಚರ್ಚ್​ಸ್ಟ್ರೀಟ್​ನಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಹೆಚ್ಚು ಜನ ಸೇರುವ ಪ್ರದೇಶದಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದೇವೆ. ಸಿಸಿ ಕ್ಯಾಮರಾ ಮೂಲಕ ನಿಗಾ ವಹಿಸುತ್ತಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಹೇಳಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿದೆ. ಸಂಭ್ರಮಾಚರಣೆಯ ಖುಷಿಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸುವುದು ಕೂಡ ಅಗತ್ಯ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT