ಸಂಗ್ರಹ ಚಿತ್ರ 
ರಾಜ್ಯ

ಸಂಸದ ಪ್ರತಾಪ್ ಸಿಂಹ ವಿರುದ್ಧ ಹೇಳಿಕೆ ನೀಡದಂತೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್‌'ಗೆ ಕೋರ್ಟ್ ಸೂಚನೆ

ಮೈಸೂರು-ಕೊಡುಗಿನ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ವಿರುದ್ಧ ಯಾವುದೇ ಮಾಧ್ಯಮ ಗೋಷ್ಠಿ ನಡೆಸಬಾರದು ಮತ್ತು ಅವರ ವಿರುದ್ಧ ಯಾವುದೇ ಮಾನಹಾನಿಕಾರಕ ಮಾಹಿತಿಯನ್ನು ಹಂಚಿಕೊಳ್ಳದಂತೆ ಕಾಂಗ್ರೆಸ್‌ ವಕ್ತಾರ ಎಂ ಲಕ್ಷ್ಮಣ್‌ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ.

ಬೆಂಗಳೂರು: ಮೈಸೂರು-ಕೊಡುಗಿನ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ವಿರುದ್ಧ ಯಾವುದೇ ಮಾಧ್ಯಮ ಗೋಷ್ಠಿ ನಡೆಸಬಾರದು ಮತ್ತು ಅವರ ವಿರುದ್ಧ ಯಾವುದೇ ಮಾನಹಾನಿಕಾರಕ ಮಾಹಿತಿಯನ್ನು ಹಂಚಿಕೊಳ್ಳದಂತೆ ಕಾಂಗ್ರೆಸ್‌ ವಕ್ತಾರ ಎಂ ಲಕ್ಷ್ಮಣ್‌ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ.

ಪ್ರತಾಪ್‌ ಸಿಂಹ ಅವರು ದಾಖಲಿಸಿರುವ ಮೂಲ ದಾವೆಯ ವಿಚಾರಣೆಯನ್ನು 9ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎ ಹರೀಶ ಅವರು ನಡೆಸಿದರು.

“ಫಿರ್ಯಾದಿ ಪ್ರತಾಪ್‌ ಸಿಂಹ ವಿರುದ್ಧ ಲಕ್ಷ್ಮಣ್‌ ಅವರು ಯಾವುದೇ ತೆರನಾದ ಮಾಧ್ಯಮ ಗೋಷ್ಠಿ ನಡೆಸಬಾರದು. ಆಡಿಯೊ ವಿಧಾನದಲ್ಲಿ, ಮುದ್ರಣ ಮಾಧ್ಯಮವಾದ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮ, ಸ್ಥಳೀಯ ಕೇಬಲ್‌ ಆಪರೇಟರ್‌, ಇಂಟರ್‌ನೆಟ್‌, ವೆಬ್‌ಸೈಟ್‌, ರೇಡಿಯೊ ಚಾನೆಲ್‌, ಸಾಮಾಜಿಕ ಮಾಧ್ಯಮ ಇತ್ಯಾದಿಗಳಲ್ಲಿ ಸುಳ್ಳು, ದುರುದ್ದೇಶಪೂರಿತ, ಮಾನಹಾನಿಯಾಗುವ ಮಾಹಿತಿಯನ್ನು ಪ್ರತಾಪ್‌ ಸಿಂಹ ಅವರ ವಿರುದ್ಧ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಮುಂದಿನ ವಿಚಾರಣೆಯವರೆಗೆ ಹಂಚಿಕೊಳ್ಳಬಾರದು. ಲಕ್ಷ್ಮಣ್‌ ಅವರಿಗೆ ಸಮನ್ಸ್‌ ಜಾರಿ ಮಾಡಲಾಗಿದೆ” ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದ್ದು, ವಿಚಾರಣೆಯನ್ನು ಫೆಬ್ರವರಿ 13ಕ್ಕೆ ಮುಂದೂಡಿದೆ.

ಪ್ರತಾಪ್‌ ಸಿಂಹ ಅವರ ಪರವಾಗಿ ವಕೀಲ ಎಂ ಸುದರ್ಶನ್‌ ಸುರೇಶ್‌ ಅವರು ವಕಾಲತ್ತು ಹಾಕಿದ್ದಾರೆ.

ಕೆಪಿಸಿಸಿ ವಕ್ತಾರ ಲಕ್ಷ್ಮಣ್‌ ಅವರು ಮೈಸೂರಿನಲ್ಲಿ ಮಾಧ್ಯಮ ಗೋಷ್ಠಿ ನಡೆಸುವ ಮೂಲಕ ಪ್ರತಾಪ್‌ ಸಿಂಹ ಅವರ ವಿರುದ್ಧ ಮೇಲಿಂದ ಮೇಲೆ ಮೊನಚಿನ ದಾಳಿ ನಡೆಸುತ್ತಿದ್ದನ್ನು ಇಲ್ಲಿ ನೆನೆಯಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT