ಸಿಎಂ ಸಿದ್ದರಾಮಯ್ಯ 
ರಾಜ್ಯ

ಜಾತ್ಯತೀತರಾಗಿರಿ, ಸಂವಿಧಾನಕ್ಕೆ ಬದ್ಧರಾಗಿರಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ಧರಾಗಿರಬೇಕು: ಇಲ್ಲದಿದ್ದರೆ ಅಂತಹವರು ಅಧಿಕಾರದಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಎಚ್ಚರಿಕೆ ನೀಡಿದರು.

ಬೆಂಗಳೂರು: ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ಧರಾಗಿರಬೇಕು: ಇಲ್ಲದಿದ್ದರೆ ಅಂತಹವರು ಅಧಿಕಾರದಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಎಚ್ಚರಿಕೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದು ಹೇಳಿದರು.

ಅಧಿಕಾರಿಗಳ ಅನುಭವಗಳು ಸರ್ಕಾರದ ಕಲ್ಯಾಣ ಮತ್ತು ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸಲು ಜಿಲ್ಲಾಡಳಿತಗಳಿಗೆ ಸಹಾಯ ಮಾಡುತ್ತದೆ. ಕೆಲವು ಜಿಲ್ಲೆಗಳಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿಂದ ಗ್ಯಾರಂಟಿ ಯೋಜನೆಗಳ ಲಾಭ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಇಂತಹ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ಸಹಕರಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳು ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕು. ನಿಮ್ಮ ಮಟ್ಟದಲ್ಲಿ ಯಾವುದೇ ಸಮಸ್ಯೆ ಬಗೆಹರಿಯದಿದ್ದರೆ ಮುಖ್ಯ ಕಾರ್ಯದರ್ಶಿಗೆ ತಿಳಿಸಿ, ನಿಯಮ ಉಲ್ಲಂಘಿಸುವ ಜಿಲ್ಲಾ ಮಟ್ಟದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕೆಲಸದಲ್ಲಿ ಶಿಸ್ತು ಕಾಪಾಡಲು ಸಾಧ್ಯವಿಲ್ಲ ಎಂದರು.

ಇದೇ ವೇಳೆ ಯಾವುದೇ ವಿಳಂಬವಿಲ್ಲದೆ ಜನರ ಕುಂದುಕೊರತೆಗಳನ್ನು ಪರಿಹರಿಸಲಾಗುತ್ತಿದೆಯೇ ಎಂಬುದನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು. ಸರ್ಕಾರಿ ಶಾಲೆ, ಕಾಲೇಜು, ಹಾಸ್ಟೆಲ್, ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೀರಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ
5 ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ವೇಳೆ ಭರವಸೆ ನೀಡಿದರು.

ಫೆ.8ರಂದು ಜನಸ್ಪಂದನ ಕಾರ್ಯಕ್ರಮ
ಫೆ.8ರಂದು ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರಿಂದ ಬಂದಿರುವ ಅರ್ಜಿಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಇದೇ ವೇಳೆ ಸೂಚನೆ ನೀಡಿದರು.

ಅರ್ಜಿಗಳನ್ನು ತೆರವುಗೊಳಿಸಲು ವಿಫಲವಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆಯನ್ನೂ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT