ಸಂಗ್ರಹ ಚಿತ್ರ 
ರಾಜ್ಯ

ಮತದಾರರಿಗೆ ಗ್ಯಾರಂಟಿ ಭಾಗ್ಯಗಳ ಆಮಿಷ: ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ 'ಹೈ' ನೋಟಿಸ್‌

ಚುನಾವಣೆ ವೇಳೆ ಮತದಾರರಿಗೆ ಗ್ಯಾರಂಟಿ ಭಾಗ್ಯಗಳ ಆಮಿಷವೊಡ್ಡಿ ಮತ ಪಡೆಯುವ ರಾಜಕೀಯ ಪಕ್ಷಗಳ ಮಾದರಿಗೆ ಕರ್ನಾಟಕ ರಾಜ್ಯ ಅವಕಾಶ ಮಾಡಿಕೊಟ್ಟಿದ್ದು, ಇಂತಹ ನಡೆ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು’ ಎಂಬ ಮನವಿಗೆ ಹೈಕೋರ್ಟ್‌ ಸ್ಪಂದಿಸಿದೆ.

ಬೆಂಗಳೂರು: ಚುನಾವಣೆ ವೇಳೆ ಮತದಾರರಿಗೆ ಗ್ಯಾರಂಟಿ ಭಾಗ್ಯಗಳ ಆಮಿಷವೊಡ್ಡಿ ಮತ ಪಡೆಯುವ ರಾಜಕೀಯ ಪಕ್ಷಗಳ ಮಾದರಿಗೆ ಕರ್ನಾಟಕ ರಾಜ್ಯ ಅವಕಾಶ ಮಾಡಿಕೊಟ್ಟಿದ್ದು, ಇಂತಹ ನಡೆ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು’ ಎಂಬ ಮನವಿಗೆ ಹೈಕೋರ್ಟ್‌ ಸ್ಪಂದಿಸಿದೆ.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಗ್ಯಾರಂಟಿ ರೂಪದಲ್ಲಿ ಆಮಿಷವೊಡ್ಡಲಾಗಿದ್ದು, ಅಂತಹ ಅಕ್ರಮಗಳನ್ನು ತಡೆಯುವಂತೆ ಸರ್ಕಾರಗಳು ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಚುನಾವಣೆಗೂ ಮುನ್ನ ಮತ್ತು ನಂತರ ಭ್ರಷ್ಟಾಚಾರ ಚಟುವಟಿಕೆ ನಿರ್ಬಂಧಿಸಲು ನೀತಿ ಸಂಹಿತೆಯ ಜೊತೆ ಕಠಿಣವಾದ ಜಾರಿಗೊಳಿಸಬಹುದಾದ ಮಾರ್ಗಸೂಚಿ ರೂಪಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ನಿಖಿಲ್‌, ಗೌತಮ್‌ ಗೌಡ,, ಪ್ರಸಾದ್‌ ಕೆ ಆರ್‌ ಮತ್ತು ಎ ಮಂಜುನಾಥ್‌ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠವು ಪ್ರತಿವಾದಿಗಳಾದ ಕೇಂದ್ರದ ಕಾನೂನು ಇಲಾಖೆ, ಕೇಂದ್ರ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿತು.

ಅರ್ಜಿದಾರರ ಪರ ವಕೀಲರು, ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ವೇಳೆ ಆಧುನಿಕ ತಂತ್ರಜ್ಞಾನ ಬಳಸಿ ಮತದಾರರಿಗೆ ಆಮಿಷ ಒಡ್ಡಲಾಗಿತ್ತು. ನಿಯಮಗಳನ್ನು ಉಲ್ಲಂಘಿಸಿ ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡಿ ಆಮಿಷ ಒಡ್ಡಲಾಗಿತ್ತು. ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ. ಅದೇ ಮಾದರಿಯನ್ನು ಇದೀಗ ಎಲ್ಲಾ ರಾಜ್ಯಗಳೂ ಸಹ ಅನುಕರಿಸುತ್ತಿವೆ. ಹೀಗಾಗಿ, ಕರ್ನಾಟಕ ಮಾದರಿಯನ್ನು ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯಕ್ಕೆ ಕೋರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೌಜನ್ಯ ಕೇಸ್‌ ಮರು ತನಿಖೆಗೆ ಸುಪ್ರೀಂ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದು ಏನು?

ಮಾಗಡಿ: ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ ಸ್ವಾಮೀಜಿ ಲಿಂಗೈಕ್ಯ

ರಾಮ ಮಂದಿರದಲ್ಲಿ ಕಳ್ಳತನದ 105 ಘಟನೆ ಸಿಸಿಟಿವಿಯಲ್ಲಿ ಪತ್ತೆ: ಸುಪ್ರೀಂ ಕೋರ್ಟ್‌ಗೆ ಎಸ್‌ಐಟಿ ಮಾಹಿತಿ

5 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರಿನ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ!

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚನೆ; ಹೈಕೋರ್ಟ್​​ನಿಂದ ಮಹತ್ವದ ಆದೇಶ