ಸುರೇಶ್ 
ರಾಜ್ಯ

ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾ ಸಿಬ್ಬಂದಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾ ಸಿಬ್ಬಂದಿಯೊಬ್ಬರ ಶವ ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ರಾಮನಗರ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾ ಸಿಬ್ಬಂದಿಯೊಬ್ಬರ ಶವ ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತಾಲೂಕು ಕಚೇರಿಯ ಚುನಾವಣಾ ಶಾಖೆ ಕೊಠಡಿಯಲ್ಲಿ ಶಿರಸ್ತೇದಾರ್ ಸುರೇಶ್(45) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾದ್ದರಿಂದ ಕನಕಪುರ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. 

ಘಟನಾ ಸ್ಥಳಕ್ಕೆ ರಾಮನಗರ ಎಸ್ ಪಿ ಕಾರ್ತಿಕ್ ರೆಡ್ಡಿ ಹಾಗೂ ಕನಕಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಡೆತ್ ನೋಟ್ ಸಿಕ್ಕಿದ್ದು, ಅದನ್ನು ಕೂಡ ಪರಿಶೀಲನೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!